PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಜಂಬೂಸವಾರಿ ದಿನ ಸಚಿವರು ಎಂಬ ಕಾರಣಕ್ಕೆ ತಡೆ..!? ಪೊಲೀಸರ ದರ್ಪ..!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಜಂಬೂಸವಾರಿ ದಿನ ಸಚಿವರು ಎಂಬ ಕಾರಣಕ್ಕೆ ತಡೆ..!? ಪೊಲೀಸರ ದರ್ಪ..!
ಮುಖಪುಟಮೈಸೂರು ನಗರ

ಜಂಬೂಸವಾರಿ ದಿನ ಸಚಿವರು ಎಂಬ ಕಾರಣಕ್ಕೆ ತಡೆ..!? ಪೊಲೀಸರ ದರ್ಪ..!

Prathinidhi News
Last updated: October 22, 2026 6:08 pm
Prathinidhi News
Published October 22, 2026
Share
SHARE

ಮೈಸೂರು. (ಅಕ್ಟೋಬರ್ 22): ಜಂಬೂಸವಾರಿ ದಿನ ಅಂದರೆ ನಿನ್ನೆ (ಅ.21) ಮೈಸೂರು ಅರಮನೆ ಆವರಣದಲ್ಲಿ ನಂದಿ ಧ್ವಜದ ಪೂಜೆಗೆ ತೆರಳುತ್ತಿದ್ದ ಮೂವರು ಸಚಿವರಾದ ಶಿವರಾಜ್ ತಂಗಡಗಿ, ನರೇಂದ್ರ ಸ್ವಾಮಿ, ಬಸವಂತಪ್ಪ ಅವರನ್ನು ಎಸ್ಪಿ ಸಿ.ಬಿ.ರಿಷ್ಯಂತ್ ತಡೆದಿದ್ದು, ಈ ಪ್ರಕರಣ ಇದೀಗ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಸಚಿವರನ್ನ ತಡೆದಿದ್ದೇಕೆ? ದಲಿತ ಸಚಿವರು ಎಂಬ ಕಾರಣಕ್ಕೆ ತಡೆಯಲಾಯ್ತಾ ಎಂಬ ವ್ಯಾಪಾಕ ಟೀಕೆ ವ್ಯಕ್ತವಾಗುತ್ತಿದ್ದು, ಇದೀಗ ಅಸಲಿ ಕಾರಣ ಬಯಲಾಗಿದೆ. ನಂದಿ ಧ್ವಜದ ಪೂಜೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯ ಇವರಿಬ್ಬರನ್ನು ಹೊರತುಪಡಿಸಿ ಬೇರೆ ಯಾವ ಸಚಿವರಿಗೂ ಅವಕಾಶ ಇಲ್ಲ. ಹೀಗಾಗಿ ಇಬ್ಬರನ್ನು ಹೊರತುಪಡಿಸಿ ಯಾರಿಗೂ ಅವಕಾಶ ನೀಡಬಾರದು ಎಂದು ಅಧಿಕಾರಿಗಳಿಗೆ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್‌ ಸೂಚಿಸಿದ್ದರು. ಅದರಂತೆ ಎಸ್ಪಿ ರಿಷ್ಯಂತ್ ಸಚಿವರನ್ನು ತಡೆದಿದ್ದಾರೆ ಎನ್ನುವುದು ತಿಳಿದುಬಂದಿದೆ.

