PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: 500 ಕೋಟಿ ವಿಶೇಷ ಆರ್ಥಿಕ ನೆರವು ಕಲ್ಪಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಪತ್ರ : ವಿಧಾನಪರಿಷತ್‌ ಸದಸ್ಯ ಶಿವಕುಮಾ‌ರ್ ಹೇಳಿಕೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > 500 ಕೋಟಿ ವಿಶೇಷ ಆರ್ಥಿಕ ನೆರವು ಕಲ್ಪಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಪತ್ರ : ವಿಧಾನಪರಿಷತ್‌ ಸದಸ್ಯ ಶಿವಕುಮಾ‌ರ್ ಹೇಳಿಕೆ
ಮುಖಪುಟಮೈಸೂರು ನಗರರಾಜಕೀಯ

500 ಕೋಟಿ ವಿಶೇಷ ಆರ್ಥಿಕ ನೆರವು ಕಲ್ಪಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಪತ್ರ : ವಿಧಾನಪರಿಷತ್‌ ಸದಸ್ಯ ಶಿವಕುಮಾ‌ರ್ ಹೇಳಿಕೆ

Prathinidhi News
Last updated: November 3, 2025 4:00 pm
Prathinidhi News
Published November 3, 2025
Share
SHARE

ಮೈಸೂರು , ನವೆಂಬರ್‌ 3, 2025: ನಂಜನಗೂಡು, ತಿ ನರಸೀಪುರ, ಕೊಳ್ಳೇಗಾಲ ತಾಲ್ಲೂಕುಗಳಲ್ಲಿ ಪ್ರವಾಹದಿಂದ ನದಿ ದಂಡೆಯ ಬದಿಯಲ್ಲಿರುವ ಗ್ರಾಮಗಳಿಗೆ ನೀರು ನುಗ್ಗುತ್ತಿದೆ. ಹೀಗಾಗಿ ದಂಡೆಯುದ್ದಕ್ಕೂ ತಡೆಗೋಡೆ ನಿರ್ಮಿಸಲು 500 ಕೋಟಿ ವಿಶೇಷ ಆರ್ಥಿಕ ನೆರವು ಕಲ್ಪಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ವಿಧಾನಪರಿಷತ್‌ ಸದಸ್ಯ ಶಿವಕುಮಾ‌ರ್ ತಿಳಿಸಿದರು. 

ಮೈಸೂರಿನಲ್ಲಿಂದು ಮಾತನಾಡಿದ ಅವರು, ನಂಜನಗೂಡು, ತಿ ನರಸೀಪುರ, ಕೊಳ್ಳೇಗಾಲ ತಾಲ್ಲೂಕುಗಳಲ್ಲಿ ಪ್ರವಾಹದಿಂದ ನದಿ ದಂಡೆಯ ಬದಿಯಲ್ಲಿರುವ ಗ್ರಾಮಗಳಿಗೆ ನೀರು ನುಗ್ಗುತ್ತಿದೆ.ದಂಡೆಯುದ್ದಕ್ಕೂ ತಡೆಗೋಡೆ ನಿರ್ಮಿಸಲು 500 ಕೋಟಿ ವಿಶೇಷ ಆರ್ಥಿಕ ನೆರವು ಕಲ್ಪಿಸಬೇಕು. ಆಸ್ತಿಪಾಸ್ತಿ ಹಾನಿಯಿಂದ ಜನರು ಸಂಕಷ್ಟಕ್ಕೆ ತುತ್ತಾಗಿದ್ದಾರೆ. ನಂಜನಗೂಡು ಹಾಗೂ ತಿ ನರಸೀಪುರದಲ್ಲಿ 2.5 ಕಿ.ಮೀ. ನಿಂದ 3.5 ಕಿ.ಮೀವರೆಗೆ, ಹಾಗೂ ಕೊಳ್ಳೇಗಾಲ ತಾಲ್ಲೂಕಿನಲ್ಲಿ 6 ರಿಂದ 8 ಕಿ ಮೀ ಉದ್ದಕ್ಕೂ ನದಿಯ ಎರಡೂ ದಂಡೆಗಳಲ್ಲಿ ತಡೆಗೋಡೆ ನಿರ್ಮಿಸಬೇಕಿದೆ. ದಶಕಗಳಿಂದಲೂ ಈ ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿ ಜನರು ಹೈರಾಣಾಗಿದ್ದಾರೆ. ಈ ತಡೆಗೋಡೆ ನಿರ್ಮಾಣ ಮಾಡಿದರೆ ಪ್ರವಾಹದಿಂದ ತೊಂದರೆಗೆ ಸಿಲುಕುವ ಜನರಿಗೆ ಶಾಶ್ವತವಾದ ಪರಿಹಾರ ಕಲ್ಪಿಸಿದಂತಾಗುತ್ತದೆ. ಹೀಗಾಗಿ ನಿರ್ಮಾಣಕ್ಕೆ 500 ಕೋಟಿಗೆ ಬೇಡಿಕೆ ಇಟ್ಟು ಕೇಂದ್ರ ಸರ್ಕಾರದ 16ನೇ ಹಣಕಾಸು ಆಯೋಗದ ಅಧ್ಯಕ್ಷರಿಗೆ ಪತ್ರ ಬರೆದು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ ಅಡಿಯಲ್ಲಿ ಅನುದಾನ ಒದಗಿಸಬೇಕೆಂದು ಒತ್ತಾಯ ಮಾಡಲಾಗಿದೆ ಎಂದು ತಿಳಿಸಿದರು.

