PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮನ್‌ಮುಲ್ ಹಾಲಿನಪುಡಿ ಕಲಬೆರಕೆ ಪ್ರಕರಣಕ್ಕೆ ಹೊಸ ತಿರುವು
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮಂಡ್ಯ > ಮನ್‌ಮುಲ್ ಹಾಲಿನಪುಡಿ ಕಲಬೆರಕೆ ಪ್ರಕರಣಕ್ಕೆ ಹೊಸ ತಿರುವು
ಮಂಡ್ಯಮುಖಪುಟ

ಮನ್‌ಮುಲ್ ಹಾಲಿನಪುಡಿ ಕಲಬೆರಕೆ ಪ್ರಕರಣಕ್ಕೆ ಹೊಸ ತಿರುವು

Prathinidhi News
Last updated: October 6, 2026 7:35 pm
Prathinidhi News
Published October 6, 2026
Share
SHARE

ಮನ್‌ಮುಲ್ ಹಾಲಿನಪುಡಿ ಕಲಬೆರಕೆ ಪ್ರಕರಣಕ್ಕೆ ಇದೀಗ ಮತ್ತೊಂದು ತಿರುವು ಸಿಕ್ಕಿದೆ. ಮನ್‌ಮುಲ್‌ನಲ್ಲಿ ಉಂಟಾಗಿದ್ದ ಹಾಲಿನಪುಡಿ ದಾಸ್ತಾನು ಕೊರತೆಯನ್ನು ಸರಿದೂಗಿಸಲು ಕಲಬೆರಕೆ ಹಾಲಿನಪುಡಿ ತಂದು ಇಟ್ಟಿದ್ದ ಆರೋಪಿಗಳು, ಸಂಸ್ಥೆಯ ಹಾಲಿನಪುಡಿ ಬ್ಯಾಗ್‌ಗಳನ್ನು ಖಾಸಗಿ ವ್ಯಕ್ತಿಗಳಿಗೆ ಅಕ್ರಮವಾಗಿ ಮಾರಾಟ ಮಾಡುತ್ತಿದ್ದರು ಎಂಬುದು ಬೆಳಕಿಗೆ ಬಂದಿದೆ. ಮನ್‌ಮುಲ್‌ನ ಹಾಲಿನಪುಡಿ ಸಾಗಣೆ ವಾಹನಗಳ ಮೂಲಕವೇ ಖಾಸಗಿ ವ್ಯಕ್ತಿಗಳಿಗೆ ಪುಡಿ ಮಾರಾಟ ಮಾಡಲಾಗುತ್ತಿತ್ತು. ಈ ಮಾರಾಟದಿಂದ ಬಂದ ಹಣವನ್ನು ಮನ್‌ಮುಲ್‌ನ ಮಾಜಿ ಅಧ್ಯಕ್ಷ ಉಮ್ಮಡಹಳ್ಳಿ ಶಿವಪ್ಪ, ಪ್ರದೀಪ್ ಜಾಧವ್ ಹಾಗೂ ಇತರರು ಹಂಚಿಕೊಳ್ಳುತ್ತಿದ್ದರು ಎಂದು ಪೊಲೀಸರು ಆರೋಪಿಸಿದ್ದಾರೆ.

