ಮೈಸೂರು : ಪ್ರಧಾನಿ ನರೇಂದ್ರ ಮೋದಿ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಿರ್ಮಾಣವಾಗಿರುವ ವಿಶ್ವದ ಮೊದಲ ಟಿಲ್ಟೆಡ್ ಎಲ್ಇಡಿ ಡೋಮ್ ಪ್ಲಾನೆಟೋರಿಯಂ ಅನ್ನು ಲೋಕಾರ್ಪಣೆ ಮಾಡಲಿದ್ದಾರೆ.ಮೈಸೂರು ವಿಶ್ವವಿದ್ಯಾನಿಲಯದ ಶ್ರೀ ಜಯಚಾಮರಾಜ ಒಡೆಯರ್ ಉನ್ನತ ಕಲಿಕಾ ಕೇಂದ್ರದ ಆವರಣದಲ್ಲಿ ಅತ್ಯಾಧುನಿಕ ತಾರಾಲಯ ನಿರ್ಮಾಣವಾಗಿದೆ. ಇದಕ್ಕಾಗಿ ವಿಶ್ವವಿದ್ಯಾನಿಲಯ ಮೂರು ಎಕರೆ ಜಾಗ ನೀಡಿದ್ದು, ಬರೋಬ್ಬರಿ 91 ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆ ಸಾಕಾರಗೊಂಡಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ MPLADS ನಿಧಿ ಸೇರಿದಂತೆ ಕೇಂದ್ರದ ವಿವಿಧ ಇಲಾಖೆಗಳ ಸಹಯೋಗದಲ್ಲಿ ಈ ಯೋಜನೆ ರೂಪುಗೊಂಡಿದೆ.