PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ನಾಗರಹೊಳೆ ಹಾಗೂ ಬಂಡೀಪುರದಲ್ಲಿ ಸಫಾರಿ, ಚಾರಣ ಇಂದಿನಿಂದಲೇ ಬಂದ್ : ಸಚಿವ ಈಶ್ವರ ಖಂಡ್ರೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ನಾಗರಹೊಳೆ ಹಾಗೂ ಬಂಡೀಪುರದಲ್ಲಿ ಸಫಾರಿ, ಚಾರಣ ಇಂದಿನಿಂದಲೇ ಬಂದ್ : ಸಚಿವ ಈಶ್ವರ ಖಂಡ್ರೆ
ಮುಖಪುಟಮೈಸೂರು ನಗರರಾಜಕೀಯ

ನಾಗರಹೊಳೆ ಹಾಗೂ ಬಂಡೀಪುರದಲ್ಲಿ ಸಫಾರಿ, ಚಾರಣ ಇಂದಿನಿಂದಲೇ ಬಂದ್ : ಸಚಿವ ಈಶ್ವರ ಖಂಡ್ರೆ

Prathinidhi News
Last updated: November 7, 2025 1:10 pm
Prathinidhi News
Published November 7, 2025
Share
SHARE

ಮೈಸೂರು, ನವೆಂಬರ್‌ 07, 2025 : ನಾಗರಹೊಳೆ ಮತ್ತು ಬಂಡೀಪುರ ಸಫಾರಿಯನ್ನು ಹಾಗೂ ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಿ, ಸಿಬ್ಬಂದಿಯನ್ನು ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ.

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿರುವ ಅವರು, ಸರಗೂರು ತಾಲೂಕು ಮೊಳೆಯೂರು ವಲಯದ ಹಳೆ ಹೆಗ್ಗೋಡಿಲು ಗ್ರಾಮದ ಬಳಿ ಇಂದು ಬೆಳಗ್ಗೆ ಚೌಡಯ್ಯ ನಾಯ್ಕ (65) ಎಂಬುವವರು ಹುಲಿ ದಾಳಿಯಿಂದ ಮೃತಪಟ್ಟಿರುವ ಬಗ್ಗೆ ತೀವ್ರ ನೋವು ವ್ಯಕ್ತಪಡಿಸಿದ್ದು, ಮುಂದಿನ ಆದೇಶದವರೆಗೆ ಎರಡೂ ಕಡೆ ಸಫಾರಿ ಬಂದ್ ಮಾಡಿ, ಅಧಿಕಾರಿ ಮತ್ತು ಸಿಬ್ಬಂದಿಯ ಸೇವೆಯನ್ನು ಹುಲಿ ಸೆರೆ ಕಾರ್ಯಾಚರಣೆ ಬಳಸಿಕೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.

ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಬಂಡೀಪುರ, ನಾಗರಹೊಳೆ ಅರಣ್ಯದಂಚಿನಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ ಹುಲಿ ದಾಳಿಯಿಂದ ಮೂರು ಅಮೂಲ್ಯ ಜೀವ ಹಾನಿ ಆಗಿರುವುದು ಅತೀವ ನೋವು ತಂದಿದೆ ಎಂದೂ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಹುಲಿ ದಾಳಿಯ ನಂತರ ಅಕ್ಟೋಬರ್ 27ರಂದು ಬಂಡೀಪುರದಲ್ಲಿ ಅಧಿಕಾರಿಗಳ ಸಭೆ ನಡೆಸಿ ಹಾಗೂ ಕಳೆದ 2ರಂದು ಚಾಮರಾಜನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಮತ್ತು ಸಮಾಜ ಕಲ್ಯಾಣ ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ ಹಾಗೂ ಶಾಸಕರುಗಳ ಸಮ್ಮುಖದಲ್ಲಿ ರೈತರು, ಸಾರ್ವಜನಿಕರೊಂದಿಗೆ ಸಂವಾದ ನಡೆಸಿ, ಹುಲಿ ಸೆರೆಗೆ ಎಲ್ಲ ಸಾಧ್ಯ ಕ್ರಮ ಕೈಗೊಳ್ಳುವಂತೆ ಸೂಚಿಸುವುದರ ಜೊತೆಗೆ ಸಫಾರಿ ಬಂದ್ ಮಾಡುವ ಎಚ್ಚರಿಕೆಯನ್ನೂ ನೀಡಿದ್ದರೂ ಮತ್ತೊಂದು ದಾರುಣ ಘಟನೆ ಸಂಭವಿಸಿರುವುದು ಆಘಾತ ತಂದಿದೆ ಎಂದು ತಿಳಿಸಿದ್ದಾರೆ.

