ಮೈಸೂರು, ನವೆಂಬರ್ 25, 2025 : ನಾನು ಜೆಡಿಎಸ್ ಬಿಡಲ್ಲ ಹಾಗೂ ಕಾಂಗ್ರೆಸ್ ಗೆ ಹೋಗಲ್ಲ ಎಂದು ಶಾಸಕ ಜಿ ಟಿ ದೇವೇಗೌಡ ಇಂದು ಪ್ರತಿನಿಧಿ ನ್ಯೂಸ್ ಗೆ ಸ್ಪಷ್ಟನೆ ನೀಡಿದ್ದಾರೆ.
ನಾನು ಜೆಡಿಎಸ್ ನಿಂದ ಸ್ಪರ್ಧಿಸಿ ಗೆದ್ದು ಶಾಸಕನಾಗಿದ್ದೇನೆ, ಜೆಡಿಎಸ್ ಶಾಸಕನಾಗಿಯೇ ಮುಂದುವರೆಯುತ್ತೇನೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷಕ್ಕೆ ಹೋಗೋದಿಲ್ಲ ಎಂದು ಸ್ಪಷ್ಟನೆ ನೀಡಿದರು. ನಾನು ಸಿದ್ದರಾಮಯ್ಯ ಒಟ್ಟಿಗೆ ರಾಜಕಾರಣ ಮಾಡಿಕೊಂಡು ಬಂದವರು ಅವರೀಗ ಮುಖ್ಯಮಂತ್ರಿ ಆಗಿದ್ದಾರೆ. ಹಾಗಾಗಿ ನನ್ನ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನಾನು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡ್ತೇನೆ ಎಂದು ತಿಳಿಸಿದರು.
ಜೆಡಿಎಸ್ ಪಕ್ಷದ 25ನೇ ವರ್ಷದ ಬೆಳ್ಳಿ ಹಬ್ಬಕ್ಕೆ ಶಾಸಕ ಜಿ ಟಿ ದೇವೇಗೌಡ ಗೈರು ಹಾಜರಾದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಯಾರೊಬ್ಬರೂ ನನ್ನನ್ನು ಜೆಡಿಎಸ್ ನ ರಜತ ಮಹೋತ್ಸವ ಸಮಾರಂಭಕ್ಕೆ ಬರುವಂತೆ ಆಹ್ವಾನ ನೀಡಲಿಲ್ಲ. ಹಾಗಾಗಿ ನಾನು ಜೆಡಿಎಸ್ ಪಕ್ಷದ ಬೆಳ್ಳಿ ಹಬ್ಬ ಸಮಾರಂಭದಲ್ಲಿ ಭಾಗಿಯಾಗಲಿಲ್ಲ. ಒಂದು ವೇಳೆ ಆಹ್ವಾನ ನೀಡಿದ್ದರೆ, ನನಗೆ ಹೋಗಲು ಆಗದಿದ್ದರೆ ಶುಭಾಶಯವನ್ನಾದರೂ ತಿಳಿಸುತ್ತಿದೆ. ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಮೈಸೂರಿನಲ್ಲಿ ನಡೆಸುವ ದಿಶಾ ಸಭೆಗೂ ನನ್ನನ್ನು ಕರೆಯುವುದಿಲ್ಲ. ಕರೆಯದೇ ನಾನೇಗೆ ದಿಶಾ ಸಭೆಗೆ ಹೋಗಲಿ ಎಂದು ಶಾಸಕ ಜಿ ಟಿ ಡಿ ಅಸಮಾಧಾನ ವ್ಯಕ್ತಪಡಿಸಿದರು.
