PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು ಫ್ಲೈ ಓವರ್ ವಿರೋಧಿಸಿ ಕಾನೂನಾತ್ಮಕ ಹೋರಾಟ : ಸಂಸದ ಯದುವೀರ್ ಎಚ್ಚರಿಕೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರು ಫ್ಲೈ ಓವರ್ ವಿರೋಧಿಸಿ ಕಾನೂನಾತ್ಮಕ ಹೋರಾಟ : ಸಂಸದ ಯದುವೀರ್ ಎಚ್ಚರಿಕೆ
ಮುಖಪುಟಮೈಸೂರು ನಗರರಾಜಕೀಯ

ಮೈಸೂರು ಫ್ಲೈ ಓವರ್ ವಿರೋಧಿಸಿ ಕಾನೂನಾತ್ಮಕ ಹೋರಾಟ : ಸಂಸದ ಯದುವೀರ್ ಎಚ್ಚರಿಕೆ

Prathinidhi News
Last updated: November 5, 2025 11:07 am
Prathinidhi News
Published November 5, 2025
Share
SHARE

ಮೈಸೂರು, ನವೆಂಬರ್‌ 5, 2025 : ಮೈಸೂರು ನಗರದ ಜೆಎಲ್‌ಬಿ ರಸ್ತೆ ಮತ್ತು ವಿನೋಬ ರಸ್ತೆಗಳಲ್ಲಿ ಉದ್ದೇಶಿತ ಎರಡು ಫ್ಲೈ ಓವರ್‌ಗಳ ನಿರ್ಮಾಣಕ್ಕೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ರಸ್ತೆಗಳು ಪಾರಂಪರಿಕ ರಸ್ತೆಗಳಾಗಿರುವುದರಿಂದ ಅವುಗಳನ್ನು ಹಾಗೆಯೇ ಉಳಿಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Contents
ಬೆಳಗಾವಿ ರೈತರ ಪ್ರತಿಭಟನೆ: ರಾಜ್ಯ ಸರ್ಕಾರದ ಕರ್ತವ್ಯ ಹುಲಿ ದಾಳಿ ಹೆಚ್ಚಳ: ಶಾಶ್ವತ ಪರಿಹಾರಕ್ಕೆ ಒತ್ತಾಯ

ಜನರ ಅಭಿಪ್ರಾಯ ಪಡೆಯದೇ ಡಿಪಿಆರ್ ಸಿದ್ಧಪಡಿಸಿ ಫ್ಲೈ ಓವರ್ ನಿರ್ಮಾಣಕ್ಕೆ ಮುಂದಾಗಿದ್ದಾರೆ. ವಿನೋಬ ರಸ್ತೆಯಲ್ಲಿ ಫ್ಲೈ ಓವರ್ ನಿರ್ಮಿಸಿದರೆ ಮರಗಳ ಹನನವಾಗಲಿದೆ.ಅಭಿವೃದ್ಧಿಯ ನೆಪದಲ್ಲಿ ಮೈಸೂರಿನ ಪಾರಂಪರಿಕ ನಗರಿಯ ಗುರುತು ಮತ್ತು ಸೌಂದರ್ಯ ಹಾಳು ಮಾಡಬಾರದು.ಗ್ರೇಟರ್ ಮೈಸೂರು ಸಭೆಯಲ್ಲಿ ಮುಖ್ಯಮಂತ್ರಿಗಳು ಮೈಸೂರಿನ ಪಾರಂಪರಿಕತೆಯನ್ನು ಉಳಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ಸಿಎಂ ಸಲಹೆಯಂತೆ ಅಧಿಕಾರಿಗಳು ನಡೆದುಕೊಳ್ಳಬೇಕು ಎಂದು ಸಂಸದರು ಎಚ್ಚರಿಕೆ ನೀಡಿದ್ದು, ಜನರ ವಿರೋಧದ ನಡುವೆಯೂ ಕಾಮಗಾರಿ ಕೈಗೆತ್ತಿಕೊಂಡರೆ, ಕಾನೂನಾತ್ಮಕ ಹೋರಾಟ ಮಾಡುವುದಾಗಿ ತಿಳಿಸಿದ್ದಾರೆ. ಜೊತೆಗೆ, ಜನರ ಸಹಕಾರದೊಂದಿಗೆ ಹೋರಾಟ ರೂಪಿಸುವುದಾಗಿಯೂ ಹೇಳಿದ್ದಾರೆ.

