ಬೀದರ್: ಎನ್ಸಿಬಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ, ಬೆಂಗಳೂರಿಗೆ ಬರುತ್ತಿದ್ದ ಬರೋಬ್ಬರಿ 1,596 ಕೆಜಿ ಗಾಂಜಾವನ್ನ ಜಪ್ತಿ ಮಾಡಿದ್ದಾರೆ. ಮಾದಕ ವಸ್ತು ಕಳ್ಳ ಸಾಗಣೆ ಮಾಡುತ್ತಿದ್ದ ಇಬ್ಬರನ್ನು ಎನ್ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಆಂಧ್ರ ಪ್ರದೇಶದಿಂದ ಬರ್ತಿದ್ದ ಗಾಂಜಾ ತುಂಬಿದ್ದ ಲಾರಿಯನ್ನು ಸೀಜ್ ಮಾಡಿದ್ದು, ಇಬ್ಬರನ್ನ ಬಂಧಿಸಿ ವಿಚಾರಣೆ ನಡೆಸ್ತಿದ್ದಾರೆ.
ರಾಜ್ಯದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಒಂದೇ ರೇಡ್ನಲ್ಲಿ 1596 ಕೆಜಿ ಗಾಂಜಾ ವಶಕ್ಕೆ ಪಡೆದುಕೊಳ್ಳಲಾಗಿದ್ದು, ಬರೋಬ್ಬರಿ 15 ಕೋಟಿ 50 ಲಕ್ಷ ಮೌಲ್ಯವನ್ನು ಹೊಂದಿದೆ. ಆಂಧ್ರ ಪ್ರದೇಶದಿಂದ ಬೀದರ್ ಮೂಲಕ ಮಹಾರಾಷ್ಟ್ರಕ್ಕೆ ಖದೀಮರು ಗಾಂಜಾ ಸಾಗಿಸುತ್ತಿದ್ದರು. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ವನಮಾರಪ್ಪಳ್ಳಿ ಚೆಕ್ ಪೋಸ್ಟ್ ಬಳಿ ಪೊಲೀಸರು ದಾಳಿ ನಡೆಸಿ ಗಾಂಜಾ ಪ್ಯಾಕೆಟ್ಗಳನ್ನು ಸೀಜ್ ಮಾಡಿದ್ದಾರೆ.