ಮೈಸೂರು, ಅಕ್ಟೋಬರ್ 28): ಒಂದೆಡೆ ಸ್ಟಿಂಗ್ ಆಪರೇಷನ್ ಆರೋಪ ಪ್ರತ್ಯಾರೋಪಗಳು ಜೋರಾಗಿದ್ರೆ, ಇನ್ನೊಂದೆಡೆ ವಿಧಾನಪರಿಷತ್ ಚುನಾವಣೆ ಫಲಿತಾಂಶದ ಮಾತುಗಳು ನಡೆಯುತ್ತಿವೆ. ಇದರ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಗಮನಸೆಳೆದಿದ್ದಾರೆ. ಹೌದು..ಮೈಸೂರಿನ ಕೆಆರ್ ನಗರದಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ವಿಜಜಯೇಂದ್ರ ಮತ್ತು ಸಿದ್ದರಾಂಯ್ಯ ಅಕ್ಕಪಕ್ಕದಲ್ಲಿ ಕುಳಿತುಕೊಂಡು ಗಮನಸೆಳೆದಿದ್ದಾರೆ. ಇನ್ನು ಇದೇ ವೇಳೆ ವಿಜಯೇಂದ್ರ ಅವರು ಸಿದ್ದರಾಮಯ್ಯನವರಿಗೆ ಎರಡುಗಳಿಂದ ನಮಸ್ಕರಿಸಿದರು. ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ವಿಜಯೇಂದ್ರನ ಬೆನ್ನುತಟ್ಟಿದರು.
