ಮೈಸೂರು : ಮೈಸೂರು-ನಂಜನಗೂಡು ರಸ್ತೆಯಲ್ಲಿ ಮಕ್ಕಳನ್ನು ಲೋಹದ ಬುಟ್ಟಿಯೊಂದರಲ್ಲಿ ಕುಳಿಸಿಕೊಂಡು ವ್ಯಕ್ತಿಯೋರ್ವ ದ್ವಿಚಕ್ರ ವಾಹನ ಚಲಾಯಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಕ್ಕಳು ಸೇರಿದಂತೆ ಒಟ್ಟು 7 ಮಂದಿ ದ್ವಿಚಕ್ರ ವಾಹನದಲ್ಲಿ ಇರುವುದನ್ನು ವಿಡಿಯೋದಲ್ಲಿ ಗಮನಿಸಬಹುದಾಗಿದ್ದು, ಘಟನೆ ರಸ್ತೆ ಸುರಕ್ಷತಾ ಕ್ರಮಗಳ ಪಾಲನೆ ಎಷ್ಟರ ಮಟ್ಟಿಗೆ ಕರ್ನಾಟಕದಲ್ಲಿ ಜಾರಿಯಲ್ಲಿದೆ ಎಂಬ ಪ್ರಶ್ನೆ ಉದ್ಭವಿಸುವಂತೆ ಮಾಡಿದೆ.
