ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಲ್ಲಿ ಅದ್ಧೂರಿಯಾಗಿ ನಡೆಯಲಿರುವ ಯುವ ದಸರಾ 2026ಕ್ಕೆ ನಟ ಮತ್ತು ನೃತ್ಯ ನಿರ್ದೇಶಕ ಪ್ರಭುದೇವ ಚಾಲನೆ ನೀಡಲಿದ್ದಾರೆ. ಈ ಹಿನ್ನಲೆ ಮೈಸೂರಿಗೆ ಆಗಮಿಸಿದ ಅವರನ್ನು ಯುವ ದಸರಾ ಸಮಿತಿಯು ಅದ್ದೂರಿಯಾಗಿ ಸ್ವಾಗತಿಸಿದೆ. ಮೈಸೂರಿನ ಉತ್ತನಹಳ್ಳಿಯಲ್ಲಿ ನಡೆಯಲಿರುವ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಪ್ರಭುದೇವ ಅವರು ಉದ್ಘಾಟಿಸಲಿದ್ದಾರೆ. ಅಕ್ಟೋಬರ್ 13ರಿಂದ 17ರವರೆಗೆ ಐದು ದಿನಗಳ ಕಾಲ ಯುವ ದಸರಾ ಕಾರ್ಯಕ್ರಮಗಳು ನಡೆಯಲಿವೆ.
