PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಬೆಸ್ಕಾಂ ಗ್ರಾಹಕರಿಗೆ ಗುಡ್‌ನ್ಯೂಸ್! 2027ರ ಏಪ್ರಿಲ್‌ನಿಂದ ಪ್ರತಿ ಯೂನಿಟ್‌ಗೆ 35 ಪೈಸೆ ಮರುಪಾವತಿ..!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಜಿಲ್ಲೆ > ಬೆಸ್ಕಾಂ ಗ್ರಾಹಕರಿಗೆ ಗುಡ್‌ನ್ಯೂಸ್! 2027ರ ಏಪ್ರಿಲ್‌ನಿಂದ ಪ್ರತಿ ಯೂನಿಟ್‌ಗೆ 35 ಪೈಸೆ ಮರುಪಾವತಿ..!
ಜಿಲ್ಲೆಬೆಂಗಳೂರುಮುಖಪುಟ

ಬೆಸ್ಕಾಂ ಗ್ರಾಹಕರಿಗೆ ಗುಡ್‌ನ್ಯೂಸ್! 2027ರ ಏಪ್ರಿಲ್‌ನಿಂದ ಪ್ರತಿ ಯೂನಿಟ್‌ಗೆ 35 ಪೈಸೆ ಮರುಪಾವತಿ..!

Prathinidhi News
Last updated: November 27, 2026 6:29 pm
Prathinidhi News
Published November 27, 2026
Share
SHARE

ಬೆಂಗಳೂರು, ನವೆಂಬರ್ 27: ವಿದ್ಯುತ್ ಬಿಲ್ ಏರಿಕೆಯಿಂದ ಕಂಗಾಲಾಗಿರುವ ಬೆಸ್ಕಾಂ ಗ್ರಾಹಕರಿಗೆ ಸಿಹಿಸುದ್ದಿ ಸಿಕ್ಕಿದೆ. 2027ರ ಏಪ್ರಿಲ್‌ನಿಂದ ವಿದ್ಯುತ್ ಬಳಕೆದಾರರಿಗೆ ಪ್ರತಿ ಯೂನಿಟ್‌ಗೆ 35 ಪೈಸೆಯಷ್ಟು ಹಣವನ್ನು ಮರುಪಾವತಿ ಮಾಡುವ ಪ್ರಸ್ತಾವನೆ ಇದೆ. ವಿದ್ಯುತ್ ಸರಬರಾಜು ಕಂಪನಿಗಳು ಗಳಿಸಿರುವ ಲಾಭದ ಒಂದು ಭಾಗವನ್ನು ಗ್ರಾಹಕರಿಗೆ ಮರಳಿಸಲು ನಿರ್ಧರಿಸಿವೆ. ಕರ್ನಾಟಕದ ಬಹುತೇಕ ವಿದ್ಯುತ್ ಸರಬರಾಜು ಕಂಪನಿಗಳ ವ್ಯಾಪ್ತಿಯ ಗ್ರಾಹಕರಿಗೆ ಪ್ರತಿ ಯೂನಿಟ್‌ಗೆ 16 ಪೈಸೆ ಮರುಪಾವತಿ ಸಿಗುವ ನಿರೀಕ್ಷೆಯಿದೆ. ಆದರೆ ಬೆಸ್ಕಾಂ ವ್ಯಾಪ್ತಿಯ ಗ್ರಾಹಕರಿಗೆ ಹೆಚ್ಚಿನ ಪ್ರಯೋಜನ ದೊರೆಯಲಿದೆ. ಈ ಪ್ರಸ್ತಾವನೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ ಅನುಮೋದನೆ ದೊರೆಯಬೇಕಿದೆ.

ಬೆಸ್ಕಾಂ ಗ್ರಾಹಕರಿಗೆ ಪ್ರತಿ ಯೂನಿಟ್‌ಗೆ 35 ಪೈಸೆ ರಿಲೀಫ್!

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯಲ್ಲಿ ಬೆಂಗಳೂರು ನಗರ ಸೇರಿದಂತೆ ಎಂಟು ಜಿಲ್ಲೆಗಳಿವೆ. ಈ ವ್ಯಾಪ್ತಿಯ ಗ್ರಾಹಕರಿಗೆ ಪ್ರತಿ ಯೂನಿಟ್‌ಗೆ 35 ಪೈಸೆ ಮರುಪಾವತಿ ನೀಡುವ ಪ್ರಸ್ತಾವನೆಯನ್ನು ಬೆಸ್ಕಾಂ ಮುಂದಿಟ್ಟಿದೆ. 2027ರ ಏಪ್ರಿಲ್‌ನಿಂದ ಆರಂಭವಾಗುವ ಬಿಲ್‌ನಲ್ಲಿ ಈ ಪ್ರಯೋಜನ ಸಿಗುವ ನಿರೀಕ್ಷೆಯಿದೆ. ಈ ಮರುಪಾವತಿ 12 ತಿಂಗಳ ಅವಧಿಗೆ ಅನ್ವಯವಾಗಲಿದೆ.