ನಂದಿ ಧ್ವಜದ ಪೂಜೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯ ಇಬ್ಬರನ್ನೂ ಹೊರತುಪಡಿಸಿ ಬೇರೆ ಯಾವ ಸಚಿವರಿಗೂ ಅವಕಾಶ ಇಲ್ಲ. ಸಚಿವರು ಅವರಿಗೆ ಮೀಸಲಿಟ್ಟ ಸ್ಥಳದಲ್ಲಿ ಕುಳಿತಿರಬೇಕೆಂದು ತೀರ್ಮಾನಿಸಲಾಗಿತ್ತು. ಈ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಕಮಿಷನರ್​​ ಬ್ರೀಫಿಂಗ್ ಮಾಡಿದ್ದರು.ಹೀಗಾಗಿ ಪೊಲೀಸ್ ಹಿರಿಯ ಅಧಿಕಾರಗಳ ತೀರ್ಮಾನದಂತೆ ಕರ್ತವ್ಯ ನಿರ್ವಹಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಎಂ ಮತ್ತು ಜಿಲ್ಲಾ ಉಸ್ತುವಾರಿ ಸಚಿವರನ್ನು ಬಿಟ್ಟು ಬೇರೆಯವರಿಗೆ ನಂದಿ ಧ್ವಜ ಪೂಜೆಗೆ ಅವಕಾಶವಿಲ್ಲ. ಸಚಿವರು ಅವರಿಗೆ ಮೀಸಲಿಟ್ಟ ಸ್ಥಳದಲ್ಲಿ ಕುಳಿತಿರಬೇಕೆಂದು ತೀರ್ಮಾನಿಸಲಾಗಿತ್ತು. ಈ ಬಗ್ಗೆ ಬೆಳಗ್ಗೆಯೇ 300ಕ್ಕೂ ಹೆಚ್ಚು ಅಧಿಕಾರಿಗಳಿಗೆ ಕಮಿಷನರ್ ಮಾಹಿತಿ ನೀಡಿದ್ದರು.​ ಈ ವಿಚಾರ ಡಿಜಿ , ಐಜಿಪಿ ಎಂ.ಎ.ಸಲೀಂ ಅವರ ಗಮನಕ್ಕೂ ಇತ್ತು. ಆದರೆ ಸಚಿವರಿಗೆ ನೀವು ಪೂಜೆಗೆ ಬರುವಂತೆ ಇಲ್ಲ ಎಂದು ತಿಳಿಸಿರಲಿಲ್ಲ. ಹೀಗಾಗಿ ನಂದಿ ಪೂಜೆಗೆಂದು ಸಿಎಂ ಜೊತೆಗೆ ಆಗಮಿಸಿದ್ದ ಸಚಿವರನ್ನು ಎಸ್ಪಿ ರಿಷ್ಯಂತ್ ತಡೆದಿದ್ದಾರೆ. ಹೀಗಾಗಿ ಇದೀಗ ಕಮಿಷನ್ ನತ್ತ ಪ್ರಕರಣ ತಿರುಗಿದ್ದು, ಮುಂದೆ ಯಾವ ಹಂತಕ್ಕೆ ಹೋಗಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

TAGGED:#dasara#mysuru
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಮೈಸೂರು: ಮಾದಕ ವ್ಯಸನಿಗಳ ಪುಂಡಾಟ; ಪೊಲೀಸ್ ಪೇದೆ ಮೇಲೆ ಹಲ್ಲೆ ನಡೆಸಿ ಮೊಬೈಲ್ ಕಿತ್ತುಕೊಂಡ ನಾಲ್ವರ ಬಂಧನ

January 8, 2026
ಬೆಂಗಳೂರುಮುಖಪುಟ

ಬೆಂಗಳೂರು : ಮಕ್ಕಳಿಗಾಗಿ ಇದೇ ಮೊದಲ ಬಾರಿಗೆ ಕಬ್ಬನ್‌ ಪಾರ್ಕ್‌ ನಲ್ಲಿ ಫ್ಲವರ್‌ ಶೋ

November 27, 2025
ಮುಖಪುಟಮೈಸೂರು ನಗರರಾಜಕೀಯ

ಕಾಂಗ್ರೆಸ್ ಶಕ್ತಿಯುತವಾಗಿ ಮುಂದುವರಿಬೇಕಾದ್ರೆ ಡಿಕೆಶಿಗೆ CM ಸ್ಥಾನ ಕೊಡಿ.., ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಿಶ್ಚಲಾನಂದ ಮಹಾಸ್ವಾಮೀಜಿ ಎಚ್ಚರಿಕೆ!

November 29, 2025
ಕ್ರೈಂ ಸುದ್ದಿಗಳುನಂಜನಗೂಡುಮುಖಪುಟ

ನಂಜನಗೂಡಿನಲ್ಲಿ ಕಾರುಗಳಿಗೆ ಬೆಂಕಿ: ಕಿಡಿಗೇಡಿಗಳ ಅಟ್ಟಹಾಸ ಮುಂದುವರಿಕೆ; ಕಾನೂನು ಸುವ್ಯವಸ್ಥೆ ಬಗ್ಗೆ ಆತಂಕ!

November 20, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?