PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರಿನ ಪ್ರತಿಷ್ಠಿತ ಶಾಲೆಯಲ್ಲಿ ರಾಗಿಂಗ್‌ : ವಿದ್ಯಾರ್ಥಿಗೆ ವೃಷಣ ಹಾನಿ- ಶಾಲಾ ಆಡಳಿತ ಮಂಡಳಿ ವಿರುದ್ಧ ಎಫ್‌ಐಆರ್ !
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಕ್ರೈಂ ಸುದ್ದಿಗಳು > ಮೈಸೂರಿನ ಪ್ರತಿಷ್ಠಿತ ಶಾಲೆಯಲ್ಲಿ ರಾಗಿಂಗ್‌ : ವಿದ್ಯಾರ್ಥಿಗೆ ವೃಷಣ ಹಾನಿ- ಶಾಲಾ ಆಡಳಿತ ಮಂಡಳಿ ವಿರುದ್ಧ ಎಫ್‌ಐಆರ್ !
ಕ್ರೈಂ ಸುದ್ದಿಗಳುಮುಖಪುಟಮೈಸೂರು ನಗರ

ಮೈಸೂರಿನ ಪ್ರತಿಷ್ಠಿತ ಶಾಲೆಯಲ್ಲಿ ರಾಗಿಂಗ್‌ : ವಿದ್ಯಾರ್ಥಿಗೆ ವೃಷಣ ಹಾನಿ- ಶಾಲಾ ಆಡಳಿತ ಮಂಡಳಿ ವಿರುದ್ಧ ಎಫ್‌ಐಆರ್ !

Prathinidhi News
Last updated: November 10, 2025 11:21 am
Prathinidhi News
Published November 10, 2025
Share
SHARE

ಮೈಸೂರು, ನವೆಂಬರ್‌ 10, 2025 : ಮೈಸೂರಿನ ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯೊಂದರಲ್ಲೇ ವಿದ್ಯಾರ್ಥಿಗಳು ರಾ​‍್ಯಾಗಿಂಗ್ ನಡೆಸಿದ್ದು, ಹಿರಿಯ ವಿದ್ಯಾರ್ಥಿಗಳ ಹಲ್ಲೆಯಿಂದಾಗಿ 13 ವರ್ಷದ ಬಾಲಕನೊಬ್ಬ ವೃಷಣವನ್ನೇ ಕಳೆದುಕೊಳ್ಳುವ ಪರಿಸ್ಥಿತಿ ಎದುರಾಗಿದೆ. ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿ ಸದ್ಯ ಹಾಸಿಗೆ ಹಿಡಿದಿದ್ದು, ಶಾಲೆ ಮತ್ತು ಹಲ್ಲೆ ಮಾಡಿದ ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಘಟನೆ ನಡೆದಿರುವುದು ಜಯಲಕ್ಷ್ಮೀಪುರಂನಲ್ಲಿರುವ ಫೇಮಸ್ ಶಾಲೆಯೊಂದರಲ್ಲಿ. ಕುವೆಂಪುನಗರದ ನಿವಾಸಿಯಾಗಿರುವ ಹಲ್ಲೆಗೊಳಗಾದ ಬಾಲಕನ ಮೇಲೆ ಮೂವರು ಸಹಪಾಠಿಗಳು ಸಿನಿಮಾ ಸ್ಟೈಲ್‌ನಲ್ಲೇ ಅಟ್ಯಾಕ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.

Contents
ಮೈಸೂರು, ನವೆಂಬರ್‌ 10, 2025 : ಮೈಸೂರಿನ ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯೊಂದರಲ್ಲೇ ವಿದ್ಯಾರ್ಥಿಗಳು ರಾ​‍್ಯಾಗಿಂಗ್ ನಡೆಸಿದ್ದು, ಹಿರಿಯ ವಿದ್ಯಾರ್ಥಿಗಳ ಹಲ್ಲೆಯಿಂದಾಗಿ 13 ವರ್ಷದ ಬಾಲಕನೊಬ್ಬ ವೃಷಣವನ್ನೇ ಕಳೆದುಕೊಳ್ಳುವ ಪರಿಸ್ಥಿತಿ ಎದುರಾಗಿದೆ. ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿ ಸದ್ಯ ಹಾಸಿಗೆ ಹಿಡಿದಿದ್ದು, ಶಾಲೆ ಮತ್ತು ಹಲ್ಲೆ ಮಾಡಿದ ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.ಎಫ್‌ಐಆರ್ ದಾಖಲು: ಪ್ರಮುಖರ ಬಂಧನಕ್ಕೆ ಆಗ್ರಹ