ಫ್ಲೈ ಓವರ್ ನಿರ್ಮಾಣ ಶಾಶ್ವತ ಪರಿಹಾರವಲ್ಲ. ಮೆಟ್ರೋ ಮಾರ್ಗ ನಿರ್ಮಾಣಕ್ಕೆ ತಮ್ಮ ವಿರೋಧವಿಲ್ಲ. ಮುಂಬೈ ಮಾದರಿಯಲ್ಲಿ ಅಂಡರ್‌ಗ್ರೌಂಡ್‌ನಲ್ಲಿ ಮೆಟ್ರೋ ನಿರ್ಮಾಣ ಮಾಡಲಿ. ಮೈಸೂರಿನ ಜನಸಂಖ್ಯೆಗೆ ಅನುಗುಣವಾಗಿ ಕಾಮಗಾರಿ ಕೈಗೊಳ್ಳಬೇಕು.  ಗ್ರೇಟರ್ ಮೈಸೂರಿನಿಂದ ಒಳಿತಾಗಲಿದೆ. ಆದರೆ, ಅದನ್ನು ಪೂರ್ವ ತಯಾರಿ ಮಾಡಿಕೊಂಡು, ಸ್ಥಳೀಯರಿಗೆ ಅನುಕೂಲವಾಗುವಂತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಬೇಕು. ಬೆಂಗಳೂರು ಮಾದರಿಯಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಬಾರದು ಎಂದು ಹೇಳಿದರು.

- ಜಾಹೀರಾತು -

ಬೆಳಗಾವಿ ರೈತರ ಪ್ರತಿಭಟನೆ: ರಾಜ್ಯ ಸರ್ಕಾರದ ಕರ್ತವ್ಯ

ಬೆಳಗಾವಿಯಲ್ಲಿ ರೈತರು ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡುವಂತೆ ನಡೆಸುತ್ತಿರುವ ಪ್ರತಿಭಟನೆಯ ಕುರಿತು ಮಾತನಾಡಿದ ಸಂಸದರು, ಇದು ರಾಜ್ಯ ಸರ್ಕಾರದ ಕರ್ತವ್ಯವಾಗಿದ್ದು, ರೈತರ ಮನವಿಗೆ ಸರ್ಕಾರ ಕೂಡಲೇ ಸ್ಪಂದಿಸಬೇಕು ಎಂದು ಆಗ್ರಹಿಸಿದರಲ್ಲದೆ, ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಸಿದ್ದರಾಮಯ್ಯನವರು ಏನೇ ಆದರೂ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಾರೆ. ಅದನ್ನು ಬಿಟ್ಟು, ರೈತರ ಸಮಸ್ಯೆ ಬಗೆಹರಿಸಲಿ ಎಂದು ಟೀಕಿಸಿದರು.