ಮನ್‌ಮುಲ್ ಮೇಲಧಿಕಾರಿಗಳ ಪರಿಶೀಲನೆ ವೇಳೆ ಹಾಲಿನಪುಡಿ ದಾಸ್ತಾನಿನಲ್ಲಿ ಭಾರೀ ಕೊರತೆ ಪತ್ತೆಯಾಗಿತ್ತು. ಆಡಿಟ್ ವೇಳೆ ಒಟ್ಟು 110.4 ಟನ್ ಹಾಲಿನಪುಡಿ ಕೊರತೆ ಕಂಡುಬಂದಿತ್ತು. ಈ ಕೊರತೆಯನ್ನು ಸರಿದೂಗಿಸಲು 54.9 ಟನ್ ಕಲಬೆರಕೆ ಹಾಲಿನಪುಡಿಯನ್ನು ಖರೀದಿಸಿ ದಾಸ್ತಾನಿನಲ್ಲಿ ಇರಿಸಲಾಗಿತ್ತು ಎಂಬ ಆರೋಪವಿದೆ. ಆದರೂ 55.5 ಟನ್ ಹಾಲಿನಪುಡಿ ಕೊರತೆಯಾಗಿದ್ದು, ಇದರಿಂದ ಮಂಡ್ಯ ಹಾಲು ಒಕ್ಕೂಟಕ್ಕೆ ಸುಮಾರು ₹2.88 ಕೋಟಿ ನಷ್ಟವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮನ್‌ಮುಲ್‌ನ ಮಾಜಿ ಅಧಿಕಾರಿ ಪ್ರದೀಪ್ ಜಾಧವ್, ಮಾಜಿ ಅಧ್ಯಕ್ಷ ಉಮ್ಮಡಹಳ್ಳಿ ಶಿವಪ್ಪ, ಸಿಸ್ಟಮ್ ಆಪರೇಟರ್ ಶ್ರುತಿ, ಗೋಡೌನ್ ಮ್ಯಾನೇಜರ್ ರವಿ, ಉಸ್ತುವಾರಿ ಶ್ರೀನಿವಾಸ್, ಹಾಲಿನಪುಡಿ ಘಟಕದ ಮುಖ್ಯಾಧಿಕಾರಿ ಶ್ರೀನಿವಾಸಮೂರ್ತಿ ಹಾಗೂ ಶಿವಪ್ಪ ಅವರ ಆಪ್ತ ಸುರೇಶ್ ಸೇರಿದಂತೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ನಿದೀಶ್ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ತಲೆಮರೆಸಿಕೊಂಡಿರುವ ಉಪ ವ್ಯವಸ್ಥಾಪಕ ರಾಮಕೃಷ್ಣಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಮನ್‌ಮುಲ್‌ನ ಕೆನೆರಹಿತ ಹಾಲಿನಪುಡಿ ದಾಸ್ತಾನಿನಲ್ಲಿ ಕೊರತೆ ಕಂಡುಬಂದ ಹಿನ್ನೆಲೆಯಲ್ಲಿ ಪ್ರಕರಣ ಬೆಳಕಿಗೆ ಬಂದಿತ್ತು. ಮನ್‌ಮುಲ್‌ನಿಂದ ಹಾಲಿನಪುಡಿ ಚೀಲಗಳನ್ನು ಅಕ್ರಮವಾಗಿ ಸಾಗಿಸಿ ಖಾಸಗಿ ಗೋದಾಮಿಗೆ ತಲುಪಿಸಿ, ಬಳಿಕ ಖಾಸಗಿ ವ್ಯಕ್ತಿಗಳಿಗೆ ಮಾರಾಟ ಮಾಡಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿತ್ತು. ದಾಸ್ತಾನಿನಲ್ಲಿ ಉಂಟಾದ ಕೊರತೆಯನ್ನು ಮುಚ್ಚಿಹಾಕಲು ಕಲಬೆರಕೆ ಹಾಲಿನಪುಡಿಯನ್ನು ತಂದು ದಾಸ್ತಾನಿನಲ್ಲಿ ಇರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಮನ್‌ಮುಲ್‌ಗೆ ಸುಮಾರು ₹2.88 ಕೋಟಿ ನಷ್ಟವಾಗಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

- ಜಾಹೀರಾತು -
TAGGED:#mandyamanmul
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಹೊಸ ಬಡಾವಣೆಗಳ ನಿರ್ಮಾಣಕ್ಕೆ ಮುಂದಾದ ಎಂಡಿಎ ; ಎರಡು ದಶಕಗಳಿಂದ ಚರ್ಚೆಯಲ್ಲಿದ್ದ ಬೊಮ್ಮೇನಹಳ್ಳಿ ಹೊಸ ಬಡಾವಣೆ ನಿರ್ಮಾಣಕ್ಕೆ ಮಹತ್ವದ ತೀರ್ಮಾನ

December 23, 2025
ಮುಖಪುಟಮೈಸೂರು ನಗರ

ಎಲ್-ನಿನೊ ಭೀತಿ : ತೋಟಗಾರಿಕೆ ಬೆಳೆಗಳ ರಕ್ಷಣೆಗೆ ಮಾರ್ಗಸೂಚಿ

July 22, 2026
ಬೆಂಗಳೂರುಮುಖಪುಟರಾಜಕೀಯ

ಚುನಾವಣಾ ಆಯೋಗವು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು : ಸಿಎಂ ಸಿದ್ದರಾಮಯ್ಯ ಆಗ್ರಹ

November 8, 2025
ಬೆಂಗಳೂರುಮುಖಪುಟ

ಹವಾಮಾನ ವೈಪರಿತ್ಯ : ರಾಜ್ಯದ ಪ್ರಮುಖ ಜಿಲ್ಲೆಗಳಿಗೆ ಹೈ ಅಲರ್ಟ್

July 8, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?