ದಾವಣಗೆರೆ, ಜ 27: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಮಟ್ಟದ 38ನೇ ಪತ್ರಕರ್ತರ ಸಮ್ಮೇಳನ ಫೆಬ್ರವರಿ 3 ಮತ್ತು 4ರಂದು ನಡೆಸಲು ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ. ರಾಜ್ಯದಿಂದ ಬರುವ ಪತ್ರಕರ್ತರ ಮನಸ್ಸಿನಲ್ಲಿ ಉಳಿಯುವಂತಹ ಸಮ್ಮೇಳನ ಮಾಡೋಣ ಎಂದು ಸಮ್ಮೇಳನದ ಗೌರವ ಅಧ್ಯಕ್ಷರು, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹೇಳಿದರು.
ಜೆಜೆಎಂ ಮೆಡಿಕಲ್ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಮ್ಮೇಳನ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಈ ಹಿಂದೆ ನಾಲ್ಕೈದು ಬಾರಿ ನನ್ನನ್ನು ಭೇಟಿ ಮಾಡಿ ಸಮ್ಮೇಳನದ ಬಗ್ಗೆ ಚರ್ಚೆ ಮಾಡಿದ್ದೀರಿ. ಈ ಬಗ್ಗೆ ಜಿಲ್ಲಾಡಳಿತಕ್ಕೆ ಸಮ್ಮೇಳನಕ್ಕೆ ಬೇಕಾದ ಎಲ್ಲಾ ಸಿದ್ಧತೆ ಮಾಡಲು ಸೂಚನೆ ನೀಡಿದ್ದೇನೆ. ರಾಜ್ಯಾಧ್ಯಕ್ಷರು ಮಾತನಾಡಿದ್ದಾರೆ. ಅಚ್ಚುಕಟ್ಟಾಗಿ ಸಮ್ಮೇಳನ ಮಾಡಲು ಅಗತ್ಯ ಕ್ರಮ ವಹಿಸಲಾಗಿದೆ ಎಂದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಬಿ.ಲೋಕೇಶ್ , ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ಮಂಜುನಾಥ್ ಏಕಬೋಟೆ, ಪ್ರಧಾನ ಕಾರ್ಯದರ್ಶಿ ಎ.ಫಕೃದ್ದೀನ್, ಖಜಾಂಚಿ ಎನ್.ವಿ.ಬದರಿನಾಥ್, ಕಾರ್ಯದರ್ಶಿ ಜೆ.ಎಸ್.ವೀರೇಶ್, ಉಪಾಧ್ಯಕ್ಷ ಎಚ್.ಎನ್.ಪ್ರಕಾಶ್, ರಾಜ್ಯ ಸಮಿತಿ ಸದಸ್ಯ ಕೆ.ಚಂದ್ರಪ್ಪ, ರಾಷ್ಟ್ರೀಯ ಸಮಿತಿ ಸದಸ್ಯ ಎಸ್.ಕೆ.ಒಡೆಯರ್, ಪ್ರಧಾನ ಕಾರ್ಯದರ್ಶಿ ಸಿ.ವರದರಾಜ್, ಖಜಾಂಚಿ ಮಧು ನಾಗರಾಜ್, ಕಾರ್ಯದರ್ಶಿ ಎ.ಎನ್.ನಿಂಗಪ್ಪ, ಪಿಆರ್ ಒ ಡಿ.ರಂಗನಾಥ್ ರಾವ್ , ಸಂಯುಕ್ತ ಕರ್ನಾಟಕ ಸ್ಥಾನಿಕ ಸಂಪಾದಕ ಮಂಜುನಾಥ್ ಗೌರಕ್ಕಳವರ, ವಿಜಯ ಕರ್ನಾಟಕ ಸ್ಥಾನಿಕ ಸಂಪಾದಕ ಸದಾನಂದ ಹೆಗಡೆ, ವಿಜಯವಾಣಿ ಸ್ಥಾನಿಕ ಸಂಪಾದಕ ಎಂ.ಬಿ.ನವೀನ್, ಹಿರಿಯ ಪತ್ರಕರ್ತರಾದ ಎಚ್.ಬಿ.ಮಂಜುನಾಥ್, ಬಾ.ಮ.ಬಸವರಾಜಯ್ಯ, ಮಂಜು ಯಳನಾಡು, ಬಸವರಾಜ ದೊಡ್ಡಮನಿ, ನಾಗರಾಜ ಬಡದಾಳ್, ತಾರನಾಥ್, ರಮೇಶ್ ಜಾಗೀರ್ ದಾರ್, ಹೆಚ್ ಎಂ ಪಿ ಕುಮಾರ್ ಸೇರಿದಂತೆ ಪತ್ರಕರ್ತರು ಸಭೆಯಲ್ಲಿ ಪಾಲ್ಗೊಂಡಿದ್ದರು.