 ಹುಲಿ ದಾಳಿ ಹೆಚ್ಚಳ: ಶಾಶ್ವತ ಪರಿಹಾರಕ್ಕೆ ಒತ್ತಾಯ

ಮೈಸೂರು ಜಿಲ್ಲೆಯ ಕಾಡಂಚಿನ ಗ್ರಾಮಗಳಲ್ಲಿ ಹುಲಿಗಳ ದಾಳಿ ಹೆಚ್ಚುತ್ತಿರುವ ಕುರಿತು ಪ್ರತಿಕ್ರಿಯಿಸಿದ ಯದುವೀರ್, ಅರಣ್ಯ ಇಲಾಖೆ ಸರಿಯಾದ ರೀತಿಯಲ್ಲಿ ಸ್ಪಂದಿಸಬೇಕು ಮತ್ತು ದತ್ತಾಂಶಗಳನ್ನು ಪರಿಶೀಲಿಸಿ, ಅರಣ್ಯದಲ್ಲಿರುವ ಹುಲಿಗಳ ಸಂಖ್ಯೆ ನೋಡಬೇಕು ಎಂದರು. ಕಾಡಂಚಿನಲ್ಲಿ ಮನುಷ್ಯನ ಅತಿಯಾದ ಹಸ್ತಕ್ಷೇಪ ತಪ್ಪಬೇಕು. ಮನುಷ್ಯ ಪ್ರಕೃತಿಗೆ ಕೈ ಹಾಕುವುದು ಬೇಡ.ಇತ್ತೀಚೆಗೆ ಹುಲಿಗಳ ಸಂಖ್ಯೆ ಹೆಚ್ಚಿರುವುದರಿಂದ ಕಾಡಿನಿಂದ ಹೊರ ಬರುತ್ತಿವೆ. ರೆಸಾರ್ಟ್‌ಗಳು, ಸಫಾರಿ ಸಮಯ ಹೆಚ್ಚಳದಿಂದ ಹುಲಿ ದಾಳಿ ಹೆಚ್ಚುತ್ತಿಲ್ಲ. ಅರಣ್ಯದಲ್ಲಿ ಲಂಟಾನ ಯಥೇಚ್ಛವಾಗಿ ಬೆಳೆದಿರುವುದರಿಂದ ಜಿಂಕೆ, ಸಾಂಬರ್‌ನಂತಹ ಸಸ್ಯಾಹಾರಿ ಪ್ರಾಣಿಗಳು ಆಹಾರ ಹುಡುಕುತ್ತಾ ಹೊರಬರುತ್ತಿವೆ. ಇವುಗಳನ್ನು ಬೇಟೆಯಾಡಲು ಹುಲಿಗಳು ಕಾಡಿನಿಂದ ಹೊರ ಬರುತ್ತಿವೆ.

ಈ ಬಗ್ಗೆ ಸಮಗ್ರ ಅಧ್ಯಯನವಾಗಬೇಕು. ಜನರಿಗೆ ತೊಂದರೆಯಾಗದಂತೆ ಶಾಶ್ವತ ಪರಿಹಾರಕ್ಕೆ ಉತ್ತಮ ಯೋಜನೆ ರೂಪಿಸಬೇಕು ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮೈಸೂರಿನಲ್ಲಿ ಹೇಳಿಕೆ ನೀಡಿದರು.

 

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟರಾಜಕೀಯ

ಗ್ಯಾರಂಟಿ ಯೋಜನೆಗೆ ಸ್ವಪಕ್ಷದಲ್ಲೇ ತಕರಾರು..! ಗ್ಯಾರಂಟಿ ಯೋಜನೆ ಮಾತ್ರ ನಂಬಿಕೊಂಡು ಚುನಾವಣೆ ಎದುರಿಸಲು ಸಾಧ್ಯವಿಲ್ಲ ಎಂದ ಶಾಸಕರು !

December 10, 2025
ಬೆಂಗಳೂರುಮುಖಪುಟರಾಜಕೀಯ

We the people of INDIA ಎನ್ನುವುದೇ ನಮ್ಮ ಸಂವಿಧಾನದ ಮೂಲ ಮಂತ್ರ ; ಸಿಎಂ ಸಿದ್ದರಾಮಯ್ಯ

November 26, 2025
ಬೆಂಗಳೂರುಮುಖಪುಟ

IT Raid in bangalore :ರಾಜಧಾನಿಯ ವಿವಿಧೆಡೆ IT ದಾಳಿ.., ಮರೆಮಾಚಿದ್ದ 100 ಕೋಟಿ ರೂ ಮೌಲ್ಯದ ವಹಿವಾಟು ಪತ್ತೆ !

November 29, 2025
ಮಂಗಳೂರುಮುಖಪುಟರಾಜಕೀಯ

ಪ್ರಧಾನಿ ಮೋದಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮನ ; ಉಡುಪಿ ಕಾರ್ಯಕ್ರಮಕ್ಕೆ ಪ್ರಯಾಣ

November 28, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?