ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಆಯೋಜಿಸುವುದು ಬೇಡ’ ಎಂದು ರಾಜಮಾತೆ ಪ್ರಮೋದಾದೇವಿ ಒಡೆಯರ್ ಹೇಳಿದ್ದಾರೆ. ಖಾಸಗಿ ದರ್ಬಾರ್ ಬಗ್ಗೆ ಮಾಹಿತಿ ನೀಡಿ ಮಾತನಾಡಿದ ಅವರು, ‘ಮಂಗಳೂರು ಭಾಗದ ಕಂಬಳಕ್ಕೆ ತನ್ನದೇ ಆದ ವೈಶಿಷ್ಟ್ಯ ಹಾಗೂ ಪ್ರಾಮುಖ್ಯತೆ ಇದ್ದು, ಅದನ್ನು ಕಾಪಾಡಬೇಕಿದೆ. ದಸರಾದಲ್ಲಿ ಕಂಬಳ ಆಯೋಜಿಸಿದರೆ ಅದಕ್ಕೆ ಸೂಕ್ತ ಪ್ರಾಮುಖ್ಯತೆ ಸಿಗುವುದಿಲ್ಲ, ಬದಲಾಗಿ ದಸರಾ ಮುಗಿದ ನಂತರ ಪ್ರತ್ಯೇಕವಾಗಿ ಕಂಬಳವನ್ನು ಆಯೋಜಿಸಬಹುದಿತ್ತು. ದಸರಾದಲ್ಲಿ ಕಂಬಳ ಆಯೋಜಿಸುವ ಕುರಿತು ಸರ್ಕಾರ ನಮ್ಮ ಅಭಿಪ್ರಾಯ ಕೇಳಿಲ್ಲ’ ಎಂದು ಹೇಳಿದ್ದಾರೆ.
