ಮೈಸೂರು, ಅ.5: ದಸರಾ ಮಹೋತ್ಸವದ ಅಂಗವಾಗಿ ಮೈಸೂರು ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಬಯಲು ರಂಗಮಂದಿರದಲ್ಲಿ ಅ.6 ರಿಂದ 13 ರವರೆಗೆ ಯುವ ಸಂಭ್ರಮ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಸುಮಾರು 12,000 ಕಾಲೇಜು ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆಯಿದೆ.
ಯುವ ಸಂಭ್ರಮ ಉಪಸಮಿತಿ ಆಯೋಜಿಸಿರುವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಉದ್ಘಾಟಿಸಲಿದ್ದಾರೆ. ಸ್ಯಾಂಡಲ್ವುಡ್ ನಟ ವಸಿಷ್ಠ ಸಿಂಹ ಮತ್ತು ನಟಿ ಹರಿಪ್ರಿಯಾ ಭಾಗವಹಿಸಲಿದ್ದಾರೆ.
ಬರ ಪರಿಸ್ಥಿತಿ ಕಾರಣದಿಂದಾಗಿ ಈ ವರ್ಷ ಕಾರ್ಯಕ್ರಮದ ಬಜೆಟ್ ಅನ್ನು ಕಡಿಮೆ ಮಾಡಲಾಗಿದೆ. ಕಳೆದ ವರ್ಷ 2.3 ಕೋಟಿ ರೂ. ಬಜೆಟ್ನಲ್ಲಿ ಕಾರ್ಯಕ್ರಮ ನಡೆಸಲಾಗಿತ್ತು.