ಇದೇ ವೇಳೆ ನವೆಂಬರ್ ನಲ್ಲಿ ಕ್ರಾಂತಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ನವೆಂಬರ್ ಡಿಸೆಂಬರ್ ಕ್ರಾಂತಿ ಆಗುವುದಿಲ್ಲ, ಸಂಕ್ರಾತಿ ಬರುತ್ತದೆ.ಎಲ್ಲರಿಗೂ ಒಳ್ಳೆಯದಾಗುತ್ತದೆ.ಒಳ್ಳೆಯ ಮಳೆ ಬೆಳೆಯಾಗಿ ಸರ್ಕಾರ ಇನ್ನಷ್ಟು ಉತ್ತಮ ಕೆಲಸ ಮಾಡುತ್ತದೆ. ಸಿದ್ದರಾಮಯ್ಯ ಅವರಿಗೆ ಶಾಸಕರ ಬೆಂಬಲ ಇದೆ. ಹೀಗಾಗಿ 5 ವರ್ಷ ಸಿಎಂ ಆಗಿರುತ್ತಾರೆ ಅಂದುಕೊಂಡಿದ್ದೇನೆ. ಈ ವಿಚಾರದ ಬಗ್ಗೆ ಮಾತನಾಡುವಷ್ಟು ದೊಡ್ಡವನು ನಾನಲ್ಲ.
ಶಾಸಕರ ಬೆಂಬಲ ಇಲ್ಲದಿದ್ದರೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುತ್ತಿರಲಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಕೆ ಶಿವಕುಮಾರ್ ಮೈಸೂರಿನಲ್ಲಿ ಹೇಳಿಕೆ ನೀಡಿದರು.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಮೈಸೂರಿನಲ್ಲಿ ಬೆಳ್ಳಂಬೆಳಗ್ಗೆ ಜಿಲ್ಲಾಡಳಿತದ ಗರ್ಜನೆ: ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಜಾಗ ತೆರವು

February 6, 2026
ಮುಖಪುಟಮೈಸೂರು ನಗರ

ರಾಜ್ಯ ಮತ್ತು ಮೈಸೂರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾಧ್ಯಮ ಪ್ರತಿನಿಧಿಗಳಿಗೆ ಸನ್ಮಾನ

November 11, 2025
ಮುಖಪುಟಮೈಸೂರು ಗ್ರಾಮಾಂತರ

ಹೆಚ್ ಡಿ ಕೋಟೆ: ಕಣಿಯನಹುಂಡಿ ಗ್ರಾಮದ ಬಳಿ ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಆತಂಕ

January 29, 2026
ಮುಖಪುಟಮೈಸೂರು ನಗರ

ಕೌನ್ಸಿಲ್‌ ಪ್ರಕ್ರಿಯೆ ತಡೆಗೆ ಆಗ್ರಹ : ನಾಳೆಯಿಂದ ಅತಿಥಿ ಉಪನ್ಯಾಸಕರ ಅನಿರ್ಧಿಷ್ಟಾವಧಿ ಪ್ರತಿಭಟನೆ !

December 2, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?