PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಎಚ್.ಡಿ.ಕೋಟೆ: 8 ತಿಂಗಳಿಂದ ಸ್ಥಗಿತಗೊಂಡ ಸೇತುವೆ ಕಾಮಗಾರಿ; ಕೆಸರು ಗದ್ದೆಯಂತಾದ ರಸ್ತೆಯಲ್ಲಿ ಗ್ರಾಮಸ್ಥರ ನರಕಯಾತನೆ!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಎಚ್.ಡಿ.ಕೋಟೆ: 8 ತಿಂಗಳಿಂದ ಸ್ಥಗಿತಗೊಂಡ ಸೇತುವೆ ಕಾಮಗಾರಿ; ಕೆಸರು ಗದ್ದೆಯಂತಾದ ರಸ್ತೆಯಲ್ಲಿ ಗ್ರಾಮಸ್ಥರ ನರಕಯಾತನೆ!
ಮುಖಪುಟಮೈಸೂರು ಗ್ರಾಮಾಂತರ

ಎಚ್.ಡಿ.ಕೋಟೆ: 8 ತಿಂಗಳಿಂದ ಸ್ಥಗಿತಗೊಂಡ ಸೇತುವೆ ಕಾಮಗಾರಿ; ಕೆಸರು ಗದ್ದೆಯಂತಾದ ರಸ್ತೆಯಲ್ಲಿ ಗ್ರಾಮಸ್ಥರ ನರಕಯಾತನೆ!

Prathinidhi News
Last updated: December 5, 2025 12:57 pm
Prathinidhi News
Published December 5, 2025
Share
SHARE

ಹೆಚ್.ಡಿ.ಕೋಟೆ, ಡಿಸೆಂಬರ್‌ 5, 2025 : ಅಭಿವೃದ್ಧಿ ಹೆಸರಲ್ಲಿ ಕಾಮಗಾರಿ ಆರಂಭಿಸಿ, ಅದನ್ನು ಅರ್ಧಕ್ಕೆ ನಿಲ್ಲಿಸಿರುವ ಪರಿಣಾಮವಾಗಿ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲ್ಲೂಕಿನ ಮುಸ್ಕೆರೆ ಗ್ರಾಮದ ಜನರು ಕಳೆದ ಎಂಟು ತಿಂಗಳಿಂದ ನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ. ಸೇತುವೆ ಕಾಮಗಾರಿಗೆಂದು ಅಗೆದ ರಸ್ತೆ ಸಂಪೂರ್ಣ ಕೆಸರು ಗದ್ದೆಯಂತಾಗಿದ್ದು, ಓಡಾಡುವುದೇ ದುಸ್ತರವಾಗಿದೆ.

Contents
ಪ್ರಮುಖ ಗ್ರಾಮಗಳ ಸಂಪರ್ಕ ಕಡಿತದ ಭೀತಿಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ

ಮುಸ್ಕೆರೆ ಗ್ರಾಮದಲ್ಲಿ ಹಳೆಯ ಸೇತುವೆ ಬದಲಿಗೆ ಹೊಸ ಸೇತುವೆ ನಿರ್ಮಾಣ ಕಾಮಗಾರಿಯನ್ನು ಸುಮಾರು 8 ತಿಂಗಳ ಹಿಂದೆ ಆರಂಭಿಸಲಾಗಿತ್ತು. ಕಾಮಗಾರಿಗೆಂದು ರಸ್ತೆಯನ್ನು ಅಗೆದು ಸಿದ್ಧಪಡಿಸಿದ ನಂತರ, ಕಾರಣಾಂತರಗಳಿಂದ ಕಾಮಗಾರಿಯನ್ನು ದಿಢೀರನೇ ಸ್ಥಗಿತಗೊಳಿಸಲಾಗಿದೆ. ಪರಿಣಾಮವಾಗಿ, ರಸ್ತೆ ಸಂಪೂರ್ಣವಾಗಿ ಹದಗೆಟ್ಟು, ವಾಹನ ಸಂಚಾರಕ್ಕೆ ಮತ್ತು ಗ್ರಾಮಸ್ಥರ ಓಡಾಟಕ್ಕೆ ಯೋಗ್ಯವಲ್ಲದ ಸ್ಥಿತಿಗೆ ತಲುಪಿದೆ.

