ನವದೆಹಲಿ, ಸೆಪ್ಟೆಂಬರ್ 15: ಚಿನ್ನದ ಬೆಲೆ ಸತತ ಎರಡನೇ ದಿನ ತಗ್ಗಿದೆ. ಮಂಗಳವಾರವಾದ ಇಂದು ಬಂಗಾರದ ದರ ಗ್ರಾಮ್ಗೆ 85 ರೂ ಕಡಿಮೆ ಆಗಿದೆ. ಎರಡು ದಿನದಲ್ಲಿ ಅದರ ಬೆಲೆಯಲ್ಲಿ 130 ರೂ ಇಳಿಕೆಯಾಗಿದೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲಿ ಹೆಚ್ಚಿನ ಕಡೆ ಬೆಲೆ ಇಳಿದಿದೆ. ಅಂತಾರಾಷ್ಟ್ರೀಯ ಸ್ಪಾಟ್ ಚಿನ್ನ ಮತ್ತು ಬೆಳ್ಳಿ ಬೆಲೆಗಳು ತಗ್ಗಿವೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,41,250 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,54,090 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,41,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 24,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 25,000 ರೂ ಇದೆ.
