PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಹಾಲಿನ ಟ್ಯಾಂಕರ್ ಡಿಕ್ಕಿಯಾಗಿ ಒಂದೇ ಊರಿನ ಮೂವರು ದಾರುಣ ಸಾವು
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮಂಡ್ಯ > ಹಾಲಿನ ಟ್ಯಾಂಕರ್ ಡಿಕ್ಕಿಯಾಗಿ ಒಂದೇ ಊರಿನ ಮೂವರು ದಾರುಣ ಸಾವು
ಮಂಡ್ಯಮುಖಪುಟ

ಹಾಲಿನ ಟ್ಯಾಂಕರ್ ಡಿಕ್ಕಿಯಾಗಿ ಒಂದೇ ಊರಿನ ಮೂವರು ದಾರುಣ ಸಾವು

Prathinidhi News
Last updated: September 15, 2026 5:58 pm
Prathinidhi News
Published September 15, 2026
Share
SHARE

ಮಂಡ್ಯ, ಸೆ,15: ಹಬ್ಬ ಮುಗಿಸಿಕೊಂಡು ಬೆಂಗಳೂರಿಗೆ ಮರಳುತ್ತಿದ್ದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂರು ಸಾವು. ಹಾಲಿನ ಟ್ಯಾಂಕರ್ ಡಿಕ್ಕಿಯಾಗಿ ಸ್ಕೂಟರ್‌ನಲ್ಲಿದ್ದ ಮೂವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೊಪ್ಪ ಬಳಿ ಇಂದು (ಸೆ.15) ಮುಂಜಾನೆ ನಡೆದಿದೆ. ಮೃತರನ್ನು ಕೊಪ್ಪ ಗ್ರಾಮದ ನಿವಾಸಿಗಳಾದ ಕಾವ್ಯಾ, ಮುತ್ತುರಾಜ್ ಮತ್ತು ಕೀರ್ತನಾ ಎಂದು ಗುರುತಿಸಲಾಗಿದೆ.

ಮೃತ ಮೂವರೂ ಗೌರಿ-ಗಣೇಶ ಹಬ್ಬದ ಆಚರಣೆಗಾಗಿ ತಮ್ಮ ಸ್ವಗ್ರಾಮವಾದ ಕೊಪ್ಪಕ್ಕೆ ಆಗಮಿಸಿದ್ದರು. ಹಬ್ಬ ಮುಗಿಸಿ ಇಂದು ಮುಂಜಾನೆ ಸ್ಕೂಟರ್‌ನಲ್ಲಿ ಬೆಂಗಳೂರಿಗೆ ಹೊರಟಿದ್ದರು. ಮದ್ದೂರು ತಾಲೂಕಿನ ಕೊಪ್ಪ ಗ್ರಾಮದ ಸಮೀಪ ಚಲಿಸುತ್ತಿದ್ದ ವೇಳೆ ವೇಗವಾಗಿ ಬಂದ ಹಾಲಿನ ಟ್ಯಾಂಕರ್ ಇವರ ಸ್ಕೂಟರ್‌ಗೆ ಸರಾಟವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮೂವರೂ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

 

ಘಟನಾ ಸ್ಥಳಕ್ಕೆ ಕೊಪ್ಪ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಗ್ರಾಮದ ಮೂವರು ಉದಯೋನ್ಮುಖ ಯುವಕ-ಯುವತಿಯರು ಒಂದೇ ಅಪಘಾತದಲ್ಲಿ ಸಾವನ್ನಪ್ಪಿರುವುದು ಕೊಪ್ಪ ಗ್ರಾಮದಲ್ಲಿ ಶೋಕಸಾಗರ ತಂದಿಟ್ಟಿದೆ.

- ಜಾಹೀರಾತು -

ಗಂಭೀರ ಸ್ಥಿತಿಯಲ್ಲಿ ಮತ್ತೊಬ್ಬ ಮಗಳು

ಹಾಲಿನ ಟ್ಯಾಂಕರ್ ಡಿಕ್ಕಿಯಾಗಿ ಮೃತಪಟ್ಟವರು ಒಂದೇ ಕುಟುಂಬದ ಗಂಡ, ಹೆಂಡತಿ ಮತ್ತು ಮಗಳು ಎಂಬುದು ತಿಳಿದುಬಂದಿದ್ದು, ಅಪಘಾತದಲ್ಲಿ ಮತ್ತೊಬ್ಬಳು ಮಗಳು ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾಳೆ. ಡಿಕ್ಕಿಯ ಭೀಕರತೆಗೆ ರಸ್ತೆಗೆ ಎಸೆಯಲ್ಪಟ್ಟ ಮುತ್ತುರಾಜ್, ಅವರ ಪತ್ನಿ ಹಾಗೂ ಹಿರಿಯ ಮಗಳು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅದೃಷ್ಟವಶಾತ್ ಮತ್ತೊಬ್ಬಳು ಸಣ್ಣ ಮಗಳು ತೀವ್ರ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದು, ತಕ್ಷಣವೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಬ್ಬದ ಸಂಭ್ರಮದಲ್ಲಿದ್ದ ತವರು ಮನೆಯವರು ಹಾಗೂ ಸ್ವಗ್ರಾಮ ಕೂತನಹಳ್ಳಿಯ ನಿವಾಸಿಗಳು ಈ ದುರಂತ ಸುದ್ದಿ ಕೇಳಿ ಆಘಾತಗೊಂಡಿದ್ದು, ಕೊಪ್ಪ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಟ್ಯಾಂಕರ್ ಚಾಲಕನ ವಿರುದ್ಧ ತನಿಖೆ ಮುಂದುವರಿಸಿದ್ದಾರೆ.

TAGGED:#accident#mandya
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಮಾನದಂಡಗಳ ಪಾಲನೆಯೇ ಯಶಸ್ಸಿನ ಮೂಲಾಧಾರ : ಡಾ.ದೇಬಬ್ರತ ರಾಯ್

July 22, 2026
ಬೆಂಗಳೂರುಮುಖಪುಟ

ಬೆಂಗಳೂರಿನಲ್ಲಿ ಶುರುವಾಯ್ತು ಮೈಸೂರು ಫೇಮಸ್ ‘ಮೈಲಾರಿ’ ಘಮ; ಹೋಟೆಲ್ ಉದ್ಘಾಟಿಸಿ, ದೋಸೆ ಸವಿದು ಮೆಚ್ಚಿದ ಸಿಎಂ ಸಿದ್ದರಾಮಯ್ಯ

January 23, 2026
ಮುಖಪುಟಮೈಸೂರು ನಗರ

ಮೈಸೂರು: ಹುಲಿಗಳ ಮಿಲನ ಕಾಲ; ಮಾನವ-ವನ್ಯಜೀವಿ ಸಂಘರ್ಷಕ್ಕೆ ಕಾರಣಗಳೇನು? – ಡಾ. ರವಿಶಂಕರ್

November 4, 2025
ಬೆಂಗಳೂರುಮುಖಪುಟ

ರಸ್ತೆ ಅಪಘಾತದಲ್ಲಿ IAS ಅಧಿಕಾರಿ ಮಹಾಂತೇಶ ಬೀಳಗಿ ಸಾ*ವು..!

November 26, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?