PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ: ಕಾಮುಕ ಕಾರ್ತಿಕ್‌ಗೆ ಗಲ್ಲು ಶಿಕ್ಷೆ!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಕ್ರೈಂ ಸುದ್ದಿಗಳು > ಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ: ಕಾಮುಕ ಕಾರ್ತಿಕ್‌ಗೆ ಗಲ್ಲು ಶಿಕ್ಷೆ!
ಕ್ರೈಂ ಸುದ್ದಿಗಳುಜಿಲ್ಲೆಮುಖಪುಟಮೈಸೂರು ನಗರ

ಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ: ಕಾಮುಕ ಕಾರ್ತಿಕ್‌ಗೆ ಗಲ್ಲು ಶಿಕ್ಷೆ!

Prathinidhi News
Last updated: October 17, 2026 7:01 pm
Prathinidhi News
Published October 17, 2026
Share
SHARE

ಮೈಸೂರು, ಅಕ್ಟೋಬರ್ 17: ದಸರಾ ಮಹೋತ್ಸವದ ವೇಳೆ ಇಡೀ ರಾಜ್ಯವನ್ನೇ ನಡುಗಿಸಿದ್ದ 9 ವರ್ಷದ ಬಾಲಕಿಯ ಮೇಲಿನ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದೆ. ಕೃತ್ಯ ಎಸಗಿದ ಅಪರಾಧಿ ಕಾರ್ತಿಕ್ (32) ಎಂಬಾತನಿಗೆ ಗಲ್ಲು ಶಿಕ್ಷೆ (ಮರಣದಂಡನೆ) ವಿಧಿಸಿ ಮೈಸೂರಿನ ನ್ಯಾಯಾಲಯದ ನ್ಯಾಯಾಧೀಶರಾದ ಅನಿಲ್ ಪಿ. ವಘಾಢೆಯವರಿದ್ದ ಪೀಠ ತೀರ್ಪು ಪ್ರಕಟಿಸಿದೆ.

ಕಳೆದ ವರ್ಷ ಮೈಸೂರು ದಸರಾ ಮಹೋತ್ಸವದ ಸಮಯದಲ್ಲಿ ವ್ಯಾಪಾರಕ್ಕಾಗಿ ಕಲಬುರಗಿಯಿಂದ ಕುಟುಂಬವೊಂದು ಮೈಸೂರಿಗೆ ಬಂದಿತ್ತು. ಈ ಕುಟುಂಬದ 9 ವರ್ಷದ ಪುಟ್ಟ ಬಾಲಕಿ ದಸರಾ ವಸ್ತುಪ್ರದರ್ಶನದ ಆವರಣದ ಬಳಿ ಬಲೂನ್ ಮಾರಾಟ ಮಾಡುತ್ತಿದ್ದಳು. ರಾತ್ರಿ ವೇಳೆ ಬಾಲಕಿ ತನ್ನ ಕುಟುಂಬದೊಂದಿಗೆ ಟೆಂಟ್‌ನಲ್ಲಿ ನಿದ್ರಿಸುತ್ತಿದ್ದಾಗ, ಅಪರಾಧಿ ಕಾರ್ತಿಕ್ ಬಾಲಕಿಯನ್ನು ಅಪಹರಿಸಿಕೊಂಡು ಹೋಗಿದ್ದ. ಬಳಿಕ ಆಕೆಯ ಮೇಲೆ ಕ್ರೂರವಾಗಿ ಅತ್ಯಾಚಾರ ಎಸಗಿ, ಭೀಕರವಾಗಿ ಕೊಲೆ ಮಾಡಿ ಮೃತದೇಹವನ್ನು ಬಿಟ್ಟು ನಾಪತ್ತೆಯಾಗಿದ್ದ.

24 ಗಂಟೆಯಲ್ಲೇ ಆರೋಪಿ ಬಂಧನ

ಈ ಘಟನೆ ಇಡೀ ರಾಜ್ಯಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಪ್ರಕರಣದ ಗಂಭೀರತೆಯನ್ನು ಅರಿತ ಮೈಸೂರಿನ ನಜರಬಾದ್ ಪೊಲೀಸ್ ಠಾಣೆಯ ಸಿಬ್ಬಂದಿ ತಕ್ಷಣವೇ ಕಾರ್ಯಪ್ರವೃತ್ತರಾಗಿ, ಘಟನೆ ನಡೆದ ಕೇವಲ 24 ಗಂಟೆಗಳ ಒಳಗಾಗಿ ಆರೋಪಿ ಕಾರ್ತಿಕ್‌ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

TAGGED:#crime#mysuru
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಜಿಲ್ಲೆಮುಖಪುಟಮೈಸೂರು ನಗರ

ಮಹಾರಾಣಿ ಕಾಲೇಜಿನಲ್ಲಿ ರಾಹುಲ್ ಗಾಂಧಿ ಫೋಟೋ: ಕಾಂಗ್ರೆಸ್ ವಿರುದ್ಧ ಮಾಜಿ ಶಾಸಕ ಎಲ್. ನಾಗೇಂದ್ರ ಆಕ್ರೋಶ

July 23, 2026
ಮುಖಪುಟ

ಕೆಡಿಪಿ ಸಭೆಗೆ ಪೊಲೀಸ್ ಆಯುಕ್ತ ಗೈರಾಗಿದ್ದಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಗರಂ

September 15, 2026
ಜಿಲ್ಲೆ

ಅಡ್ಡ ಮತದಾನ ಸಂಬಂಧ ಪಕ್ಷದಲ್ಲಿ ಉಂಟಾಗಿದ್ದ ಗೊಂದಲ ಅಂತ್ಯ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

July 2, 2026
ಮುಖಪುಟಮೈಸೂರು ಗ್ರಾಮಾಂತರ

ಟಿ. ನರಸೀಪುರ: ಕರ್ಕಶ ಶಬ್ದ ಮಾಡುತ್ತಿದ್ದ ಬೈಕ್ ವಶಕ್ಕೆ, ಸವಾರನಿಗೆ ದಂಡ

July 3, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?