PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಕಾಂಗ್ರೆಸ್ ನಾಯಕತ್ವ ಬದಲಾವಣೆ- ಹೈಕಮಾಂಡ್ ನಿರ್ಧಾರ ಇನ್ನೆರಡು ದಿನಗಳಲ್ಲಿ ; ಶಾಸಕ ತನ್ವೀರ್ ಸೇಠ್ ಸ್ಪೋಟಕ ಹೇಳಿಕೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಕಾಂಗ್ರೆಸ್ ನಾಯಕತ್ವ ಬದಲಾವಣೆ- ಹೈಕಮಾಂಡ್ ನಿರ್ಧಾರ ಇನ್ನೆರಡು ದಿನಗಳಲ್ಲಿ ; ಶಾಸಕ ತನ್ವೀರ್ ಸೇಠ್ ಸ್ಪೋಟಕ ಹೇಳಿಕೆ
ಮುಖಪುಟಮೈಸೂರು ನಗರರಾಜಕೀಯ

ಕಾಂಗ್ರೆಸ್ ನಾಯಕತ್ವ ಬದಲಾವಣೆ- ಹೈಕಮಾಂಡ್ ನಿರ್ಧಾರ ಇನ್ನೆರಡು ದಿನಗಳಲ್ಲಿ ; ಶಾಸಕ ತನ್ವೀರ್ ಸೇಠ್ ಸ್ಪೋಟಕ ಹೇಳಿಕೆ

Prathinidhi News
Last updated: November 22, 2025 3:58 pm
Prathinidhi News
Published November 22, 2025
Share
SHARE

ಮೈಸೂರು , ನವೆಂಬರ್‌ 22, 2025 : ರಾಜ್ಯ ಕಾಂಗ್ರೆಸ್‌ನಲ್ಲಿ ಕಳೆದ ಎರಡೂವರೆ ವರ್ಷಗಳಿಂದ ಮುಖ್ಯಮಂತ್ರಿ ಸ್ಥಾನದ ಅಧಿಕಾರ ಹಂಚಿಕೆ (Power Sharing) ವಿಚಾರವಾಗಿ ಉಂಟಾಗಿರುವ ಗೊಂದಲಕ್ಕೆ ಇನ್ನೆರಡು ದಿನಗಳಲ್ಲಿ ಹೈಕಮಾಂಡ್ ತೆರೆ ಎಳೆಯಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್ ಸೇಠ್ ಮೈಸೂರಿನಲ್ಲಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಈ ಬೆಳವಣಿಗೆ ಅಪಾಯಕಾರಿ ಹಂತ ತಲುಪುತ್ತಿರುವ ಲಕ್ಷಣಗಳು ಗೋಚರಿಸುತ್ತಿರುವುದರಿಂದ ಹೈಕಮಾಂಡ್ ತನ್ನ ನಿರ್ಧಾರವನ್ನು ಪ್ರಕಟಿಸಲಿದೆ ಎಂದು ಸೇಠ್ ತಿಳಿಸಿದ್ದಾರೆ. ಅಧಿಕಾರ ಹಂಚಿಕೆ ವಿಚಾರದಲ್ಲಿ ಹೈಕಮಾಂಡ್ ಮೊದಲೇ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕಿತ್ತು. ಆದರೆ, ಅದು ತಡವಾಗಿದೆ.ಒಪ್ಪಂದ ಆಗಿದೆಯೋ ಇಲ್ವೋ ಎಂಬ ಗೊಂದಲ ಎರಡುವರೆ ವರ್ಷಗಳಿಂದ ಮುಂದುವರೆದಿದೆ. ಅದು ಅಪಾಯಕಾರಿ ಹಂತ ತಲುಪುವ ಲಕ್ಷಣಗಳು ಕಾಣುತ್ತಿವೆ. ಹೀಗಾಗಿ ಹೈಕಮಾಂಡ್ ತನ್ನ ನಿರ್ಧಾರ ಹೇಳಲಿದೆ.ಈ ಎಲ್ಲಾ ಬೆಳವಣಿಗೆಯಿಂದ ಪಕ್ಷಕ್ಕೇನೂ ನಷ್ಟ ಇಲ್ಲ, ಆದರೆ ಗೊಂದಲ ಇರಬಾರದಿತ್ತು.ಯಾರು ಮಾತು ಕೊಟ್ಟಿದ್ದಾರೆ, ಯಾರು ಮಾತು ಕೊಟ್ಟಿಲ್ಲ, ಯಾರು ಮಾತು ತಪ್ಪಿದ್ದಾರೆ, ಇದೆಲ್ಲವೂ ಮಾತುಕತೆ ನಡೆದಾಗ ಇದ್ದಂತವರಿಗೆ ಮಾತ್ರ ಗೊತ್ತು. ಕಾಂಗ್ರೆಸ್ ಶಾಸಕರ ಮುಂದೆ ಅಧಿಕಾರ ಹಂಚಿಕೆಯ ಸೂತ್ರ ನಡೆದಿಲ್ಲ. ಹೀಗಾಗಿ ಅಲ್ಲಿ ಏನಾಗಿದೆ ಎಂಬುದು ನಮಗೆ ಏನು ಗೊತ್ತಿಲ್ಲ.ನನ್ನ ಮೇಲೆ ಡಿ ಕೆ ಶಿವಕುಮಾರ್ ಋಣ ಇದೆ. ರಾಜಕೀಯವಾಗಿ ನನ್ನನ್ನು ಬೆಳೆಸಿದ್ದು ಅವರೇ. ಇದರಲ್ಲಿ ಯಾವ ಮುಚ್ಚುಮರೆಯೂ ಇಲ್ಲ. ನಾನು ಲಾಭ ನಷ್ಟದ ಬಗ್ಗೆ ಯೋಚನೆ ಮಾಡುವುದಿಲ್ಲ. ಇರುವ ಸತ್ಯವನ್ನೇ ಹೇಳುತ್ತಿದ್ದೇನೆ. ಸಿದ್ದರಾಮಯ್ಯ ಅವರ ಮೇಲೆಯೂ ನನಗೆ ಪ್ರೀತಿ ಇದೆ. ತಾವೂ ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ ಎಂದು ತನ್ವೀರ್ ಸೇಠ್ ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷರ ಈ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಹೈಕಮಾಂಡ್ ಇನ್ನೆರಡು ದಿನಗಳಲ್ಲಿ ಯಾವ ನಿರ್ಧಾರ ಪ್ರಕಟಿಸಲಿದೆ ಎಂಬ ಕುತೂಹಲ ಮೂಡಿಸಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರಸಿನಿಮಾ

