PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಸಿದ್ದರಾಮಯ್ಯ ಪೂರ್ಣಾವಧಿ ಸಿಎಂಗೆ ಹಕ್ಕೊತ್ತಾಯ: ಅಹಿಂದ ಸಂಘಟನೆಗಳಿಂದ ಉಗ್ರ ಹೋರಾಟದ ಎಚ್ಚರಿಕೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಸಿದ್ದರಾಮಯ್ಯ ಪೂರ್ಣಾವಧಿ ಸಿಎಂಗೆ ಹಕ್ಕೊತ್ತಾಯ: ಅಹಿಂದ ಸಂಘಟನೆಗಳಿಂದ ಉಗ್ರ ಹೋರಾಟದ ಎಚ್ಚರಿಕೆ
ಮುಖಪುಟಮೈಸೂರು ನಗರರಾಜಕೀಯ

ಸಿದ್ದರಾಮಯ್ಯ ಪೂರ್ಣಾವಧಿ ಸಿಎಂಗೆ ಹಕ್ಕೊತ್ತಾಯ: ಅಹಿಂದ ಸಂಘಟನೆಗಳಿಂದ ಉಗ್ರ ಹೋರಾಟದ ಎಚ್ಚರಿಕೆ

Prathinidhi News
Last updated: November 29, 2025 1:03 pm
Prathinidhi News
Published November 29, 2025
Share
SHARE

ಮೈಸೂರು, ನವೆಂಬರ್‌ 29, 2025  :ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿ ಮುಂದುವರಿಸಬೇಕೆಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ, ಅಹಿಂದ ಸಂಘಟನೆಗಳು ಮತ್ತು ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿಗಳು ಕಾಂಗ್ರೆಸ್ ಹೈಕಮಾಂಡ್‌ಗೆ ಪ್ರಬಲ ಹಕ್ಕೊತ್ತಾಯ ಮಾಡಿವೆ.

ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ನಡೆದ ದುಂಡುಮೇಜಿನ ಸಭೆಯಲ್ಲಿ ಈ ನಿರ್ಣಯವನ್ನು ಅಂಗೀಕರಿಸಲಾಯಿತು.ಸಭೆಯಲ್ಲಿ ಮಾತನಾಡಿದ ಮುಖಂಡರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸ್ಥಾನದಿಂದ ಕೆಳಗಿಳಿಸಿದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ, ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ದೂರವಾಗುವುದಾಗಿ ಮತ್ತು ಅಹಿಂದ ಮತಗಳು ಕೈತಪ್ಪಲಿವೆ ಎಂದು ಹೈಕಮಾಂಡ್‌ಗೆ ಸ್ಪಷ್ಟ ಸಂದೇಶ ರವಾನಿಸಲಾಗಿದೆ.

Contents
ಮೈಸೂರು, ನವೆಂಬರ್‌ 29, 2025  :ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿ ಮುಂದುವರಿಸಬೇಕೆಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ, ಅಹಿಂದ ಸಂಘಟನೆಗಳು ಮತ್ತು ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿಗಳು ಕಾಂಗ್ರೆಸ್ ಹೈಕಮಾಂಡ್‌ಗೆ ಪ್ರಬಲ ಹಕ್ಕೊತ್ತಾಯ ಮಾಡಿವೆ.ಅಹಿಂದ ಮತಗಳ ಪಾಲು ಪ್ರಸ್ತಾಪ

ಯಾವುದೇ ಸನ್ನಿವೇಶ ಎದುರಾದರೂ ಸಿದ್ದರಾಮಯ್ಯ ಅವರ ಜೊತೆಗೆ ನಿಲ್ಲುವುದಾಗಿ ಸಭೆಯಲ್ಲಿದ್ದ ಮುಖಂಡರು ಬೆಂಬಲದ ಪ್ರತಿಜ್ಞೆ ಸ್ವೀಕರಿಸಿದರು. ಒಂದು ವೇಳೆ ಸಿದ್ದರಾಮಯ್ಯ ಅವರನ್ನು ಸಿಎಂ ಹುದ್ದೆಯಿಂದ ಕೆಳಗಿಳಿಸಿದರೆ, ದೆಹಲಿಯ ಎಐಸಿಸಿ (AICC) ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲು ಸಭೆಯಲ್ಲಿ ನಿರ್ಣಯಿಸಲಾಯಿತು.

