PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಕರಾವಳಿ ಬೆನ್ನಲ್ಲೇ ಮಲೆನಾಡು ಪ್ರವಾಸೋದ್ಯಮಕ್ಕೆ ವಿಶೇಷ ಪ್ಯಾಕೇಜ್: ಸಿಎಂ ಘೋಷಣೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಜಿಲ್ಲೆ > ಕರಾವಳಿ ಬೆನ್ನಲ್ಲೇ ಮಲೆನಾಡು ಪ್ರವಾಸೋದ್ಯಮಕ್ಕೆ ವಿಶೇಷ ಪ್ಯಾಕೇಜ್: ಸಿಎಂ ಘೋಷಣೆ
ಜಿಲ್ಲೆಮುಖಪುಟ

ಕರಾವಳಿ ಬೆನ್ನಲ್ಲೇ ಮಲೆನಾಡು ಪ್ರವಾಸೋದ್ಯಮಕ್ಕೆ ವಿಶೇಷ ಪ್ಯಾಕೇಜ್: ಸಿಎಂ ಘೋಷಣೆ

Prathinidhi News
Last updated: September 19, 2026 6:34 pm
Prathinidhi News
Published September 19, 2026
Share
SHARE

ಶಿವಮೊಗ್ಗ : ಮಲೆನಾಡಿನ ಸಮಗ್ರ ಅಭಿವೃದ್ಧಿಗೆ ವಿಶೇಷ ಗಮನ ಹರಿಸಿ, ಈ ಭಾಗಕ್ಕೆ ಆರ್ಥಿಕ ಶಕ್ತಿ ತುಂಬಲು ಪ್ರವಾಸೋದ್ಯಮಕ್ಕೆ ವಿಶೇಷ ಪ್ಯಾಕೇಜ್ ನೀಡಲು ಸರ್ಕಾರ ತೀರ್ಮಾನಿಸಿದೆ. ಜಿಲ್ಲಾ ಉಸ್ತುವಾರಿ ಸಚಿವರು ತಿಂಗಳಿಗೆ ಕಡ್ಡಾಯವಾಗಿ ಎರಡು ಬಾರಿ ಜಿಲ್ಲೆಗೆ ಭೇಟಿ ನೀಡಿ ಪ್ರಜಾಸೇವೆ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು’ ಎಂದು ಸಿಎಂ ಡಿಕೆ ಶಿವಕುಮಾರ್​​ ಸೂಚನೆ ನೀಡಿದ್ದಾರೆ.

ಇಂದು ತೀರ್ಥಹಳ್ಳಿ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ 75ನೇ ವರ್ಷದ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್​, ‘ನಮ್ಮ ಸರ್ಕಾರ ಸಂಪೂರ್ಣವಾಗಿ ರೈತರ ಪರವಾಗಿದ್ದು, ರೈತರಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು’ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

‘ಪಾರಂಪರಿಕ ಕೃಷಿಗೆ ಸರ್ಕಾರ ಯಾವುದೇ ಅಡ್ಡಿ ಮಾಡುವುದಿಲ್ಲ. ಮಲೆನಾಡಿನ ರೈತರಿಗೆ ಹೊಸದಾಗಿ ನೋಟಿಸ್ ಜಾರಿ ಮಾಡದಂತೆ ಅಧಿಕಾರಿಗಳಿಗೆ ಹೇಳುವೆ. ಅಕ್ರಮ-ಸಕ್ರಮ (94ಸಿ) ವಿಚಾರವಾಗಿ ಶೀಘ್ರದಲ್ಲೇ ಪ್ರತ್ಯೇಕ ಸಭೆ ಮಾಡಲಾಗುವುದು. ಶಾಸಕರು ಈ ಬಗ್ಗೆ ಅಧಿವೇಶನದಲ್ಲಿ ಚರ್ಚೆ ನಡೆಸಲಿ’ ಎಂದು ಅವರು ಹೇಳಿದರು.

‘ತೇಗದ ಸಿರಿ’ ಹೊಸ ಯೋಜನೆ: ರೈತರಿಗೆ ಶೇ. 70ರಷ್ಟು ಲಾಭಾಂಶ

‘ರೈತರ ಆದಾಯ ಹೆಚ್ಚಿಸಲು ಸರ್ಕಾರ ‘ತೇಗದ ಸಿರಿ’ ಎಂಬ ವಿನೂತನ ಯೋಜನೆಯನ್ನು ಜಾರಿಗೆ ತಂದಿದೆ ಈ ಯೋಜನೆಯಡಿ ರೈತರ ಜಮೀನುಗಳಲ್ಲಿ ಗಿಡಗಳನ್ನು ಬೆಳೆಸಲು ನಾವು ಕೊಡುತ್ತೇವೆ. ನಂತರ ಆ ಮರಗಳನ್ನು ಬೆಳೆದು ಮಾರಾಟ ಮಾಡಿದಾಗ ಶೇ. 70ರಷ್ಟು ಪಾಲು ರೈತರಿಗೆ ಹಾಗೂ ಶೇ. 30ರಷ್ಟು ಪಾಲು ಸರ್ಕಾರಕ್ಕೆ ಸಿಗಲಿದೆ. ಜನರ ಬದುಕಿಗೆ ಶಕ್ತಿ ತುಂಬಲು ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ’ ಎಂದು ಅವರು ತಿಳಿಸಿದರು.

- ಜಾಹೀರಾತು -
TAGGED:DKSHIVAKUMARshivamogga
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ದೇಶ-ವಿದೇಶಮುಖಪುಟ

ದುಬೈ : ವಿಶ್ವದ ಅತಿದೊಡ್ಡ ವಾಯುಯಾನ ಪ್ರದರ್ಶನದಲ್ಲಿ ತೇಜಸ್‌ ಯುದ್ಧ ವಿಮಾನ ಪತನ !

November 22, 2025
ಬೆಂಗಳೂರುಮುಖಪುಟ

ಹವಾಮಾನ ವರದಿ : ರಾಜ್ಯದ ವಿವಿದೆಡೆ ಇಂದು ಸಾಧಾಅರಣ ಮಳೆಯಾಗುವ ಸಾಧ್ಯತೆ

January 2, 2026
ಮಂಡ್ಯಮುಖಪುಟ

ರಾಷ್ಟ್ರಪತಿ ದ್ರೌಪದಿ ಮರ್ಮು ಕಾರ್ಯಕ್ರಮದಲ್ಲಿ ಭದ್ರತಾ ಲೋಪ..? ಮಾಜಿ ರೌಡಿ ಶೀಟರ್ ಪ್ರಕಾಶ್ ಗೆ ಮೀಡಿಯಾ ಎಂಟ್ರಿ ಪಾಸ್ ವಿತರಿಸಿದ ಜಿಲ್ಲಾಡಳಿತ..!

December 16, 2025
ಮುಖಪುಟಮೈಸೂರು ನಗರ

ಚಾಮುಂಡಿ ಬೆಟ್ಟದಲ್ಲಿ ಆಷಾಢದ ಸಂಭ್ರಮ; ಭಕ್ತಾಧಿಗಳಿಗೆ ಯಾವುದೇ ಅನಾನುಕೂಲವಾಗದಂತೆ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಿ – ಯತೀಂದ್ರ ಸಿದ್ದರಾಮಯ್ಯ

July 1, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?