ಬೆಂಗಳೂರು, (ಸೆಪ್ಟೆಂಬರ್ 27): ಬೆಂಗಳೂರಿನಲ್ಲಿ ಇಂದು(ಬುಧವಾರ) ಬೆಳ್ಳಂಬೆಳಗ್ಗೆ ಐಟಿ ದಾಳಿಯಾಗಿದೆ. 10ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ( ತಂಡ ನಗರದ ಹುಳಿಮಾವು, ಬಾಗ್ ಮನೆ ಟೆಕ್ ಪಾರ್ಕ್ ಸೇರಿದಂತೆ ಐದು ಕಡೆ ದಾಳಿ ಮಾಡಿದೆ. ತೆರಿಗೆ ವಂಚನೆ ಆರೋಪದ ಮೇಲೆ ಹುಳಿಮಾವು ಸಮೀಪದ ಆಪಸ್ ಅಪಾರ್ಟ್ಮೆಂಟ್ ಮೇಲೆ ಐಡಿ ಅಧಿಕಾರಿಗಳು ದಾಳಿ ಮಾಡಿದ್ದು, ಕಡತಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.