PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಹೈನುಗಾರಿಕೆಯಿಂದ ರೈತರ ಪ್ರಗತಿ: ಹರೀಶ್ ಗೌಡ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಹೈನುಗಾರಿಕೆಯಿಂದ ರೈತರ ಪ್ರಗತಿ: ಹರೀಶ್ ಗೌಡ
ಮುಖಪುಟಮೈಸೂರು ಗ್ರಾಮಾಂತರ

ಹೈನುಗಾರಿಕೆಯಿಂದ ರೈತರ ಪ್ರಗತಿ: ಹರೀಶ್ ಗೌಡ

Prathinidhi News
Last updated: October 30, 2026 6:15 pm
Prathinidhi News
Published October 30, 2026
Share
SHARE

ಹುಣಸೂರು: ಗ್ರಾಮೀಣ ರೈತರ ಆರ್ಥಿಕ ಸಬಲೀಕರಣದಲ್ಲಿ ಹೈನುಗಾರಿಕೆ ಪ್ರಮುಖ ಪಾತ್ರ ವಹಿಸುತ್ತಿದ್ದು, ಹಾಲು ಉತ್ಪಾದಕರ ಸಹಕಾರ ಸಂಘಗಳು ಈ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಶಾಸಕ ಜಿ.ಡಿ. ಹರೀಶ್ ಗೌಡ ಹೇಳಿದರು.
ತಾಲ್ಲೂಕಿನ ಕಲ್ಲಹಳ್ಳಿಯ ಹಾಲು ಉತ್ಪಾದಕರ ಸಹಕಾರ ಸಂಘದ ಮೇಲಂತಸ್ತಿನ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು. ಕೃಷಿಯೊಂದಿಗೆ ಹೈನುಗಾರಿಕೆಯನ್ನೂ ಅವಲಂಬಿಸಿರುವ ಗ್ರಾಮೀಣ ಕುಟುಂಬಗಳಿಗೆ ಹಾಲು ಉತ್ಪಾದನೆ ನಿರಂತರ ಆದಾಯದ ಮೂಲವಾಗಿದೆ. ಉತ್ಪಾದಕರಿಂದ ಹಾಲು ಸಂಗ್ರಹಿಸಿ ಮಾರುಕಟ್ಟೆಗೆ ಪೂರೈಸುವ ಸಹಕಾರ ಸಂಘಗಳು, ಅವರಿಗೆ ಅಗತ್ಯ ಸೌಲಭ್ಯ ಕಲ್ಪಿಸುವುದರ ಜತೆಗೆ ಹಿತಾಸಕ್ತಿ ಕಾಪಾಡಬೇಕು ಎಂದರು.

ನೂತನ ಕಟ್ಟಡದಿಂದ ಸಂಘದ ಆಡಳಿತಾತ್ಮಕ ಹಾಗೂ ದೈನಂದಿನ ಕಾರ್ಯಚಟುವಟಿಕೆಗಳಿಗೆ ಅನುಕೂಲವಾಗಲಿದೆ. ಹೈನುಗಾರರು ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ಗುಣಮಟ್ಟದ ಹಾಲು ಉತ್ಪಾದನೆಗೆ ಒತ್ತು ನೀಡಬೇಕು. ಜಾನುವಾರುಗಳ ಆರೋಗ್ಯ, ಪೌಷ್ಟಿಕ ಪಶು ಆಹಾರ ಹಾಗೂ ವೈಜ್ಞಾನಿಕ ನಿರ್ವಹಣೆಗೆ ಆದ್ಯತೆ ನೀಡಿದರೆ ಉತ್ಪಾದಕತೆ ಹೆಚ್ಚಿಸಲು ಸಾಧ್ಯವಿದೆ ಎಂದು ತಿಳಿಸಿದರು.
ಸಹಕಾರ ಸಂಸ್ಥೆಗಳ ಬೆಳವಣಿಗೆಗೆ ಪಾರದರ್ಶಕ ಆಡಳಿತ, ಪ್ರಾಮಾಣಿಕತೆ ಹಾಗೂ ಸದಸ್ಯರ ಸಹಭಾಗಿತ್ವ ಅಗತ್ಯ. ಆಡಳಿತ ಮಂಡಳಿ ಮತ್ತು ಸಿಬ್ಬಂದಿ ಉತ್ಪಾದಕರಿಗೆ ಸಮರ್ಪಕ ಸೇವೆ ಒದಗಿಸುವ ಮೂಲಕ ಸಂಘದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕೆಎಂಎಫ್ ನಿರ್ದೇಶಕ ಕೆ.ಎಸ್. ಕುಮಾರ್, ಮೈಮುಲ್ ನಿರ್ದೇಶಕಿ ಶಿವಗಾಮಿ, ಜೆಡಿಎಸ್ ಮುಖಂಡ ಹರವೆ ಶ್ರೀಧರ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಪ್ರಭಾಕರ್, ಸಂಘದ ಅಧ್ಯಕ್ಷ ಶಿವಕುಮಾರ್, ಸಹಾಯಕ ವ್ಯವಸ್ಥಾಪಕ ಗೌತಮ್, ಮೇಲ್ವಿಚಾರಕ ವಸಂತ್, ನಿಸಾಂತ್, ಸುಮಂತ್, ಅಕ್ಷಯ್, ಬಸವಣ್ಣ, ವಿಷಕಂಠಪ್ಪ ಸೇರಿದಂತೆ ಆಡಳಿತ ಮಂಡಳಿ ಪದಾಧಿಕಾರಿಗಳು, ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

TAGGED:#GDharishgowdahunasuru
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರರಾಜಕೀಯ

ಗ್ರೇಟರ್ ಮೈಸೂರು ಯೋಜನೆಗೆ ಸಂಪುಟ ಅಸ್ತು: “ನನ್ನ ಬಹಳ ವರ್ಷಗಳ ಕನಸು ಈಡೇರಿದೆ” – ಜಿ.ಟಿ. ದೇವೇಗೌಡ ಹರ್ಷ!

December 3, 2025
ಮುಖಪುಟಮೈಸೂರು ನಗರ

ಎರಡನೇ ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟದಲ್ಲಿ ಭಕ್ತಸಾಗರ, ಮಹಾಲಕ್ಷ್ಮಿ ಅಲಂಕಾರದಲ್ಲಿ ತಾಯಿ ದರ್ಶನ

July 24, 2026
ದಸರಾ ಮಹೋತ್ಸವಮುಖಪುಟಮೈಸೂರು ನಗರ

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆಗೆ ವಿಜಯೇಂದ್ರ ವಿರೋಧ: “ಕರಾವಳಿ ಪರಂಪರೆಯನ್ನು ಮೈಸೂರಿಗೆ ತುರಕಬೇಡಿ” ಎಂದು ಸರ್ಕಾರದ ವಿರುದ್ಧ ಆಕ್ರೋಶ

July 11, 2026
ಮುಖಪುಟಮೈಸೂರು ನಗರ

ಮೈಸೂರು ವಿಮಾನ ನಿಲ್ದಾಣದ ಬಳಿ ಹುಲಿ ಭೀತಿ: ದುಬಾರೆ ಆನೆಗಳ ಪಡೆಯೊಂದಿಗೆ ಅರಣ್ಯ ಇಲಾಖೆ ಭರ್ಜರಿ ಕಾರ್ಯಾಚರಣೆ

January 7, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?