PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರಿನಲ್ಲಿ ಹೆಚ್ಚುವರಿ ಪೊಲೀಸ್ ಠಾಣೆಗಳ ಪರಿಶೀಲನೆ, ಆನ್‌ಲೈನ್ ವಂಚನೆ ತಡೆಗೆ ಒತ್ತು: ಗೃಹ ಸಚಿವ ಡಾ. ಜಿ. ಪರಮೇಶ್ವರ್
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರಿನಲ್ಲಿ ಹೆಚ್ಚುವರಿ ಪೊಲೀಸ್ ಠಾಣೆಗಳ ಪರಿಶೀಲನೆ, ಆನ್‌ಲೈನ್ ವಂಚನೆ ತಡೆಗೆ ಒತ್ತು: ಗೃಹ ಸಚಿವ ಡಾ. ಜಿ. ಪರಮೇಶ್ವರ್
ಮುಖಪುಟಮೈಸೂರು ನಗರರಾಜಕೀಯ

ಮೈಸೂರಿನಲ್ಲಿ ಹೆಚ್ಚುವರಿ ಪೊಲೀಸ್ ಠಾಣೆಗಳ ಪರಿಶೀಲನೆ, ಆನ್‌ಲೈನ್ ವಂಚನೆ ತಡೆಗೆ ಒತ್ತು: ಗೃಹ ಸಚಿವ ಡಾ. ಜಿ. ಪರಮೇಶ್ವರ್

Prathinidhi News
Last updated: November 25, 2025 3:39 pm
Prathinidhi News
Published November 25, 2025
Share
SHARE

ಮೈಸೂರು, ನವೆಂಬರ್‌ 25, 2025 :  ರಾಜ್ಯದಲ್ಲಿ ಹೆಚ್ಚುತ್ತಿರುವ ಸೈಬರ್ ಅಪರಾಧಗಳ ತಡೆ ಮತ್ತು ಮೈಸೂರು ನಗರದ ಅಪರಾಧ ನಿಯಂತ್ರಣ ಕುರಿತು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಇಂದು ಮಹತ್ವದ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಹೆಚ್ಚುವರಿ ಪೊಲೀಸ್ ಠಾಣೆಗಳ ಅಗತ್ಯದ ಕುರಿತು ಪರಿಶೀಲನೆ ನಡೆಸುತ್ತಿರುವುದಾಗಿ ತಿಳಿಸಿದ ಸಚಿವರು, ವಿಶೇಷವಾಗಿ ಆನ್‌ಲೈನ್ ವಂಚನೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿ, ತನಿಖೆಗಾಗಿ ಪೊಲೀಸರಿಗೆ ವಿಶೇಷ ತರಬೇತಿ ನೀಡಲಾಗುತ್ತಿದೆ ಎಂದು ಹೇಳಿದರು.

ಮೈಸೂರಿನಲ್ಲಿ ಹೆಚ್ಚುವರಿ ಪೊಲೀಸ್ ಠಾಣೆಗಳನ್ನು ಮಾಡುವ ಬಗ್ಗೆ ಪರಿಶೀಲನೆ ನಡೆಸಿದ್ದೇನೆ. ಉದಯಗಿರಿ ಪೊಲೀಸ್ ಠಾಣೆಯನ್ನು ಈಗಾಗಲೇ ಎರಡು ವಿಭಾಗಗಳನ್ನಾಗಿ ಮಾಡಿದ್ದೇವೆ. ಇನ್ನು ಎಷ್ಟು ಹೆಚ್ಚುವರಿ ಠಾಣೆಗಳು ಬೇಕೆಂಬ ಬಗ್ಗೆ ಶೀಘ್ರದಲ್ಲೇ ಸಭೆ ನಡೆಸುತ್ತೇನೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಾಹಿತಿ ನೀಡಿದರು.

ಸೈಬರ್ ಅಪರಾಧಗಳ ಕುರಿತು ಮಾತನಾಡಿದ ಸಚಿವರು, ರಾಜ್ಯದಲ್ಲಿ ನಡೆಯುತ್ತಿರುವ ಆನ್‌ಲೈನ್ ವಂಚನೆಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು.ಮೈಸೂರಿನಲ್ಲಿ ಈ ವರ್ಷವೇ ಬರೋಬ್ಬರಿ 30 ಕೋಟಿ ರೂಪಾಯಿಗಳ ಆನ್‌ಲೈನ್ ಫ್ರಾಡ್ ನಡೆದಿದೆ. ರಾಜ್ಯದಲ್ಲಿ ಆನ್‌ಲೈನ್ ಫ್ರಾಡ್ ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ ಎಂದು ತಿಳಿಸಿದರು.ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ವಂಚನೆ ನಡೆಯುತ್ತಿದ್ದು, ವಿದ್ಯಾವಂತರು ಮತ್ತು ನಿವೃತ್ತ ಸರ್ಕಾರಿ ಅಧಿಕಾರಿಗಳೇ ವಂಚಕರ ಟಾರ್ಗೆಟ್ ಆಗಿದ್ದಾರೆ. ಬೆಂಗಳೂರಿನಲ್ಲಿ ಒಬ್ಬ ನಿವೃತ್ತ ಐಟಿ ಉದ್ಯೋಗಿ 32 ಕೋಟಿ ರೂಪಾಯಿ ಹಣವನ್ನು ಈ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಕಳೆದುಕೊಂಡಿದ್ದಾರೆ. ಸೈಬರ್ ಅಪರಾಧವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಆನ್‌ಲೈನ್ ಫ್ರಾಡ್ ತನಿಖೆಯ ಬಗ್ಗೆ ಪೊಲೀಸರಿಗೆ ಹೆಚ್ಚುವರಿ ತರಬೇತಿ ನೀಡುತ್ತಿದ್ದೇವೆ. ಎಲ್ಲಾ ಜಿಲ್ಲೆಗಳ ಪೊಲೀಸರಿಗೂ ಆನ್‌ಲೈನ್ ಫ್ರಾಡ್ ತನಿಖೆಯ ಬಗ್ಗೆ ತರಬೇತಿ ನೀಡಲು ಸೂಚಿಸಿದ್ದೇನೆ ಎಂದು ಸಚಿವರು ತಿಳಿಸಿದರು.