ಮೂವರು ಸಹ ವಿದ್ಯಾರ್ಥಿಗಳು ಬಾಲಕನನ್ನು ಜಾಡಿಸಿ ಒದ್ದ ಪರಿಣಾಮ, ಆತನಿಗೆ ಗಂಭೀರ ಗಾಯವಾಗಿದ್ದು, ವೃಷಣ ಆಪರೇಷನ್‌ ಮಾಡಿಸುವ ಪರಿಸ್ಥಿತಿ ಎದುರಾಗಿದೆ. ಓದಿ, ಆಟವಾಡಬೇಕಿದ್ದ ಮಗನ ಸ್ಥಿತಿ ಕಂಡು ಪೋಷಕರು ಮತ್ತು ತಾಯಿ ರೋಧಿಸುತ್ತಿದ್ದಾರೆ. ಈ ಘಟನೆಯಿಂದಾಗಿ ಮಗನ ಭವಿಷ್ಯದ ಬಗ್ಗೆ ಪೋಷಕರು ಬೆಚ್ಚಿಬಿದ್ದಿದ್ದಾರೆ.

ಎಫ್‌ಐಆರ್ ದಾಖಲು: ಪ್ರಮುಖರ ಬಂಧನಕ್ಕೆ ಆಗ್ರಹ

ಈ ಗಂಭೀರ ಘಟನೆ ನಡೆದು ಇಷ್ಟಾದರೂ ವಿದ್ಯಾಸಂಸ್ಥೆ ಯಾವುದೇ ಕ್ರಮಕ್ಕೆ ಮುಂದಾಗದೆ ಮೌನಕ್ಕೆ ಶರಣಾಗಿತ್ತು ಎಂಬ ಆರೋಪ ಕೇಳಿಬಂದಿದೆ. ಹಾಗಾಗಿ, ಪೋಷಕರು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನೆರವು ಕೇಳಿಕೊಂಡಿದ್ದಾರೆ. ಪೋಷಕರ ದೂರಿನ ಮೇರೆಗೆ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ಮೂವರು ಬಾಲಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಎ1 ಆರೋಪಿ: ಶಾಲಾ ಆಡಳಿತ ಮಂಡಳಿಯ ಮುಖ್ಯಸ್ಥರು ಹಾಗೂ ಶಿಕ್ಷಕರು.

- ಜಾಹೀರಾತು -

ಇತರೆ ಆರೋಪಿಗಳು: ಮೂವರು ಹಲ್ಲೆ ಮಾಡಿದ ಬಾಲಕರು (ಜೆ1, ಜೆ2, ಜೆ3).

ಎಫ್‌ಐಆರ್‌ನಲ್ಲಿ ಕಲಂ 115(2), 117(2), 125(ಬಿ), ಬಿಎನ್‌ಎಸ್ ಆ್ಯಕ್ಟ್ 2023 ಕಲಂ 75 ಹಾಗೂ ಜೆಜೆ ಆ್ಯಕ್ಟ್ 2015 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರತಿಷ್ಠಿತ ವಿದ್ಯಾಸಂಸ್ಥೆ ಮತ್ತು ಸಹ ವಿದ್ಯಾರ್ಥಿಗಳ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಳ್ಳುತ್ತಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಬೆಂಗಳೂರುಮುಖಪುಟ

IT Raid in bangalore :ರಾಜಧಾನಿಯ ವಿವಿಧೆಡೆ IT ದಾಳಿ.., ಮರೆಮಾಚಿದ್ದ 100 ಕೋಟಿ ರೂ ಮೌಲ್ಯದ ವಹಿವಾಟು ಪತ್ತೆ !

November 29, 2025
ಬೆಂಗಳೂರುಮುಖಪುಟಸಿನಿಮಾ

ಯಶ್ ‘TOXIC’ ರಿಲೀಸ್ ಗೆ 100 ದಿನ ಬಾಕಿ.. ಸ್ಪೆಷಲ್ ಪೋಸ್ಟ್ ಹಂಚಿಕೊಂಡ ರಾಕಿ ಭಾಯ್..

December 9, 2025
ಬೆಂಗಳೂರುಮುಖಪುಟರಾಜಕೀಯ

ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಮಣಿಪಾಲ್ ಆಸ್ಪತ್ರೆಗೆ ತೆರಳಿ ರೋಟೀನ್ ಚೆಕ್ ಅಪ್ ಮಾಡಿಸಿದ ಸಿಎಂ ಸಿದ್ದರಾಮಯ್ಯ!

November 29, 2025
ಮುಖಪುಟಮೈಸೂರು ನಗರ

ಚಾಮುಂಡಿ ಬೆಟ್ಟದಲ್ಲಿ ಅವೈಜ್ಞಾನಿಕ ಕಾಮಗಾರಿ: ಚಾಮುಂಡೇಶ್ವರಿಯ ಶಾಪ ತಟ್ಟಲಿದೆ ಎಂದು ಮುಖಂಡರ ಎಚ್ಚರಿಕೆ

February 12, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?