PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಚಿಕ್ಕಮಗಳೂರಿನಲ್ಲಿ ನಕಲಿ ಲೇಡಿ PSI ಬಂಧನ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಜಿಲ್ಲೆ > ಚಿಕ್ಕಮಗಳೂರಿನಲ್ಲಿ ನಕಲಿ ಲೇಡಿ PSI ಬಂಧನ
ಜಿಲ್ಲೆಮುಖಪುಟ

ಚಿಕ್ಕಮಗಳೂರಿನಲ್ಲಿ ನಕಲಿ ಲೇಡಿ PSI ಬಂಧನ

Prathinidhi News
Last updated: September 30, 2026 7:16 pm
Prathinidhi News
Published September 30, 2026
Share
SHARE

ಚಿಕ್ಕಮಗಳೂರು, ಸೆ.30: ತಾನು ಬೆಂಗಳೂರಿನ ಪೊಲೀಸ್ ಸಬ್ ಇನ್‌‌ಸ್ಪೆಕ್ಟರ್ (PSI) ಎಂದು ಸುಳ್ಳು ಹೇಳಿ, ಸಾರ್ವಜನಿಕರಿಂದ ಕೋಟ್ಯಾಂತರ ರೂಪಾಯಿ ಹಣ, ಚಿನ್ನ ಹಾಗೂ ಐಷಾರಾಮಿ ಕಾರುಗಳನ್ನು ಪಡೆದು ಭಾರಿ ವಂಚನೆ ಎಸಗುತ್ತಿದ್ದ ಖತರ್ನಾಕ್ ನಕಲಿ ಲೇಡಿ ಪಿಎಸ್‌ಐ ಪ್ರಮುಖ ಆರೋಪಿಯನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ. ರಾಮನಗರ ಮೂಲದ ನಿವೇದಿತಾ ಗೌಡ ಬಂಧಿತ ಆರೋಪಿಯಾಗಿದ್ದು, ಈಕೆಯಿಂದ ವಂಚನೆಗೊಳಗಾದ 25ಕ್ಕೂ ಹೆಚ್ಚು ಸಂತ್ರಸ್ತರು ದೂರು ನೀಡಿದ ಹಿನ್ನೆಲೆಯಲ್ಲಿ ಬಸವನಹಳ್ಳಿ ಹಾಗೂ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ನಿವೇದಿತಾ ಗೌಡ ಮೂಲತಃ ರಾಮನಗರದವಳಾಗಿದ್ದು, ಕಳೆದ ಒಂದು ವರ್ಷದಿಂದ ಚಿಕ್ಕಮಗಳೂರಿನ ಪ್ರಮುಖ ವಾಣಿಜ್ಯ ಪ್ರದೇಶವಾದ ಐ.ಜಿ. ರಸ್ತೆಯಲ್ಲಿ ಕೆಫೆಯೊಂದನ್ನು ನಡೆಸುತ್ತಿದ್ದಳು. ಸಾರ್ವಜನಿಕರಿಗೆ ಅನುಮಾನ ಬಾರದಂತೆ ತಾನು ಬೆಂಗಳೂರಿನ ರಾಜಗೋಪಾಲನಗರ ಪೊಲೀಸ್ ಠಾಣೆಯ ಪಿಎಸ್‌ಐ ಎಂದು ಪರಿಚಯಿಸಿಕೊಳ್ಳುತ್ತಿದ್ದಳು. ಜನರು ನಂಬಲಿ ಎನ್ನುವ ಕಾರಣಕ್ಕೆ ಪೊಲೀಸರ ರೀತಿಯೇ ಶಾರ್ಟ್ ಕಟಿಂಗ್ ಮಾಡಿಸಿಕೊಂಡು, ಖಾಕಿ ಯೂನಿಫಾರ್ಮ್ ಮಾದರಿಯ ಉಡುಪು ಧರಿಸುತ್ತಿದ್ದಳು. ಕೆಫೆಗೆ ಬರುವ ಗ್ರಾಹಕರು, ಮಹಿಳೆಯರು ಹಾಗೂ ಯುವಕರನ್ನೇ ಪ್ರಮುಖ ಟಾರ್ಗೆಟ್ ಮಾಡುತ್ತಿದ್ದ ಈಕೆ, “ತಾನು ಪ್ರಸ್ತುತ ಕರ್ತವ್ಯಕ್ಕೆ ರಜೆ ಹಾಕಿ ಚಿಕ್ಕಮಗಳೂರಿಗೆ ಬಂದಿದ್ದೇನೆ” ಎಂದು ಕಥೆ ಕಟ್ಟಿ ನಂಬಿಸುತ್ತಿದ್ದಳು.

TAGGED:#crimechikkamagaluru
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಕ್ರೈಂ ಸುದ್ದಿಗಳುಮುಖಪುಟಮೈಸೂರು ನಗರ

ಮೈಸೂರು : ಕಾರಾಗೃಹದಲ್ಲಿ “ಖಾಕಿ” ತಲಾಶ್..! ಪೊಲೀಸರಿಂದ ಗಾಂ*ಜಾ, ಮೊಬೈಲ್ ಸೀಜ್..!

November 26, 2025
ಮುಖಪುಟಮೈಸೂರು ನಗರ

ದಸರಾ ಮಹೋತ್ಸವದಲ್ಲಿ ಕಂಬಳ ಆಯೋಜಿಸುವುದು ಬೇಡ : ರಾಜಮಾತೆ ಪ್ರಮೋದಾದೇವಿ ಒಡೆಯರ್​

September 24, 2026
ಜಿಲ್ಲೆಮುಖಪುಟ

ಕರಾವಳಿ ಬೆನ್ನಲ್ಲೇ ಮಲೆನಾಡು ಪ್ರವಾಸೋದ್ಯಮಕ್ಕೆ ವಿಶೇಷ ಪ್ಯಾಕೇಜ್: ಸಿಎಂ ಘೋಷಣೆ

September 19, 2026
ಮುಖಪುಟರಾಜಕೀಯ

ಕಾಂಗ್ರೆಸ್ ಕುರ್ಚಿ ಜಗಳ ; “ಕೈ” ನಾಯಕರಿಗೆ ಸಖತ್ತಾಗಿಯೇ ಟಾಂಗ್ ನೀಡಿದ ಬಿ ವೈ ವಿಜಯೇಂದ್ರ ..!

November 4, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?