ಇನ್ನು ಕರ್ನಾಟಕದ ಇತರ ಬಹುತೇಕ ವಿದ್ಯುತ್ ಸರಬರಾಜು ಕಂಪನಿಗಳ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್‌ಗೆ 16 ಪೈಸೆ ಮರುಪಾವತಿ ಸಿಗಲಿದೆ. ಆದರೆ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ (HESCOM) ವ್ಯಾಪ್ತಿಯ ಉತ್ತರ ಕರ್ನಾಟಕದ ಏಳು ಜಿಲ್ಲೆಗಳಿಗೆ ಈ ಪ್ರಯೋಜನ ಇರುವುದಿಲ್ಲ. ಕಳೆದ ಹಣಕಾಸು ವರ್ಷದಲ್ಲಿ ಲಾಭ ಗಳಿಸದ ಹಿನ್ನೆಲೆಯಲ್ಲಿ ಹೆಸ್ಕಾಂ ಗ್ರಾಹಕರಿಗೆ ಮರುಪಾವತಿ ನೀಡುವ ಬದಲು ಪ್ರತಿ ಯೂನಿಟ್‌ಗೆ ಕೆಲವು ಪೈಸೆಗಳಷ್ಟು ದರ ಏರಿಕೆ ಮಾಡುವ ಪ್ರಸ್ತಾವನೆ ಸಲ್ಲಿಸುವ ಸಾಧ್ಯತೆಯಿದೆ.

ವಿದ್ಯುತ್ ಖರೀದಿ ವೆಚ್ಚ ಕಡಿಮೆಯಾಗಿರುವುದು ಮತ್ತು ಕಾರ್ಯಾಚರಣೆಯ ದಕ್ಷತೆ ಹೆಚ್ಚಿರುವುದರಿಂದ ಬಹುತೇಕ ಎಸ್ಕಾಂಗಳು 2025-26ರಲ್ಲಿ ಲಾಭದ ಹಾದಿಗೆ ಮರಳಿವೆ. ಈ ಹಿನ್ನೆಲೆಯಲ್ಲಿ ಲಾಭದ ಒಂದು ಭಾಗವನ್ನು ಗ್ರಾಹಕರಿಗೆ ಮರಳಿಸಲು ನಿರ್ಧರಿಸಲಾಗಿದೆ.

- ಜಾಹೀರಾತು -

ಆದರೆ ಅಂತಿಮ ಮರುಪಾವತಿ ಮೊತ್ತ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ ಸುಂಕ ನಿರ್ಧಾರ ಪ್ರಕ್ರಿಯೆಗೆ ಒಳಪಟ್ಟಿರುತ್ತದೆ. ಅನುಮೋದನೆ ದೊರೆತ ಬಳಿಕವೇ ಗ್ರಾಹಕರ ವಿದ್ಯುತ್ ಬಿಲ್‌ನಲ್ಲಿ ಈ ಮೊತ್ತ ಹೊಂದಾಣಿಕೆಯಾಗಲಿದೆ. ಹೀಗಾಗಿ ಬೆಸ್ಕಾಂ ಗ್ರಾಹಕರು 2027ರ ಏಪ್ರಿಲ್‌ನಿಂದ ವಿದ್ಯುತ್ ಬಿಲ್‌ನಲ್ಲಿ ಕೊಂಚ ರಿಲೀಫ್ ನಿರೀಕ್ಷಿಸಬಹುದು.

TAGGED:#karnatakapower
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಚಾಮರಾಜನಗರಮುಖಪುಟ

ನಿಲ್ಲದ ಹುಲಿ ಹಾವಳಿ ; ಪಶುವೈದ್ಯರ ಕೊರತೆಯಿಂದಾಗಿ ಸ್ಥಗಿತಗೊಂಡ ಕಾರ್ಯಾಚರಣೆ – ಹುಲಿ ಸೆರೆಗೆ ನೂತನ ಪ್ಲಾನ್‌ !

December 22, 2025
ಜಿಲ್ಲೆಮುಖಪುಟಮೈಸೂರು ನಗರ

ಚಾಮುಂಡಿ ಬೆಟ್ಟದಲ್ಲಿಅದ್ದೂರಿ ಚಾಮುಂಡೇಶ್ವರಿ ರಥೋತ್ಸವ ಸಂಭ್ರಮ

October 24, 2026
ಬೆಂಗಳೂರುಮುಖಪುಟರಾಜಕೀಯ

ಸಂವಿಧಾನ ಉಲ್ಲಂಘಿಸಿದ ರಾಜ್ಯಪಾಲರು: ಸುಪ್ರೀಂ ಕೋರ್ಟ್ ಮೊರೆ ಹೋಗಲು ಸರ್ಕಾರ ಚಿಂತನೆ

January 22, 2026
ಮುಖಪುಟಮೈಸೂರು ನಗರರಾಜಕೀಯ

ಸಚಿವ ಯತೀಂದ್ರ ವಿರುದ್ಧ ಪೋಸ್ಟ್​​ ಕಾರ್ಡ್ ಅಭಿಯಾನ

October 30, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?