PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಸ್ನೇಹಿತರೊಂದಿಗೆ ಪ್ರವಾಸಕ್ಕೆ ತೆರಳಿದ್ದ ಬೆಂಗಳೂರಿನ ಯುವತಿ ಲಾಡ್ಜ್‌ನಲ್ಲಿ ನಿಗೂಢ ಸಾವು..!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಸ್ನೇಹಿತರೊಂದಿಗೆ ಪ್ರವಾಸಕ್ಕೆ ತೆರಳಿದ್ದ ಬೆಂಗಳೂರಿನ ಯುವತಿ ಲಾಡ್ಜ್‌ನಲ್ಲಿ ನಿಗೂಢ ಸಾವು..!
ಮುಖಪುಟಹಾಸನ

ಸ್ನೇಹಿತರೊಂದಿಗೆ ಪ್ರವಾಸಕ್ಕೆ ತೆರಳಿದ್ದ ಬೆಂಗಳೂರಿನ ಯುವತಿ ಲಾಡ್ಜ್‌ನಲ್ಲಿ ನಿಗೂಢ ಸಾವು..!

Prathinidhi News
Last updated: September 17, 2026 7:03 pm
Prathinidhi News
Published September 17, 2026
Share
SHARE

ಹಾಸನ, ಸೆಪ್ಟೆಂಬರ್​ 17: ಗೌರಿ-ಗಣೇಶ ಹಬ್ಬದ ರಜೆ ಹಿನ್ನೆಲೆ ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಬಂದಿದ್ದ ಬೆಂಗಳೂರಿನ 23 ವರ್ಷದ ಸಿಎ ಪದವೀಧರೆ, ತಾಲೂಕಿನ ಹಿರಿಯೂರು ಕೂಡಿಗೆಯ ಲಾಡ್ಜ್‌ ಒಂದರಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿದೆ.

ಬೆಂಗಳೂರಿನಿಂದ ಸ್ನೇಹಿತರ ಜೊತೆಗೆ ಸಕಲೇಶಪುರಕ್ಕೆ ಪ್ರವಾಸಕ್ಕೆ ಬಂದಿದ್ದ ಯುವತಿ ತಾನು ವಾಸ್ತವ್ಯ ಹೂಡಿದ್ದ ಲಾಡ್ಜ್​ನ ಕೊಠಡಿಯಲ್ಲೇ ಕುಸಿದುಬಿದ್ದು ಸಾವನ್ನಪ್ಪಿದ್ದಾಳೆ ಎನ್ನಲಾಗಿದ್ದು, ಸದ್ಯ ಸಾಕಷ್ಟು ಅನುಮಾನ ಮೂಡಿಸಿದೆ. ಮೃತ ಯುವತಿ ಮೂಲತಃ ಬೆಂಗಳೂರಿನ ನಾಗಸಂದ್ರ ಮೂಲದವಳಾಗಿದ್ದು, ಸಿಎ ಪದವಿಧರೆಯಾಗಿದ್ದಳು.