- ಜಾಹೀರಾತು -

ಈ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಇಂದಿನಿಂದಲೇ ನಾಗರಹೊಳೆ ಮತ್ತು ಬಂಡೀಪುರದಲ್ಲಿ ಸಫಾರಿ ಬಂದ್ ಮಾಡಲು ಮತ್ತು ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಟ್ರಕ್ಕಿಂಗ್ (ಚಾರಣ) ಸ್ಥಗಿತಗೊಳಿಸಲು ಹಾಗೂ ಬಂಡೀಪುರ, ನಾಗರಹೊಳೆ ಸಫಾರಿಯ ಕಾರ್ಯದಲ್ಲಿ ನಿಯೋಜನೆಗೊಂಡಿರುವ ಎಲ್ಲ ಅಧಿಕಾರಿಗಳು ಮತ್ತು ವಾಹನ ಚಾಲಕರ ಸಹಿತ ಎಲ್ಲ ಸಿಬ್ಬಂದಿ ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜನೆ ಮಾಡಲು ಹಾಗೂ ವನ್ಯಜೀವಿ ವಿಭಾಗದ ಎಪಿಸಿಸಿಎಫ್ ಮತ್ತು ಹುಲಿ ಯೋಜನೆಯ ನಿರ್ದೇಶಕರು ಸ್ಥಳದಲ್ಲೇ ಮೊಕ್ಕಾಂ ಹೂಡಿ ಪದೆ ಪದೇ ದಾಳಿ ಮಾಡುತ್ತಿರುವ ಹುಲಿಯನ್ನು ಹಿಡಿಯಲು ಕ್ರಮ ಕೈಗೊಳ್ಳುವಂತೆ ಸ್ಪಷ್ಟ ಸೂಚನೆ ನೀಡಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಮಾಜಿ MLC ಸಿದ್ದರಾಜು ಕೋಟ್ಯಾಂತರ ಆಸ್ತಿ ಮೇಲೆ ಭೂಗಳ್ಳರ ಕಣ್ಣು ! ನಕಲಿ ದಾಖಲೆ ಸೃಷ್ಟಿಸಿ ನಿವೇಶನ ನೋಂದಣಿಗೆ ಯತ್ನ..!

December 24, 2025
ಮುಖಪುಟರಾಜಕೀಯ

ಪಂಚಭೂತಗಳಲ್ಲಿ ಲೀನರಾದ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ; ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

January 29, 2026
ಮುಖಪುಟಮೈಸೂರು ಗ್ರಾಮಾಂತರ

ಹುಣಸೂರು: ಏಕಕಾಲಕ್ಕೆ ಎರಡು ಹುಲಿಗಳ ದಾಳಿ; ಸಮಯಪ್ರಜ್ಞೆಯಿಂದ ಪಾರಾದ ರೈತ

December 24, 2025
ಮುಖಪುಟಮೈಸೂರು ನಗರ

ಮೈಸೂರು ಮೃಗಾಲಯದ ಹಿರಿಯ ಸದಸ್ಯ ‘ಯುವರಾಜ’ ಜಿರಾಫೆ ಇನ್ನಿಲ್ಲ: ವಯೋಸಹಜ ಸಾವು

January 29, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?