PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಫೆಮಾ ಕಾಯ್ದೆ ಉಲ್ಲಂಘನೆ: ಬೈಜೂಸ್‌ಗೆ  9000 ಕೋಟಿ ಇ.ಡಿ. ನೋಟಿಸ್‌ ಜಾರಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಜಿಲ್ಲೆ > ಫೆಮಾ ಕಾಯ್ದೆ ಉಲ್ಲಂಘನೆ: ಬೈಜೂಸ್‌ಗೆ  9000 ಕೋಟಿ ಇ.ಡಿ. ನೋಟಿಸ್‌ ಜಾರಿ
ಜಿಲ್ಲೆ

ಫೆಮಾ ಕಾಯ್ದೆ ಉಲ್ಲಂಘನೆ: ಬೈಜೂಸ್‌ಗೆ  9000 ಕೋಟಿ ಇ.ಡಿ. ನೋಟಿಸ್‌ ಜಾರಿ

Prathinidhi News
Last updated: November 22, 2023 10:14 am
Prathinidhi News
Published November 22, 2023
Share
SHARE

ವಿದೇಶಿ ಹೂಡಿಕೆ ನಿಯಮ (ಫೆಮಾ) ಉಲ್ಲಂಘನೆ ಪ್ರಕರಣದಲ್ಲಿ ಬೆಂಗಳೂರು ಮೂಲದ ಆನ್‌ಲೈನ್‌/ಆಫ್‌ಲೈನ್‌ ಶಿಕ್ಷಣ ಸಂಸ್ಥೆ ಬೈಜೂಸ್‌ಗೆ ಜಾರಿ ನಿರ್ದೇಶನಾಲಯವು 9000 ಕೋಟಿ ರು ದಂಡ ಪಾವತಿ ಮಾಡುವಂತೆ ನೋಟಿಸ್‌ ನೀಡಿದೆ ಎಂದು ಮೂಲಗಳು ಹೇಳಿವೆ. ಇದು ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿರುವ ಸಂಸ್ಥೆಗೆ ಭಾರೀ ಶಾಕ್‌ ನೀಡಿದೆ. ಆದರೆ ಈವರೆಗೂ ತನಗೆ ಅಂಥ ಯಾವುದೇ ನೋಟಿಸ್‌ ಬಂದಿಲ್ಲ ಎಂದು ಬೈಜೂಸ್‌ ಸ್ಪಷ್ಟನೆ ನೀಡಿದೆ.

ನೋಟಿಸ್‌:

2011-23ರ ಅವಧಿಯಲ್ಲಿ ಬೈಜೂಸ್‌ 28000 ಕೋಟಿ ರು. ವಿದೇಶಿ ನೇರ ಬಂಡವಾಳ ಹೂಡಿಕೆ ಸ್ವೀಕರಿಸಿದೆ. ಜೊತೆಗೆ ಇದೇ ಅವಧಿಯಲ್ಲಿ ಕಂಪನಿ ಸಾಗರೋತ್ತರ ನೇರ ಹೂಡಿಕೆ ಹೆಸರಲ್ಲಿ ವಿದೇಶಗಳಿಗೆ 9754 ಕೋಟಿ ರು. ರವಾನಿಸಿದೆ. ಈ ಹಂತದಲ್ಲಿ ಕಂಪನಿ ಫೆಮಾ ನಿಯಮಗಳ ಉಲ್ಲಂಘನೆ ಮಾಡಿದೆ ಎಂದು ಆರೋಪಿಸಿರುವ ಜಾರಿ ನಿರ್ದೇಶನಾಲಯ, ರವೀಂದ್ರನ್‌ ಮತ್ತು ದಿವ್ಯಾ ಗೋಕುಲ್‌ನಾಥ್‌ ದಂಪತಿ ಒಡೆತನದ ಕಂಪನಿಗೆ 9000 ಕೋಟಿ ರು. ಪಾವತಿಸುವಂತೆ ನೋಟಿಸ್‌ ಜಾರಿ ಮಾಡಿದೆ ಎಂದು ಆಂಗ್ಲ ಮಾಧ್ಯಮವೊಂದು ವರದಿ ಮಾಡಿದೆ. ಕೆಲ ತಿಂಗಳ ಹಿಂದಷ್ಟೇ ಇ.ಡಿ. ಅಧಿಕಾರಿಗಳು ಬೆಂಗಳೂರಿನಲ್ಲಿರುವ ಬೈಜೂಸ್‌ ಕಚೇರಿ ಮೇಲೆ ದಾಳಿ ಮಾಡಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು.

