ಮೈಸೂರು, ನವೆಂಬರ್ 3, 2025 : ಗ್ರೇಟರ್ ಮೈಸೂರು ಮಹಾನಗರ ರಚನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮೈಸೂರಿನಲ್ಲಿ ಇಂದು ಪ್ರಮುಖ ಸಭೆ ನಡೆಯಿತು. ಮೈಸೂರು ಮಹಾನಗರಪಾಲಿಕೆಯ ವಲಯ ಕಚೇರಿ 3 ರಲ್ಲಿ ಈ ಮಹತ್ವದ ಮೊದಲ ಸಭೆ ಆಯೋಜಿಸಲಾಗಿತ್ತು.

ಈ ಸಭೆಯಲ್ಲಿ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ಹಾಗೂ ಉನ್ನತ ಅಧಿಕಾರಿಗಳು ಭಾಗವಹಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್ ಸಿ ಮಹದೇವಪ್ಪ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ, ಸಂಸದ ಸುನಿಲ್ ಬೋಸ್, ಶಾಸಕರಾದ ತನ್ವೀರ್ ಸೇಠ್, ಜಿ ಟಿ ದೇವೇಗೌಡ ಸೇರಿದಂತೆ ಜಿಲ್ಲೆಯ ಇತರ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರುಗಳು ಉಪಸ್ಥಿತರಿದ್ದರು.
ಜಿಲ್ಲಾಡಳಿತದ ಪ್ರಮುಖ ಅಧಿಕಾರಿಗಳು ಕೂಡ ಸಭೆಯಲ್ಲಿ ಹಾಜರಿದ್ದು, ಗ್ರೇಟರ್ ಮೈಸೂರು ರಚನೆ ಸಂಬಂಧ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.
