ಮೈಸೂರು, ನವೆಂಬರ್ 09: ನವೆಂಬರ್ 13ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದು, ಮುಂಡಿ ಬೆಟ್ಟದ ತಪ್ಪಲಿನಲ್ಲಿ ನಿರ್ಮಿಸಿರುವ ಡೋಮ್ ಸ್ಕ್ರೀನ್ ಎಲ್ಇಡಿ ಮಾದರಿಯ ಮೊದಲ ತಾರಾಲಯ ಉದ್ಘಾಟಿಸಲಿದ್ದಾರೆ ಎಂದು ಸಂಸದ ಯದುವೀರ್ ಒಡೆಯರ್ ಮಾಹಿತಿ ನೀಡಿದ್ದಾರೆ. ವಿದ್ಯಾರ್ಥಿಗಳು ತರಬೇತಿ ಪಡೆಯಲು ಈ ತಾರಾಲಯ ಅನುಕೂಲವಾಗಲಿದೆ ಎಂದವರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಪಿಂಕ್ ಲೈನ್ ಉದ್ಘಾಟನೆ ಬಳಿಕ ಅವರು ಮೈಸೂರಿಗೆ ಭೇಟಿ ನೀಡಲಿದ್ದಾರೆ. ಮಿಯಾವಾಕಿ ಅರಣ್ಯ ಮತ್ತು 115 ಕೋಟಿ ವೆಚ್ಚದ ತಾರಾಲಯ ಉದ್ಘಾಟಿಸಲಿದ್ದಾರೆ ಎಂದು ಸಂಸದರು ಹೇಳಿದ್ದಾರೆ.