ಪ್ರಮುಖ ಗ್ರಾಮಗಳ ಸಂಪರ್ಕ ಕಡಿತದ ಭೀತಿ

ಈ ರಸ್ತೆಯು ಮುಸ್ಕೆರೆ ಗ್ರಾಮದಿಂದ ಹುಂಡಿಮಾಳ, ವಿಶ್ವಕರ್ಮ ಕಾಲೋನಿ, ಗದ್ದಿಗೆ ಮತ್ತು ಭಾರತೀಪುರ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಾಗಿದೆ. ರಸ್ತೆಯು ಕೆಸರುಮಯವಾಗಿರುವುದರಿಂದ ಈ ಗ್ರಾಮಗಳ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

- ಜಾಹೀರಾತು -

ಪ್ರತಿನಿತ್ಯ ಶಾಲೆ, ಕೆಲಸ ಹಾಗೂ ಇತರೆ ಅಗತ್ಯಗಳಿಗಾಗಿ ಹೊರಹೋಗುವ ಗ್ರಾಮಸ್ಥರು ಕೆಸರು ರಸ್ತೆಯಲ್ಲಿ ನಡೆದುಕೊಂಡು ಹೋಗಲು ಪರದಾಡುತ್ತಿದ್ದಾರೆ. ಕೆಸರಿನಿಂದ ತುಂಬಿದ ರಸ್ತೆಯ ಮಧ್ಯೆ ಆಗಾಗ ವಾಹನಗಳು ಸಿಲುಕಿಕೊಳ್ಳುತ್ತಿವೆ. ಟ್ರ್ಯಾಕ್ಟರ್‌ಗಳು ಅಥವಾ ಗ್ರಾಮಸ್ಥರು ಒಟ್ಟಾಗಿ ಶ್ರಮವಹಿಸಿ ಸಿಲುಕಿದ ವಾಹನಗಳನ್ನು ಹೊರತೆಗೆಯಲು ಹರಸಾಹಸ ಪಡಬೇಕಾಗಿದೆ.

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ

ಸೇತುವೆ ಕಾಮಗಾರಿ ಸ್ಥಗಿತಗೊಂಡಿರುವ ಬಗ್ಗೆ ಹಾಗೂ ರಸ್ತೆಯಿಂದ ಆಗುತ್ತಿರುವ ತೊಂದರೆಗಳ ಬಗ್ಗೆ ಗ್ರಾಮಸ್ಥರು ಹಲವು ಬಾರಿ ಅಧಿಕಾರಿಗಳು ಮತ್ತು ಸ್ಥಳೀಯ ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದಾರೆ. ಆದರೆ, ಸಂಬಂಧಪಟ್ಟ ಯಾರೊಬ್ಬರೂ ಈ ಬಗ್ಗೆ ಕಿಂಚಿತ್ತೂ ಕ್ಯಾರೇ ಎನ್ನುತ್ತಿಲ್ಲ ಎಂದು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕಾಮಗಾರಿ ಮುಂದುವರಿಸದಿದ್ದರೆ ಅಥವಾ ರಸ್ತೆಯನ್ನು ತಾತ್ಕಾಲಿಕವಾಗಿ ಸರಿಪಡಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ” ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಬೆಂಗಳೂರುಮುಖಪುಟ

ಮುಂದಿನ 3 ದಿನ ರಾಜ್ಯದಲ್ಲಿ 7 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ವರುಣನ ರಗಳೆ..!

November 7, 2025
ಮಂಡ್ಯಮುಖಪುಟ

ಮಂಡ್ಯ: ಜಿಲ್ಲಾಧಿಕಾರಿ ಕಚೇರಿ ಮುಂದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಸಾವು!

November 5, 2025
ಮುಖಪುಟಮೈಸೂರು ನಗರಸನ್ನಿಧಾನ

ಸಿದ್ದಲಿಂಗಪುರ: ಸುಬ್ರಹ್ಮಣ್ಯ ಷಷ್ಠಿ ಆಚರಣೆಯಲ್ಲಿ ಶಾಸಕ ಜಿ.ಟಿ. ದೇವೇಗೌಡ ಭಾಗಿ

November 26, 2025
ಬೆಂಗಳೂರುಮುಖಪುಟಸಿನಿಮಾ

ಯಶ್ ‘TOXIC’ ರಿಲೀಸ್ ಗೆ 100 ದಿನ ಬಾಕಿ.. ಸ್ಪೆಷಲ್ ಪೋಸ್ಟ್ ಹಂಚಿಕೊಂಡ ರಾಕಿ ಭಾಯ್..

December 9, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?