ಬೆಂಗಳೂರು, ನವೆಂಬರ್ 7, 2025 : ರಾಜ್ಯದಲ್ಲಿ ಮುಂದಿನ 3 ದಿನ ಮಳೆ( ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 7 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ವರುಣನ ರಗಳೆ ಹೆಚ್ಚಾಗಲಿದೆ.
ಪ್ರಮುಖವಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹಾಗೆಯೇ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ಪ್ರತೇಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ, ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳ ಕೆಲವೆಡೆಯೂ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆಯಿದೆ.
ಬೆಂಗಳೂರಲ್ಲಿ ಹೇಗಿರಲಿದೆ ವಾತಾವರಣ..?
ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ.ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಶನಿವಾರ ಮತ್ತು ಭಾನುವಾರ ತುಂತುರು ಮಳೆ ಸುರಿಯಲಿದೆ ಎನ್ನಲಾಗಿದೆ.
ಶಕ್ತಿ ಹಾಗೂ ಮೋಂಥಾ ಚಂಡಮಾರುತಗಳ ವೇಳೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿತ್ತು. ಈಗಲೂ ಕೂಡ ಕೆಲವು ಭಾಗಗಳಲ್ಲಿ ಮಳೆರಾಯ ಬಿಟ್ಟುಬಿಡದೇ ಆರ್ಭಟಿಸುತ್ತಿದೆ. ಇದ್ರಿಂದಾಗಿ ರೈತರಿಗೆ ತೀವ್ರ ನಷ್ಟ ಉಂಟಾಗಿದ್ದು, ಅನ್ನದಾತರು ಕಂಗಾಲಾಗಿದ್ದಾರೆ.