ಬೈಜೂಸ್‌ ಹಿನ್ನೆಲೆ:

- ಜಾಹೀರಾತು -

ರವೀಂದ್ರನ್‌ ಮತ್ತು ದಿವ್ಯಾ 2015ರಲ್ಲಿ ವಿದ್ಯಾರ್ಥಿಗಳಿಗಾಗಿ ಬೈಜೂಸ್‌ ಲರ್ನಿಂಗ್‌ ಆ್ಯಪ್‌ ಬಿಡುಗಡೆ ಮಾಡಿದ್ದರು. ಬಳಿಕ ಮಕ್ಕಳಿಗೆ ಗಣಿತ ವಿಷಯದ ಆ್ಯಪ್‌ ಬಿಡುಗಡೆ ಮಾಡಲಾಗಿತ್ತು. 2018ರ ವೇಳೆಗೆ ಸಂಸ್ಥೆಗೆ 1.5 ಕೋಟಿ ವಿದ್ಯಾರ್ಥಿಗಳು ಸೇರ್ಪಡೆಯಾಗಿದ್ದರು. ಸಂಸ್ಥೆ ದೇಶದ ಮೂಲೆ ಮೂಲೆಗೂ ವ್ಯಾಪಿಸಿತ್ತು. ಈ ನಡುವೆ ಕೋವಿಡ್‌ ಸಮಯದಲ್ಲಿ ಶಾಲೆಗಳು ಮುಚ್ಚಿದಾಗ ಸಂಸ್ಥೆ ಇನ್ನಷ್ಟು ಅಗಾಧವಾಗಿ ಬೆಳೆದು ಭಾರತದ ನಂ.1 ಎಜುಕೇಷನ್‌ ಆ್ಯಪ್‌ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಅದರ ಮಾರುಕಟ್ಟೆ ಮೌಲ್ಯ 40000 ಕೋಟಿ ರು. ಎಂದು ಅಂದಾಜಿಸಲಾಗಿತ್ತು. ಆದರೆ ಕೋವಿಡ್‌ ಅಂತ್ಯಗೊಂಡ ಬಳಿಕ ವಿದ್ಯಾರ್ಥಿಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಇಳಿದಿತ್ತು. ಹೀಗಾಗಿ ಸಂಸ್ಥೆ ಸಾವಿರಾರು ಶಿಕ್ಷಕರು ಮತ್ತು ಸಿಬ್ಬಂದಿಗಳನ್ನು ಉದ್ಯೋಗದಿಂದ ತೆಗೆದು ಹಾಕಿತ್ತು. ಜೊತೆಗೆ ಭಾರೀ ಪ್ರಮಾಣದ ಹೂಡಿಕೆ ಮತ್ತು ಇತರೆ ಕಂಪನಿಗಳ ಖರೀದಿಗೆ ಭಾರೀ ಹಣ ವೆಚ್ಚ ಮಾಡಿದ ಕಾರಣ ಕಂಪನಿ ದೊಡ್ಡಮಟ್ಟದ ನಷ್ಟಕ್ಕೆ ಗುರಿಯಾಗಿತ್ತು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಜಿಲ್ಲೆ

ಕಾಂಗ್ರೆಸ್​ನವರೇ ನಿಜವಾದ ಹಿಂದೂಗಳು; ರಾಜಕಾರಣಕ್ಕೆ ಹಿಂದುತ್ವ, ಶ್ರೀರಾಮನ ಬಳಸಿಕೊಂಡಿಲ್ಲ -ಸಚಿವ ರಾಮಲಿಂಗಾರೆಡ್ಡಿ

January 8, 2024
ಜಿಲ್ಲೆ

ಐಸಿಸ್​ ನಂಟು: ಬೆಂಗಳೂರಿನಲ್ಲಿ ಓರ್ವ ಶಂಕಿತ ಉಗ್ರರ ಬಂಧಿಸಿದ ಎನ್​ಐಎ

December 9, 2023
ಜಿಲ್ಲೆ

ಕಾಂಗ್ರೆಸ್ ಎಲ್ಲೆಲ್ಲಿ ಗೆದ್ದಿದೆ

December 3, 2023
ಜಿಲ್ಲೆ

ಬಿಜೆಪಿಯವರು ಜಾತಿ, ಧರ್ಮಗಳ ನಡುವೆ ವಿಷಬೀಜ ಬಿತ್ತುತ್ತಿದ್ದಾರೆ-ಸಚಿವ ಈಶ್ವರ್ ಖಂಡ್ರೆ

January 4, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?