PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಪರಪ್ಪನ ಅಗ್ರಹಾರ ಜೈಲಿನ ರಾಜಾತಿತ್ಯ ವೀಡಿಯೋ ವೈರಲ್ ; ಡಿ ಬಾಸ್‌ ಆಪ್ತ ನಟ ದನ್ವೀರ್‌ ಸಿಸಿಬಿ ವಶಕ್ಕೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಬೆಂಗಳೂರು > ಪರಪ್ಪನ ಅಗ್ರಹಾರ ಜೈಲಿನ ರಾಜಾತಿತ್ಯ ವೀಡಿಯೋ ವೈರಲ್ ; ಡಿ ಬಾಸ್‌ ಆಪ್ತ ನಟ ದನ್ವೀರ್‌ ಸಿಸಿಬಿ ವಶಕ್ಕೆ
ಬೆಂಗಳೂರುಮುಖಪುಟಸಿನಿಮಾ

ಪರಪ್ಪನ ಅಗ್ರಹಾರ ಜೈಲಿನ ರಾಜಾತಿತ್ಯ ವೀಡಿಯೋ ವೈರಲ್ ; ಡಿ ಬಾಸ್‌ ಆಪ್ತ ನಟ ದನ್ವೀರ್‌ ಸಿಸಿಬಿ ವಶಕ್ಕೆ

Prathinidhi News
Last updated: November 10, 2025 1:41 pm
Prathinidhi News
Published November 10, 2025
Share
SHARE

ಬೆಂಗಳೂರು, ನವೆಂಬರ್‌ 10, 2025 : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನೊಳಗಿನ ಗಂಭೀರ ಲೋಪಗಳನ್ನು ಬಯಲು ಮಾಡುವ ವಿಡಿಯೋಗಳು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಭಾರಿ ಚರ್ಚೆಗೆ ಗ್ರಾಸವಾಗಿವೆ. ಈ ವಿಡಿಯೋಗಳು ಬಿಡುಗಡೆಯಾದ ಬೆನ್ನಲ್ಲೇ, ನಟ ದರ್ಶನ್ ಆಪ್ತ ಗೆಳೆಯ ನಟ ಧನ್ವೀರ್ ಅವರಿಗೆ ಸಂಕಷ್ಟ ಎದುರಾಗಿದೆ. ಈ ವಿಡಿಯೋಗಳನ್ನು ಧನ್ವೀರ್ ಅವರೇ ಬಿಡುಗಡೆ ಮಾಡಿದ್ದಾರೆ ಎಂಬ ಅನುಮಾನದ ಹಿನ್ನೆಲೆಯಲ್ಲಿ ಸಿಸಿಬಿ (CCB) ಪೊಲೀಸರು ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಐಸಿಸ್‌ ಉಗ್ರ ಜುಹಾದ್ ಹಮೀದ್ ಶಕೀಲ್ ಮನ್ನಾ ಮತ್ತು ವಿಕೃತ ಕಾಮಿ ಉಮೇಶ್ ರೆಡ್ಡಿ ಸೇರಿದಂತೆ ಹಲವು ಕೈದಿಗಳು ಜೈಲಿನಲ್ಲಿ ಮೊಬೈಲ್ ಫೋನ್, ಟಿವಿ ಸೇರಿದಂತೆ ವಿಐಪಿ ಸವಲತ್ತುಗಳನ್ನು (ರಾಜಾತಿಥ್ಯ) ಅನುಭವಿಸುತ್ತಿರುವ ದೃಶ್ಯಗಳು ವಿಡಿಯೋಗಳಲ್ಲಿ ಸೆರೆಯಾಗಿದ್ದವು.

ಈ ಸಂಬಂಧ ಸಿಸಿಬಿ ಪೊಲೀಸರು ಭಾನುವಾರದಿಂದ ಧನ್ವೀರ್ ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ.ಅವರ ಮೊಬೈಲ್ ಅನ್ನು ವಶಪಡಿಸಿಕೊಂಡು ಹೆಚ್ಚಿನ ಪರಿಶೀಲನೆಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.ಸೋಮವಾರ ಹೆಚ್ಚಿನ ವಿಚಾರಣೆಗಾಗಿ ಧನ್ವೀರ್ ಅವರನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಈ ವಿಡಿಯೋಗಳು ವೈರಲ್ ಆಗುವುದಕ್ಕೂ ಮುನ್ನ, ದರ್ಶನ್ ಪರ ವಕೀಲರು ನ್ಯಾಯಾಲಯದಲ್ಲಿ, “ದರ್ಶನ್‌ ಅವರಿಗೆ ದಿಂಬು, ಹಾಸಿಗೆಯಂತಹ ಮೂಲ ಸೌಕರ್ಯಗಳನ್ನೂ ನೀಡುತ್ತಿಲ್ಲ, ಆದರೆ ಜೈಲಿನಲ್ಲಿ ಇತರೆ ಕೈದಿಗಳಿಗೆ ವಿಶೇಷ ಸವಲತ್ತುಗಳು ಸಿಗುತ್ತಿವೆ,” ಎಂದು ವಾದಿಸಿದ್ದರು. ಇದರ ಬೆನ್ನಲ್ಲೇ ಈ ವಿಡಿಯೋಗಳು ಹೊರಬಿದ್ದಿರುವುದು ಅನುಮಾನಗಳಿಗೆ ಕಾರಣವಾಗಿದೆ.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಕ್ರೈಂ ಸುದ್ದಿಗಳುಮುಖಪುಟಮೈಸೂರು ನಗರ

ಮೈಸೂರು ಜೈಲಲ್ಲೂ ಕೈದಿಗಳ ಐಷಾರಾಮಿ ಜೀವನ..? ಕಾರಾಗೃಹದಲ್ಲಿ 9 ಮೊಬೈಲ್, 11 ಸಿಮ್ ಕಾರ್ಡ್, 2 ಚಾರ್ಜರ್ ಪತ್ತೆ.!

December 18, 2025
ಮುಖಪುಟಮೈಸೂರು ನಗರ

ಮೈಸೂರು: ಕೆರೆ ಕಟ್ಟೆಗಳಿಗೆ ನೀರು ತುಂಬಿಸಲು ಆಗ್ರಹಿಸಿ ಕಾಡಾ ಕಚೇರಿಗೆ ಮುತ್ತಿಗೆ ಯತ್ನ

February 11, 2026
ಮುಖಪುಟಮೈಸೂರು ನಗರಸಿನಿಮಾ

‘ಮ್ಯಾಕ್ಸ್’ ಅಬ್ಬರ: ಮೈಸೂರಿನ ಸಂಗಮ್ ಚಿತ್ರಮಂದಿರಕ್ಕೆ ನಟ ಕಿಚ್ಚ ಸುದೀಪ್ ಭೇಟಿ!

January 1, 2026
ದೇಶ-ವಿದೇಶಮುಖಪುಟ

ದುಬೈ : ವಿಶ್ವದ ಅತಿದೊಡ್ಡ ವಾಯುಯಾನ ಪ್ರದರ್ಶನದಲ್ಲಿ ತೇಜಸ್‌ ಯುದ್ಧ ವಿಮಾನ ಪತನ !

November 22, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?