ಮೂಲತಃ ಕೊಡಗು ಜಿಲ್ಲೆಯವರಾದ ಯುವತಿಯ ಪೋಷಕರು ಬೆಂಗಳೂರಿನ ನಾಗಸಂದ್ರದಲ್ಲಿ ನೆಲೆಸಿದ್ದಾರೆ. ಯುವತಿಯ ತಾಯಿ ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ‘ಇಬ್ಬರು ಗೆಳತಿಯರು ಹಾಗೂ ಇಬ್ಬರು ಗೆಳೆಯರ ಜೊತೆ ಕಾರಿನಲ್ಲಿ ಸಕಲೇಶಪುರಕ್ಕೆ ಟೂರ್ ಹೋಗುವುದಾಗಿ ಮಗಳು ಹೇಳಿ ಹೊರಟಿದ್ದಳು. ಆದರೆ ಅಲ್ಲಿಗೆ ಗೆಳತಿಯರು ಹೋಗಿರಲೇ ಇಲ್ಲ. ಮಗಳ ಜೊತೆ ಓದಿದ್ದ, ನಮಗೆ ಪರಿಚಿತರೇ ಆಗಿದ್ದ ಇಬ್ಬರು ಯುವಕರ ಜೊತೆ ಎಲೆಕ್ಟ್ರಿಕ್ ಆಟೋದಲ್ಲಿ ತೆರಳಿದ್ದಳು. ಇದೀಗ ಮಗಳು ಲಾಡ್ಜ್‌ನಲ್ಲೇ ಮೃತಪಟ್ಟಿದ್ದಾಳೆ ಎಂದು ಹೇಳುತ್ತಿದ್ದಾರೆ’ ಎಂದು ಕಣ್ಣೀರಿಟ್ಟಿರುವ ಪೋಷಕರು, ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಮೂಲದ ರಘು ಹಾಗೂ ದರ್ಶನ್ ಎಂಬುವವರು ಯುವತಿಯ ಜೊತೆಗಿದ್ದರು. ‘ಲಾಡ್ಜ್ ಕೊಠಡಿಯ ಸ್ನಾನಗೃಹಕ್ಕೆ ಹೋದಾಗ ಆಕೆ ಅಸ್ವಸ್ಥಗೊಂಡು ಬಿದ್ದಿದ್ದಳು. ಗ್ಯಾಸ್ ಗೀಸರ್‌ನಿಂದ ಬಿಡುಗಡೆಯಾದ ಕಾರ್ಬನ್ ಮೊನಾಕ್ಸೈಡ್ ಅನಿಲದಿಂದ ಆಕೆ ಅಸ್ವಸ್ಥಳಾಗಿ ಮೃತಪಟ್ಟಿರಬಹುದು’ ಎಂದು ಶಂಕಿಸಲಾಗಿದೆ. ತಕ್ಷಣ ಆಕೆಯನ್ನು ಸಮೀಪದ ಹೆತ್ತೂರಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು. ಆದರೆ, ಉಸಿರಾಟ ಸ್ಥಗಿತಗೊಂಡಿದ್ದ ಕಾರಣ ಸಕಲೇಶಪುರ ತಾಲೂಕು ಆಸ್ಪತ್ರೆಗೆ ಕರೆದೊಯ್ಯುವಂತೆ ವೈದ್ಯರು ಸೂಚಿಸಿದ್ದರು. ಅಲ್ಲಿ ಪರೀಕ್ಷಿಸಿದ ವೈದ್ಯರು ಯುವತಿ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ.

- ಜಾಹೀರಾತು -

 

TAGGED:#hassanGIRLSELFHARMING
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟರಾಜಕೀಯ

ಭೀಕರ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ದುರ್ಮರಣ..!

January 28, 2026
ಬೆಂಗಳೂರುಮುಖಪುಟರಾಜಕೀಯ

ಕಾಂಗ್ರೆಸ್ ಸರ್ಕಾರ ಗುಂಡಿಗಳ ಮತ್ತು ಪಾಪರ್ ಸರ್ಕಾರವಾಗಿದೆ, ಜನರ ಶಾಪ ತಟ್ಟಲಿದೆ ; ವಿರೋಧ ಪಕ್ಷದ ನಾಯಕ ಆರ್.ಅಶೋಕ್

November 8, 2025
ಮುಖಪುಟಮೈಸೂರು ನಗರರಾಜಕೀಯ

ನಾಯಕತ್ವ ಬದಲಾವಣೆ ಮತ್ತು ಕೊಟ್ಟ ಮಾತು : ಡಿಕೆ ಸಹೋದರರಿಗೆ ಪರೋಕ್ಷ ಟಾಂಗ್ ನೀಡಿದ ಸಿಎಂ ಸಿದ್ದರಾಮಯ್ಯ

November 21, 2025
ಮುಖಪುಟಮೈಸೂರು ನಗರರಾಜಕೀಯ

ಮೈಸೂರು ತಾಲ್ಲೂಕು ಕಚೇರಿಗೆ ಸಂಸದ ಯದುವೀರ್ ದಿಢೀರ್ ಭೇಟಿ: ಅಧಿಕಾರಿಗಳಿಗೆ ತರಾಟೆ, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ

January 8, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?