PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು: ಕರ್ತವ್ಯದಲ್ಲೇ ಸೆಕ್ಯೂರಿಟಿ ಗಾರ್ಡ್ ಸಾವು ; ರಜೆ ನೀಡದ ಸೂಪರ್‌ವೈಸರ್ ವಿರುದ್ಧ ಆಕ್ರೋಶ, ಪ್ರತಿಭಟನೆ!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರು: ಕರ್ತವ್ಯದಲ್ಲೇ ಸೆಕ್ಯೂರಿಟಿ ಗಾರ್ಡ್ ಸಾವು ; ರಜೆ ನೀಡದ ಸೂಪರ್‌ವೈಸರ್ ವಿರುದ್ಧ ಆಕ್ರೋಶ, ಪ್ರತಿಭಟನೆ!
ಮುಖಪುಟಮೈಸೂರು ನಗರ

ಮೈಸೂರು: ಕರ್ತವ್ಯದಲ್ಲೇ ಸೆಕ್ಯೂರಿಟಿ ಗಾರ್ಡ್ ಸಾವು ; ರಜೆ ನೀಡದ ಸೂಪರ್‌ವೈಸರ್ ವಿರುದ್ಧ ಆಕ್ರೋಶ, ಪ್ರತಿಭಟನೆ!

Prathinidhi News
Last updated: November 12, 2025 1:42 pm
Prathinidhi News
Published November 12, 2025
Share
SHARE

ಮೈಸೂರು, ನವೆಂಬರ್ 12, 2025:ಅನಾರೋಗ್ಯದಿಂದ ಬಳಲುತ್ತಿದ್ದರೂ ರಜೆ ನೀಡದೆ ಸತತವಾಗಿ ಕರ್ತವ್ಯ ನಿರ್ವಹಿಸುವಂತೆ ಒತ್ತಾಯಿಸಿದ್ದ ಸೂಪರ್‌ವೈಸರ್ ಕಿರುಕುಳದಿಂದ ಸೆಕ್ಯೂರಿಟಿ ಗಾರ್ಡ್ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ, ಇಂದು ಮೈಸೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ಭಾರೀ ಪ್ರತಿಭಟನೆ ನಡೆಯಿತು.

ಕರ್ನಾಟಕ ಯುನೈಟೆಡ್ ಸೆಕ್ಯೂರಿಟಿ ವರ್ಕರ್ಸ್ ಯೂನಿಯನ್ ಮೈಸೂರು ಜಿಲ್ಲಾ ಸಮಿತಿ ವತಿಯಿಂದ ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಭವನದ ಮುಖ್ಯ ದ್ವಾರದ ಬಳಿ ಪ್ರತಿಭಟನೆ ನಡೆಸಲಾಯಿತು.

ರಾಜರಾಜೇಶ್ವರಿ ಸೆಕ್ಯೂರಿಟಿ ಏಜೆನ್ಸಿ ಮೂಲಕ ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂಜಯ್ ಎಂಬುವರೇ ಮೃತ ದುರ್ದೈವಿ. ಇತ್ತೀಚೆಗೆ ಸಂಜಯ್ ಅವರು ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದರು. ಅವರು ರಜೆ ಕೇಳಿದ್ದರೂ ಸಹ, ಸೂಪರ್‌ವೈಸರ್ ಆಗಿರುವ ಅರುಣ್ ಕುಮಾರ್ ಅವರು ರಜೆ ನಿರಾಕರಿಸಿ ಕರ್ತವ್ಯಕ್ಕೆ ಹಾಜರಾಗುವಂತೆ ತಾಕೀತು ಮಾಡಿದ್ದರು ಎನ್ನಲಾಗಿದೆ. ಸೂಪರ್‌ವೈಸರ್ ಒತ್ತಡದಿಂದಾಗಿ ಸಂಜಯ್ ಅವರು ಸತತ 11 ದಿನಗಳ ಕಾಲ ಕರ್ತವ್ಯ ನಿರ್ವಹಿಸಿದ್ದರು. ಪರಿಣಾಮವಾಗಿ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟು, ಕರ್ತವ್ಯ ನಿರ್ವಹಿಸುವಾಗಲೇ ಸಾವನ್ನಪ್ಪಿದ್ದಾರೆ.

ಸಂಜಯ್ ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ರೊಚ್ಚಿಗೆದ್ದ ಸಹೋದ್ಯೋಗಿ ಸೆಕ್ಯೂರಿಟಿ ಗಾರ್ಡ್‌ಗಳು ಮತ್ತು ಕಾರ್ಮಿಕ ಮುಖಂಡರು ಸೂಪರ್‌ವೈಸರ್ ಅರುಣ್ ಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸಂಜಯ್ ಸಾವಿಗೆ ನ್ಯಾಯ ದೊರಕಿಸಿಕೊಡಬೇಕು. ಸಂಜಯ್ ಅವರಿಗೆ ಮಾನಸಿಕ ಕಿರುಕುಳ ನೀಡಿದ ಸೂಪರ್‌ವೈಸರ್ ಅರುಣ್ ಕುಮಾರ್ ವಿರುದ್ಧ ಸೂಕ್ತ ಪ್ರಕರಣ ದಾಖಲಿಸಿ, ಕಠಿಣ ಕ್ರಮ ಜರುಗಿಸಬೇಕು. ಇದೇ ವೇಳೆ, ಈ ಘಟನೆಗೆ ಕಾರಣವಾದ ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯದ ವಿರುದ್ಧವೂ ಕಾರ್ಮಿಕ ಮುಖಂಡರು ತೀವ್ರವಾಗಿ ಕಿಡಿಕಾರಿದರು. ಪ್ರತಿಭಟನಾಕಾರರು ನ್ಯಾಯ ದೊರಕುವವರೆಗೂ ಪ್ರತಿಭಟನೆಯನ್ನು ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮಂಗಳೂರುಮುಖಪುಟರಾಜಕೀಯ

ಪ್ರಧಾನಿ ಮೋದಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮನ ; ಉಡುಪಿ ಕಾರ್ಯಕ್ರಮಕ್ಕೆ ಪ್ರಯಾಣ

November 28, 2025
ಮುಖಪುಟಮೈಸೂರು ನಗರಸನ್ನಿಧಾನ

ಮೈಸೂರು: ಸುಬ್ರಹ್ಮಣ್ಯ ಷಷ್ಠಿ ಸಂಭ್ರಮ; ಸಿದ್ದಲಿಂಗಪುರದಲ್ಲಿ ಬೆಳ್ಳಿಯ ನಾಗಾಭರಣ ದರ್ಶನ

November 26, 2025
ಮುಖಪುಟಮೈಸೂರು ನಗರ

ಹನುಮಾನ್ ಚಾಲೀಸ ಪಾರಾಯಣದಲ್ಲಿ ಯುವಸಮೂಹ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಿ : ನಟ ವಸಿಷ್ಠ ಸಿಂಹ

February 10, 2026
ಮುಖಪುಟಮೈಸೂರು ನಗರ

ಹೊಸ ಬಡಾವಣೆಗಳ ನಿರ್ಮಾಣಕ್ಕೆ ಮುಂದಾದ ಎಂಡಿಎ ; ಎರಡು ದಶಕಗಳಿಂದ ಚರ್ಚೆಯಲ್ಲಿದ್ದ ಬೊಮ್ಮೇನಹಳ್ಳಿ ಹೊಸ ಬಡಾವಣೆ ನಿರ್ಮಾಣಕ್ಕೆ ಮಹತ್ವದ ತೀರ್ಮಾನ

December 23, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?