PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಸಿದ್ದಲಿಂಗಪುರ: ಸುಬ್ರಹ್ಮಣ್ಯ ಷಷ್ಠಿ ಆಚರಣೆಯಲ್ಲಿ ಶಾಸಕ ಜಿ.ಟಿ. ದೇವೇಗೌಡ ಭಾಗಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಅಂಕಣ > ಸನ್ನಿಧಾನ > ಸಿದ್ದಲಿಂಗಪುರ: ಸುಬ್ರಹ್ಮಣ್ಯ ಷಷ್ಠಿ ಆಚರಣೆಯಲ್ಲಿ ಶಾಸಕ ಜಿ.ಟಿ. ದೇವೇಗೌಡ ಭಾಗಿ
ಮುಖಪುಟಮೈಸೂರು ನಗರಸನ್ನಿಧಾನ

ಸಿದ್ದಲಿಂಗಪುರ: ಸುಬ್ರಹ್ಮಣ್ಯ ಷಷ್ಠಿ ಆಚರಣೆಯಲ್ಲಿ ಶಾಸಕ ಜಿ.ಟಿ. ದೇವೇಗೌಡ ಭಾಗಿ

Prathinidhi News
Last updated: November 26, 2025 1:29 pm
Prathinidhi News
Published November 26, 2025
Share
SHARE

ಮೈಸೂರು, ನವೆಂಬರ್‌ 26, 2025 : ಷಷ್ಠಿ ಹಬ್ಬದ ಪ್ರಯುಕ್ತ ಮೈಸೂರು ಹೊರವಲಯದ ಸಿದ್ದಲಿಂಗಪುರದಲ್ಲಿರುವ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇಗುಲಕ್ಕೆ ಸ್ಥಳೀಯ ಶಾಸಕ ಜಿ.ಟಿ. ದೇವೇಗೌಡ (ಜಿಟಿಡಿ) ಇಂದು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಪೂಜೆ ಸಲ್ಲಿಸಿದ ಬಳಿಕ ಪ್ರತಿನಿಧಿ ನ್ಯೂಸ್ ಜೊತೆ ಮಾತನಾಡಿದ ಶಾಸಕ ಜಿಟಿಡಿ, ದೇಗುಲದ ಮಹತ್ವ ಮತ್ತು ಭಕ್ತರ ನಂಬಿಕೆಗಳ ಕುರಿತು ಮಾತನಾಡಿದರು. ನಾನು ಷಷ್ಠಿಯ ದಿನವೇ ಜನಿಸಿದ್ದು. ಹಾಗಾಗಿ ಈ ಹಬ್ಬಕ್ಕೆ ವಿಶೇಷ ಮಹತ್ವ ನೀಡುತ್ತೇನೆ. ಸಿದ್ದಲಿಂಗಪುರದ ಸುಬ್ರಹ್ಮಣ್ಯಸ್ವಾಮಿ ದೇಗುಲಕ್ಕೆ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ ಎಂದು ಜಿಟಿಡಿ ಹೇಳಿದರು.

ಈ ಸ್ಥಳದಲ್ಲಿ ಹರಕೆ ಮಾಡಿಕೊಂಡರೆ ಒಳಿತಾಗುತ್ತದೆ ಎಂಬ ಪ್ರಬಲ ನಂಬಿಕೆಯಿದೆ. ತಮಿಳುನಾಡು ಮೂಲದ ಉದ್ಯಮಿಯೊಬ್ಬರು ಇಲ್ಲಿಗೆ ಬಂದು ಹೋದನಂತರ ಅವರಿಗೆ ಶುಭವಾಗಿದೆಯಂತೆ. ಹಾಗಾಗಿ, ಅವರೇ ಶಿಥಿಲಗೊಂಡಿದ್ದ ಈ ದೇಗುಲವನ್ನು ಸಂಪೂರ್ಣವಾಗಿ ಜೀರ್ಣೋದ್ಧಾರ ಮಾಡಿಸಿದ್ದಾರೆ ಎಂದು ದೇಗುಲದ ಇತಿಹಾಸವನ್ನು ವಿವರಿಸಿದರು.

- ಜಾಹೀರಾತು -

ಭಕ್ತರಿಗೆ ಮೂಲಭೂತ ಸೌಕರ್ಯದ ಭರವಸೆ

ದೇಗುಲಕ್ಕೆ ಆಗಮಿಸುವ ಸಾವಿರಾರು ಭಕ್ತರ ಅನುಕೂಲಕ್ಕಾಗಿ ಸ್ಥಳೀಯರು ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಶಾಸಕರ ಗಮನಕ್ಕೆ ತಂದಿದ್ದಾರೆ. ಇಲ್ಲಿ ಕುಡಿಯುವ ನೀರು ಮತ್ತು ಶೌಚಾಲಯದ ವ್ಯವಸ್ಥೆ ಮಾಡಿಕೊಡಿ ಎಂದು ಈಗ ನನ್ನ ಗಮನಕ್ಕೆ ತಂದಿದ್ದಾರೆ. ಮುಂಬರುವ ದಿನಗಳಲ್ಲಿ ಭಕ್ತರಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಆದ್ಯತೆಯ ಮೇಲೆ ಒದಗಿಸಿಕೊಡುತ್ತೇನೆ ಎಂದು ಶಾಸಕ ಜಿ.ಟಿ. ದೇವೇಗೌಡರು ಭರವಸೆ ನೀಡಿದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟರಾಜಕೀಯ

ಕಾಂಗ್ರೆಸ್ ಕುರ್ಚಿ ಜಗಳ ; “ಕೈ” ನಾಯಕರಿಗೆ ಸಖತ್ತಾಗಿಯೇ ಟಾಂಗ್ ನೀಡಿದ ಬಿ ವೈ ವಿಜಯೇಂದ್ರ ..!

November 4, 2025
ಮುಖಪುಟಮೈಸೂರು ನಗರ

ಹೀಲಿಯಂ ಸಿಲಿಂಡರ್‌ ಸ್ಪೋಟ; ಪತ್ನಿಯ ಕಂಡೀಶನ್ ಕ್ರಿಟಿಕಲ್ ಇದೆ ಎಂದು ಗಾಯಾಳು ಪತಿ ರಾಜೇಶ್‌ ಹೇಳಿಕೆ

December 26, 2025
ಮುಖಪುಟಮೈಸೂರು ನಗರ

ಮೈಸೂರು ಸಿಲ್ಕ್ ಕಾರ್ಖಾನೆ ಉಳಿಸಿ: ಟಿ. ನರಸೀಪುರದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮಹಿಳೆಯರ ವಿರೋಧ

February 28, 2026
ಬೆಂಗಳೂರುಮುಖಪುಟ

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬೆಂಗಳೂರಿನಲ್ಲಿ 14 ವರ್ಷದ ಬಾಲಕ ಬಲಿ : ಕೊಳೆತ ಸ್ಥಿತಿಯಲ್ಲಿ ಮತದೇಹ ಪತ್ತೆ

February 2, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?