2018ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ: ರಾಘವೇಂದ್ರ ರಾಜ್‌ಕುಮಾರ್ ಮತ್ತು ಮೇಘನಾ ರಾಜ್‌ಗೆ ಅತ್ಯುತ್ತಮ ನಟ-ನಟಿ ಪ್ರಶಸ್ತಿ!

November 4, 2025
ಬೆಂಗಳೂರುಮುಖಪುಟ

ಮಹಿಳಾ ಉದ್ಯೋಗಿಗಳಿಗೆ ವೇತನಸಹಿತ ಮಾಸಿಕ ಋತುಚಕ್ರದ ಒಂದು ರಜೆ ; ಕಾರ್ಮಿಕ ಇಲಾಖೆ ಕಂಡೀಷನ್ ಏನು..?

November 13, 2025
ಮುಖಪುಟ

ದೆವ್ವ ಹಿಡಿದಿದೆ ಎಂದು ಕಟ್ಟಿಗೆಯಿಂದ ಹೊಡೆದು ಕೊಲೆ : ಮೂಢನಂಬಿಕೆಗೆ ಮಹಾರಾಷ್ಟ್ರದಲ್ಲಿ ಕಲಬುರಗಿ ಮೂಲದ ಮಹಿಳೆ ಸಾವು

December 27, 2025
ಮುಖಪುಟಮೈಸೂರು ಗ್ರಾಮಾಂತರ

ಸರಗೂರು: ಉಪಟಳ ನೀಡುತ್ತಿದ್ದ ತಾಯಿ ಹುಲಿ ಮತ್ತು ಮೂರು ಮರಿಗಳ ಸೆರೆ!

November 18, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?