PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ರಾಜ್ಯದಲ್ಲಿ ಚಳಿ ಜೊತೆ ಮಳೆಯ ಅಬ್ಬರ ; ಬಂಗಾಳಕೊಲ್ಲಿಯ ಚಂಡಮಾರುತದ ಎಫೆಕ್ಟ್‌ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ !
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಬೆಂಗಳೂರು > ರಾಜ್ಯದಲ್ಲಿ ಚಳಿ ಜೊತೆ ಮಳೆಯ ಅಬ್ಬರ ; ಬಂಗಾಳಕೊಲ್ಲಿಯ ಚಂಡಮಾರುತದ ಎಫೆಕ್ಟ್‌ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ !
ಬೆಂಗಳೂರುಮುಖಪುಟ

ರಾಜ್ಯದಲ್ಲಿ ಚಳಿ ಜೊತೆ ಮಳೆಯ ಅಬ್ಬರ ; ಬಂಗಾಳಕೊಲ್ಲಿಯ ಚಂಡಮಾರುತದ ಎಫೆಕ್ಟ್‌ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ !

Prathinidhi News
Last updated: November 29, 2025 11:21 am
Prathinidhi News
Published November 29, 2025
Share
SHARE

ಬೆಂಗಳೂರು, ನವೆಂಬರ್‌ 29, 2025 : ರಾಜ್ಯದಲ್ಲಿ ಚಳಿ ವಾತಾವರಣ ಹೆಚ್ಚಾಗಿದ್ದು, ದಟ್ಟವಾದ ಮಂಜು ಎಲ್ಲೆಡೆ ವ್ಯಾಪಿಸಿದೆ. ಇದೀಗ ಚಳಿ ಜತೆ ಮಳೆಯೂ ಸುರಿಯಲಿದೆ ಎಂಬ ಅಪ್ಡೇಟ್ ದೊರೆತಿದೆ.

ಇವತ್ತು ನ.29ರಿಂದ ಡಿ.2ರವರೆಗೆ ಮಿಶ್ರ ವಾತಾವರಣ ಇರಲಿದ್ದು, ಚಳಿ ಹೆಚ್ಚಾಗಲಿದೆ. ಬಂಗಾಳಕೊಲ್ಲಿಯ ಚಂಡಮಾರುತದ ಪ್ರಭಾವದಿಂದ ಬೆಂಗಳೂರು, ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಉತ್ತರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಇಲಾಖೆಯ ವರದಿ ಪ್ರಕಾರ ತಾಪಮಾನ ಇಳಿಕೆಯಾಗಿದ್ದು, ಬೆಂಗಳೂರಿನಲ್ಲಿ ವಾಯು ಗುಣಮಟ್ಟ ಸುಧಾರಿಸಿದೆ ಎಂದು ಹೇಳಲಾಗಿದೆ.

ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ ಮತ್ತು ದಕ್ಷಿಣ ಒಳನಾಡಿನ ಇತರ ಜಿಲ್ಲೆಗಳ ಕೆಲವು ಪ್ರದೇಶದಲ್ಲಿ ಚಂಡಮಾರುತದ ಪ್ರಭಾವದಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಇನ್ನು ಉತ್ತರ ಜಿಲ್ಲೆಗಳಲ್ಲಿ ತಾಪಮಾನ ಕಡಿಮೆಯಾಗಿ ಚಳಿಯ ಪ್ರಭಾವ ಹೆಚ್ಚಾಗಲಿದೆ ಎಂದು ಅಂದಾಜಿಸಲಾಗಿದೆ.

ಇನ್ನೂ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕಲಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಂಗಳೂರಿನ ಕೆಲವೊಂದು ಕಡೆ ರೆಡ್ ಹಾಗೂ ಆರೆಂಜ್ ಅಲರ್ಟ್ ನೀಡಲಾಗಿದೆ. ಡಿ 1ರಂದು ಚಿಕ್ಕಮಗಳೂರು, ಶಿವಮೊಗ್ಗದ ದಕ್ಷಿಣ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ ಮತ್ತು ವಿಜಯಪುರ ಸೇರಿದಂತೆ ಬಹುತೇಕ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ವಾತಾವರಣ ಇರಲಿದೆ. ಡಿಸೆಂಬರ್ ಮೊದಲ ವಾರದಿಂದ ಚಳಿ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆ ದಟ್ಟವಾಗಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ತಜ್ಞರು ಎಚ್ಚರಿಕೆ ನೀಡಿದ್ದಾರೆ.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮಂಡ್ಯಮುಖಪುಟರಾಜಕೀಯ

ನಾವು ಸಾರ್ವಜನಿಕರ ಸೇವಕರು, ಜವಾಬ್ದಾರಿಯಿಂದ ಕೆಲಸ ಮಾಡಿ: ಅಧಿಕಾರಿಗಳಿಗೆ ಡಾ. ಯತೀಂದ್ರ ಸಿದ್ದರಾಮಯ್ಯ ಪಾಠ

February 28, 2026
ನಂಜನಗೂಡುಮುಖಪುಟ

ತೆಂಗಿನ ಮರದಿಂದ ಬಿದ್ದು ಕಾರ್ಮಿಕ ಸಾವು: ಮಾಲೀಕ, ಮೇಸ್ತ್ರಿ ವಿರುದ್ಧ ಪ್ರಕರಣ ದಾಖಲಿಸಲು ಆಗ್ರಹ

November 18, 2025
ಮುಖಪುಟ

ಬೆಳಗಾವಿ : ರಜೆಗೆಂದು ಮನೆಗೆ ತೆರಳಿದ್ದ ಯೋಧ ರಸ್ತೆ ಅಪಘಾತದಲ್ಲಿ ಸಾವು

December 22, 2025
ಕ್ರೈಂ ಸುದ್ದಿಗಳುಮಂಡ್ಯಮುಖಪುಟ

ಮಂಡ್ಯ: ಸೈಜುಗಲ್ಲಿನಿಂದ ಜಜ್ಜಿ ವ್ಯಕ್ತಿಯ ಮೇಲೆ ಭೀಕರ ಹಲ್ಲೆ – ವಿಕೃತಿ ಮೆರೆದ ಕಿರಾತಕರು

February 24, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?