ಪಿಎಸ್‌ಐ ಹಗರಣ ಆದ ಕಾರಣ ಪೊಲೀಸ್ ನೇಮಕಾತಿಯಲ್ಲಿ ವಿಳಂಬವಾಯಿತು. ಆದರೂ, ಪೊಲೀಸರ ನೇಮಕಾತಿಗಳನ್ನು ಸರ್ಕಾರ ತುರ್ತಾಗಿ ಮಾಡುತ್ತಿದೆ. ಈ ವರ್ಷ ಪೊಲೀಸ್ ನೇಮಕಾತಿಯನ್ನು ಹೆಚ್ಚು ಮಾಡುತ್ತಿದ್ದೇವೆ ಎಂದು ಅವರು ಮಾಹಿತಿ ನೀಡಿದರು.

- ಜಾಹೀರಾತು -

ರಾಜ್ಯ ರಾಜಕೀಯದ ಕುರಿತು ಮೌನ

ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಪ್ರಸ್ತುತ ರಾಜ್ಯ ರಾಜಕೀಯದ ಬೆಳವಣಿಗೆಗಳ ಕುರಿತು ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.ರಾಜ್ಯ ರಾಜಕೀಯದ ಯಾವ ಬೆಳವಣಿಗೆಯ ಬಗ್ಗೆಯೂ ನಾನು ಮಾತನಾಡೋದಿಲ್ಲ. ನಾನು ಮಾತನಾಡದೆ ಇರುವುದಕ್ಕೆ ನೀವು ಏನಾದರೂ ಅರ್ಥ ಕಲ್ಪಿಸಿಕೊಳ್ಳಿ. ನಾನು ಮಾತ್ರ ಏನನ್ನೂ ಮಾತನಾಡುವುದಿಲ್ಲ. ಬಹಳಷ್ಟು ಜನ ಈ ವಿಚಾರ ಕುರಿತು ಬಹಳಷ್ಟು ರೀತಿಯಲ್ಲಿ ಮಾತನಾಡಿದ್ದಾರೆ. ನಾನು ಪ್ರಸ್ತುತ ರಾಜಕೀಯದ ಯಾವ ಪ್ರಶ್ನೆಗಳಿಗೂ ಉತ್ತರ ಕೊಡುವುದಿಲ್ಲ. ಗೃಹ ಇಲಾಖೆಯ ಬಗ್ಗೆ ಏನು ಬೇಕಾದರೂ ಕೇಳಿ ಹೇಳುತ್ತೇನೆ ಎಂದು ತಮ್ಮ ನಿಲುವನ್ನು ಸ್ಪಷ್ಟಪಡಿಸಿದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಮೈಸೂರು: ಮಕ್ಕಳ ಶಾಲಾ ಬ್ಯಾಗ್ ನಲ್ಲಿ ಅಡಗಿಕೊಂಡಿದ್ದ ನಾಗರಹಾವು ; ಹಾವನ್ನು ರಕ್ಷಿಸಿದ ಉರಗ ಸಂರಕ್ಷಕ ಸ್ನೇಕ್ ಶಾಮ್ !

February 12, 2026
ಮುಖಪುಟಮೈಸೂರು ಗ್ರಾಮಾಂತರ

ಹುಲಿ ದಾಳಿಗೆ ಮೂರನೇ ಬಲಿ..! ಆಕ್ರೋಶಗೊಂಡ ಗ್ರಾಮಸ್ಥರಿಂದ RFO ಮೇಲೆ ಹಲ್ಲೆಗೆ ಯತ್ನ!

November 7, 2025
ಮುಖಪುಟಮೈಸೂರು ನಗರ

ಬೀದಿ ನಾಯಿ ಮರಿಗಳಿಗೆ ವಿದೇಶಿಯರ ಆಸರೆ: ಮೈಸೂರು ಪಾಲಿಕೆಯಿಂದ ವಿನೂತನ ದತ್ತು ಅಭಿಯಾನ

December 16, 2025
ಮುಖಪುಟಮೈಸೂರು ನಗರ

ಮೈಸೂರಿನಲ್ಲಿ ಫೆಬ್ರವರಿ 14ರಂದು ಸಾಮೂಹಿಕ ಶ್ರೀ ಹನುಮಾನ್ ಚಾಲೀಸಾ ಪಾರಾಯಣ ಮಹಾಯಜ್ಞ

February 10, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?