ಮೈಸೂರು, ಅ.28: ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರ ಹೇಳಿಕೆಗಳಿಗೆ ನಾನು ಪ್ರತ್ರಿಕ್ರಿಯೆ ನೀಡಿರುವುದು ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ತಮ್ಮ ಹೇಳಿಕೆಗಳಿಗೆ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ. ಮೈಸೂರು ಅರಮನೆ ಸ್ವಾಧೀನ ಕಾಯ್ದೆಯು ನ್ಯಾಯಾಲಯದಲ್ಲಿ ಇತ್ಯರ್ಥದಲ್ಲಿದ್ದರೂ, ಶಾಸನದ ಪ್ರಕಾರ ಮೈಸೂರು ಅರಮನೆ ಸರ್ಕಾರಕ್ಕೆ ಸೇರಿದ್ದು ಎಂದು ಹೇಳಿದ್ದೇನೆ. ದಸರಾ ಆಚರಣೆಯ ಸಂದರ್ಭದಲ್ಲಿ ಜಂಬೂಸವಾರಿ ಹಾಗೂ ಅಂಬಾರಿ ಪ್ರಾಮುಖ್ಯತೆ ಬಗ್ಗೆ ಅವರು ಹೇಳಿದ್ದಾರೆ. ಅಂಬಾರಿ ಇಲ್ಲದೆ ವಿಜಯದಶಮಿ ಜಂಬೂಸವಾರಿ ಅಸಾಧ್ಯ ಎಂದರು. ಅಂಬಾರಿಗಾಗಿ ಸರ್ಕಾರ ಹಣ ನೀಡುತ್ತದೆ. ಈ ಬಗ್ಗೆ ಯಾರಿಗಾದರೂ ದೂರುಗಳಿದ್ದರೆ ನಮ್ಮೊಂದಿಗೆ ಮಾತನಾಡಿ ಬಗೆಹರಿಸಿಕೊಳ್ಳಬೇಕು ಎಂದು ಹೇಳಿದರು. ತಾವು ಯಾವುದೇ ತಪ್ಪಾದ ಹೇಳಿಕೆಗಳನ್ನು ನೀಡಿಲ್ಲ, ಬದಲಾಗಿ ಅವರು (ಪ್ರಮೋದಾದೇವಿ) ಹೇಳಿದ್ದಕ್ಕೆ ಪ್ರತಿಕ್ರಿಯೆ ಕೊಟ್ಟಿದ್ದೇನೆ ಎಂದು ವಿವರಿಸಿದರು. ಈ ವಿವಾದದ ಬಗ್ಗೆ ಮುಖ್ಯಮಂತ್ರಿಗಳು ಈಗಾಗಲೇ ಸ್ಪಷ್ಟಪಡಿಸಿದ್ದು, ಏನಾದರೂ ತೊಂದರೆ ಆಗಿದ್ದರೆ, ಅವರನ್ನ ಕರೆಸಿ ಮಾತನಾಡಿ, ತಪ್ಪಾಗಿದ್ದರೆ ತಿದ್ದಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಹೀಗಿರುವಾಗ ನಾನು ಮತ್ತೆ ಮಾತನಾಡಬೇಕಾದ ಅಗತ್ಯವಿಲ್ಲ ಎಂದು ಯತೀಂದ್ರ ತಿಳಿಸಿದರು. ಈ ಘಟನೆ ಮುಂಬರುವ ಚುನಾವಣೆಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
