PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಸರಗೂರು: ರೈತರನ್ನು ಬಲಿ ಪಡೆದಿದ್ದ ಮತ್ತೊಂದು ಹುಲಿ ಸೆರೆ! ಗ್ರಾಮಸ್ಥರ ನಿಟ್ಟುಸಿರು
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಸರಗೂರು: ರೈತರನ್ನು ಬಲಿ ಪಡೆದಿದ್ದ ಮತ್ತೊಂದು ಹುಲಿ ಸೆರೆ! ಗ್ರಾಮಸ್ಥರ ನಿಟ್ಟುಸಿರು
ಮುಖಪುಟಮೈಸೂರು ಗ್ರಾಮಾಂತರ

ಸರಗೂರು: ರೈತರನ್ನು ಬಲಿ ಪಡೆದಿದ್ದ ಮತ್ತೊಂದು ಹುಲಿ ಸೆರೆ! ಗ್ರಾಮಸ್ಥರ ನಿಟ್ಟುಸಿರು

Prathinidhi News
Last updated: November 10, 2025 11:29 am
Prathinidhi News
Published November 10, 2025
Share
SHARE

ಸರಗೂರು, ಮೈಸೂರು ಜಿಲ್ಲೆ: ಕಾಡಂಚಿನ ಗ್ರಾಮಗಳಲ್ಲಿ ರೈತರ ಮೇಲೆ ನಿರಂತರ ದಾಳಿ ನಡೆಸಿ ಆತಂಕ ಹುಟ್ಟಿಸಿದ್ದ ಮತ್ತೊಂದು ಗಂಡು ಹುಲಿಯನ್ನು ಅರಣ್ಯ ಇಲಾಖೆ ನಿನ್ನೆ(ನ, 9) ಯಶಸ್ವಿಯಾಗಿ ಸೆರೆ ಹಿಡಿದಿದೆ.

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಮೊಳೆಯೂರು ವಲಯದಲ್ಲಿ ನಡೆದ ಅರಣ್ಯ ಇಲಾಖೆಯ ಕಾರ್ಯಾಚರಣೆಯಲ್ಲಿ ರೈತರನ್ನು ಬಲಿಪಡೆದು ಆತಂಕ ಸೃಷ್ಟಿಸಿದ್ದ ಗಂಡು ಹುಲಿಯೊಂದು ಸೆರೆಯಾಗಿದೆ.

ಕೂಡಿಗಿ ಗ್ರಾಮದ ರೈತ ದೊಡ್ಡನಿಂಗಯ್ಯ ಅವರ ಸಾವಿಗೆ ಕಾರಣವಾಗಿದ್ದ ಈ ಹುಲಿಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದರು. ಸಾಕಾನೆಗಳ ಸಹಾಯದಿಂದ ಹುಲಿಯ ಇರುವಿಕೆಯನ್ನು ಪತ್ತೆ ಹಚ್ಚಿ, ಅಂತಿಮವಾಗಿ ಅರವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿಯಲಾಯಿತು.

ಗಾಯಗೊಂಡು ಬೇಟೆಯಾಡಲು ಅಶಕ್ತ:

- ಜಾಹೀರಾತು -

ಸೆರೆ ಸಿಕ್ಕ ಹುಲಿಯ ಕುತ್ತಿಗೆ ಭಾಗದಲ್ಲಿ ಆಳವಾದ ಗಾಯ ಕಂಡುಬಂದಿದೆ. ಈ ಗಾಯವು ಉರುಳಿಗೆ ಸಿಲುಕಿ ಆಗಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಗಾಯಗೊಂಡ ಕಾರಣದಿಂದ ಬೇಟೆಯಾಡುವ ಸಾಮರ್ಥ್ಯ ಕಳೆದುಕೊಂಡಿದ್ದ ಹುಲಿಯು, ಸುಲಭ ಆಹಾರಕ್ಕಾಗಿ ಜನ ಮತ್ತು ಜಾನುವಾರುಗಳ ಮೇಲೆ ದಾಳಿ ನಡೆಸಿರಬಹುದು ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

ಈ ಹುಲಿ ಸೆರೆಯಿಂದ ಕಳೆದ ಕೆಲವು ದಿನಗಳಿಂದ ಹುಲಿಯ ಭಯದಲ್ಲಿ ದಿನ ದೂಡುತ್ತಿದ್ದ ಕಾಡಂಚಿನ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಹುಲಿ ದಾಳಿಯಿಂದ ಮೃತಪಟ್ಟವರ ಡಿಎನ್‌ಎ ಮತ್ತು ಸೆರೆ ಸಿಕ್ಕ ಹುಲಿಯ ಡಿಎನ್‌ಎ ಪರೀಕ್ಷೆ ನಡೆಸಿ, ಇದು ಮನುಷ್ಯರ ಮೇಲೆ ದಾಳಿ ಮಾಡಿದ ಹುಲಿಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಕ್ರೈಂ ಸುದ್ದಿಗಳುಮುಖಪುಟಮೈಸೂರು ನಗರ

ಮೈಸೂರು: ಯುವಕನ ಕೊಲೆ ಮತ್ತು ಆರ್‌ಎಫ್‌ಒ ಸಾವು ಪ್ರಕರಣ – ಪೊಲೀಸ್ ಆಯುಕ್ತರಿಂದ ಅಧಿಕೃತ ಮಾಹಿತಿ

January 20, 2026
ಕ್ರೈಂ ಸುದ್ದಿಗಳುಮಂಡ್ಯಮುಖಪುಟಮೈಸೂರು ನಗರ

ಕಳ್ಳರ ‘ಹಾಟ್ ಸ್ಪಾಟ್’ ಆದ ಶ್ರೀರಂಗಪಟ್ಟಣ ಬಸ್ ನಿಲ್ದಾಣ : ಪೊಲೀಸರಿಗೂ ಸವಾಲಾದ ಕಳ್ಳತನ ಪ್ರಕರಣಗಳು

December 16, 2025
ಮುಖಪುಟರಾಜಕೀಯ

ಜೂನ್ 2026 ರ ಒಳಗೆ ತುಂಗಭದ್ರಾ ಜಲಾಶಯಕ್ಕೆ ಹೊಸ ಕ್ರಸ್ಟ್ ಗೇಟ್ : ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್

December 18, 2025
ಬೆಂಗಳೂರುಮುಖಪುಟರಾಜಕೀಯ

ಆರ್ಥಿಕ ಸುಧಾರಣೆಗೆ ಸಂಪನ್ಮೂಲ ಕ್ರೋಢೀಕರಣ ಸಮಿತಿ ವರದಿ ಸಲ್ಲಿಕೆ

November 7, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?