PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಗ್ರಾಮದೇವತೆ ಜಾತ್ರೆಯಲ್ಲಿ ವಿಡಿಯೋ ಮಾಡಿದರೆ ₹30 ಸಾವಿರ ದಂಡ: ಗೋಳೂರು ಗ್ರಾಮಸ್ಥರ ಖಡಕ್ ಎಚ್ಚರಿಕೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ನಂಜನಗೂಡು > ಗ್ರಾಮದೇವತೆ ಜಾತ್ರೆಯಲ್ಲಿ ವಿಡಿಯೋ ಮಾಡಿದರೆ ₹30 ಸಾವಿರ ದಂಡ: ಗೋಳೂರು ಗ್ರಾಮಸ್ಥರ ಖಡಕ್ ಎಚ್ಚರಿಕೆ
ನಂಜನಗೂಡುಮುಖಪುಟಸನ್ನಿಧಾನ

ಗ್ರಾಮದೇವತೆ ಜಾತ್ರೆಯಲ್ಲಿ ವಿಡಿಯೋ ಮಾಡಿದರೆ ₹30 ಸಾವಿರ ದಂಡ: ಗೋಳೂರು ಗ್ರಾಮಸ್ಥರ ಖಡಕ್ ಎಚ್ಚರಿಕೆ

Prathinidhi News
Last updated: February 9, 2026 4:19 pm
Prathinidhi News
Published February 9, 2026
Share
SHARE

ನಂಜನಗೂಡು, ಫೆಬ್ರವರಿ 9, 2026 : ತಾಲೂಕಿನ ಗೋಳೂರು ಗ್ರಾಮದಲ್ಲಿ ನಾಳೆಯಿಂದ (ಫೆಬ್ರವರಿ 10) ಮೂರು ದಿನಗಳ ಕಾಲ ಅದ್ಧೂರಿಯಾಗಿ ನಡೆಯಲಿರುವ ಗ್ರಾಮದೇವತೆ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದ್ದಾರೆ.

ಜಾತ್ರೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಮಹಿಳೆಯರ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗಿದೆ.

ವಿಶೇಷವೆಂದರೆ, ಈ ಬಾರಿ ಜಾತ್ರೆಯಲ್ಲಿ ಯಾರಾದರೂ ಕುಡಿದು ಗಲಾಟೆ ಮಾಡಿದರೆ ಅಥವಾ ಹೆಣ್ಣುಮಕ್ಕಳ ವಿಡಿಯೋ ಚಿತ್ರೀಕರಿಸಿದರೆ ಅಂತಹವರಿಗೆ ಬರೋಬ್ಬರಿ 30 ಸಾವಿರ ರೂಪಾಯಿ ದಂಡ ವಿಧಿಸಲಾಗುವುದು ಎಂದು ಗ್ರಾಮದ ಮುಖಂಡರು ಘೋಷಿಸಿದ್ದಾರೆ. ಜಾತ್ರೆಯ ಪಾವಿತ್ರ್ಯತೆ ಕಾಪಾಡಲು ಯಾವುದೇ ರೀತಿಯ ವಿಡಿಯೋ ಮಾಡಲು ಅವಕಾಶ ನೀಡುವುದಿಲ್ಲ ಎಂದು ಕಡಾಖಂಡಿತವಾಗಿ ತಿಳಿಸಲಾಗಿದೆ.

- ಜಾಹೀರಾತು -

ಈ ನಿಯಮದ ಕುರಿತು ಗ್ರಾಮದ ನಿವಾಸಿ ಚಕ್ರಜವರ ಎಂಬುವರ ಮೂಲಕ ಇಡೀ ಊರಿನಾದ್ಯಂತ ತಮಟೆ ಬಾರಿಸಿ ಡಂಗುರ ಸಾರುವ ಮೂಲಕ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಹಬ್ಬದ ನೆಪದಲ್ಲಿ ಶಾಂತಿ ಕದಡುವವರಿಗೆ ಮತ್ತು ಮಹಿಳೆಯರ ಘನತೆಗೆ ಧಕ್ಕೆ ತರುವವರಿಗೆ ಪಾಠ ಕಲಿಸಲು ಗ್ರಾಮಸ್ಥರು ಕೈಗೊಂಡಿರುವ ಈ ಮುನ್ನೆಚ್ಚರಿಕೆ ಕ್ರಮವು ಈಗ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರರಾಜಕೀಯ

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಮೈಸೂರಿನಲ್ಲಿ ಅದ್ದೂರಿ ಸ್ವಾಗತ

November 19, 2025
ಮುಖಪುಟರಾಜಕೀಯ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

December 18, 2025
ಬೆಂಗಳೂರುಮುಖಪುಟರಾಜಕೀಯ

We the people of INDIA ಎನ್ನುವುದೇ ನಮ್ಮ ಸಂವಿಧಾನದ ಮೂಲ ಮಂತ್ರ ; ಸಿಎಂ ಸಿದ್ದರಾಮಯ್ಯ

November 26, 2025
ಮುಖಪುಟಮೈಸೂರು ನಗರ

ಮೈಸೂರಿನಲ್ಲಿ ವೈದ್ಯಕೀಯ ಲೋಕದ ಮಹಾ ವಿಸ್ಮಯ..! ಪೀಸ್ ಆಗಿದ್ದ ಯುವಕನ ಕೈ ಮರು ಜೋಡಣೆ ಸಕ್ಸಸ್..!

December 9, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?