ಅಹಿಂದ ಮತಗಳ ಪಾಲು ಪ್ರಸ್ತಾಪ

ಸಿದ್ದರಾಮಯ್ಯ ಅವರನ್ನು ಪೂರ್ಣಾವಧಿ ಮುಂದುವರಿಸಲು ಹಕ್ಕೊತ್ತಾಯ ಮಾಡುತ್ತಿರುವ ಸಂಘಟನೆಗಳು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಹಿಂದ ಮತದಾರರ ಪಾತ್ರವನ್ನು ಒತ್ತಿಹೇಳಿವೆ.ಶೇಕಡಾ 65 ರಿಂದ 75 ರಷ್ಟು ಅಹಿಂದ ವರ್ಗದವರು ಕಾಂಗ್ರೆಸ್‌ಗೆ ಮತ ನೀಡಿದ್ದಾರೆ. ಕೇವಲ ಶೇಕಡಾ 15 ರಿಂದ 20 ರಷ್ಟು ಮಾತ್ರ ಒಕ್ಕಲಿಗರು ಕಾಂಗ್ರೆಸ್‌ಗೆ ಮತ ನೀಡಿದ್ದಾರೆ. ಹೀಗಾಗಿ, ಸಿದ್ದರಾಮಯ್ಯನವರನ್ನು ಕೆಳಗಿಳಿಸಿದರೆ ಅಹಿಂದ ಮತಗಳು ಕಾಂಗ್ರೆಸ್‌ನಿಂದ ಖಂಡಿತವಾಗಿ ಕೈತಪ್ಪುತ್ತವೆ ಎಂದು ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.

ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಎಂ ಹುದ್ದೆಯಿಂದ ಕೆಳಗಿಳಿಸಬಾರದು ಎಂದು ಈ ಸಂಘಟನೆಗಳು ಕಾಂಗ್ರೆಸ್ ನಾಯಕತ್ವವನ್ನು ಆಗ್ರಹಿಸಿವೆ.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

‘ಗಂಧದ ಗುಡಿ’ ಕನಸಿಗೆ ಶಿವರಾಜ್‌ಕುಮಾರ್ ದ್ರೋಹ? ; ರೆಸಾರ್ಟ್‌ ಪ್ರಚಾರಕ್ಕೆ ವಕೀಲರ ಆಕ್ಷೇಪ

November 4, 2025
ಮುಖಪುಟಮೈಸೂರು ನಗರರಾಜಕೀಯ

ಬೇಸಿಗೆ ಪ್ರಾರಂಭವಾಗುತ್ತಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಿ: ಡಾ: ಹೆಚ್.ಸಿ.ಮಹದೇವಪ್ಪ

March 2, 2026
ಮುಖಪುಟ

ಸರಗೂರು: ಹಂಚೀಪುರ ಗ್ರಾಮಕ್ಕೆ ಲಗ್ಗೆ ಇಟ್ಟ ಮೂರು ಕಾಡಾನೆಗಳು – ಗ್ರಾಮಸ್ಥರಲ್ಲಿ ಆತಂಕ

February 4, 2026
ಮುಖಪುಟಮೈಸೂರು ನಗರ

ಮೈಸೂರು ವೀಳ್ಯದೆಲೆಗೆ ಜಾಗತಿಕ ಮನ್ನಣೆ: ನಗರೀಕರಣದ ಭರಾಟೆಯಲ್ಲಿ ಕಿರಿದಾಗುತ್ತಿದೆ ಪಾರಂಪರಿಕ ಎಲೆತೋಟ

February 24, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?