PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಶಾಲಾ ಪ್ರವಾಸದ ಬಸ್ ಅಪಘಾತ: ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಶಾಲಾ ಆಡಳಿತ ಮಂಡಳಿ ನಿರ್ಲಕ್ಷ್ಯ – ಪೋಷಕರ ಆಕ್ರೋಶ!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಶಾಲಾ ಪ್ರವಾಸದ ಬಸ್ ಅಪಘಾತ: ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಶಾಲಾ ಆಡಳಿತ ಮಂಡಳಿ ನಿರ್ಲಕ್ಷ್ಯ – ಪೋಷಕರ ಆಕ್ರೋಶ!
ಮುಖಪುಟಮೈಸೂರು ನಗರ

ಶಾಲಾ ಪ್ರವಾಸದ ಬಸ್ ಅಪಘಾತ: ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಶಾಲಾ ಆಡಳಿತ ಮಂಡಳಿ ನಿರ್ಲಕ್ಷ್ಯ – ಪೋಷಕರ ಆಕ್ರೋಶ!

Prathinidhi News
Last updated: December 5, 2025 3:46 pm
Prathinidhi News
Published December 5, 2025
Share
SHARE

ಮೈಸೂರು, ಡಿಸೆಂಬರ್‌ 5, 2025 :ಶಾಲಾ ಪ್ರವಾಸಕ್ಕೆ ವಿದ್ಯಾರ್ಥಿಗಳನ್ನು ಕರೆದೊಯ್ದಿದ್ದ ಬಸ್ ಪಲ್ಟಿಯಾದ ಘಟನೆಯಲ್ಲಿ ಗಾಯಗೊಂಡ ಮಕ್ಕಳಿಗೆ ಸೂಕ್ತ ಚಿಕಿತ್ಸೆ ಕೊಡಿಸುವಲ್ಲಿ ತರಳಬಾಳು ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ನಿರ್ಲಕ್ಷ್ಯ ವಹಿಸಿದೆ ಎಂದು ಪೋಷಕರು ಮತ್ತು ಸ್ಥಳೀಯ ಮುಖಂಡರು ಗಂಭೀರ ಆರೋಪ ಮಾಡಿದ್ದಾರೆ. ಮೈಸೂರಿನ ಟಿ.ಕೆ. ಬಡಾವಣೆಯಲ್ಲಿರುವ ಸಂಸ್ಥೆಯ ಆಡಳಿತ ಮಂಡಳಿ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಸ್ ಪಲ್ಟಿಯಾದ ಈ ದುರಂತದಲ್ಲಿ ಪವನ್ ಎಂಬ ವಿದ್ಯಾರ್ಥಿ ಸಾವನ್ನಪ್ಪಿದ್ದು, ಹಲವಾರು ವಿದ್ಯಾರ್ಥಿಗಳು ಗಾಯಗೊಂಡಿದ್ದರು. ಗಾಯಾಳು ವಿದ್ಯಾರ್ಥಿಗಳ ಪೈಕಿ ಗೌತಮಿ ಖುಷಿ ಎಂಬ ವಿದ್ಯಾರ್ಥಿನಿಯ ಸ್ಥಿತಿ ಚಿಂತಾಜನಕವಾಗಿದ್ದು, ತಲೆಗೆ ತೀವ್ರ ಪೆಟ್ಟು ಬಿದ್ದ ಪರಿಣಾಮ ರಕ್ತ ಹೆಪ್ಪುಗಟ್ಟಿದೆ.

ಆದರೆ, ವಿದ್ಯಾರ್ಥಿನಿಯ ಗಂಭೀರ ಸ್ಥಿತಿಯ ಹೊರತಾಗಿಯೂ ಸೂಕ್ತ ಚಿಕಿತ್ಸೆ ಕೊಡಿಸಲು ಶಾಲೆಯ ಆಡಳಿತ ಮಂಡಳಿಯು ಅಗತ್ಯ ನೆರವು ನೀಡುತ್ತಿಲ್ಲ ಎಂದು ಪೋಷಕರು ದೂರಿದ್ದಾರೆ. “ಗಾಯಾಳು ಮಕ್ಕಳ ವಿಚಾರದಲ್ಲಿ ಶಾಲೆಯ ಆಡಳಿತ ಮಂಡಳಿ ಸಕಾರಾತ್ಮಕವಾಗಿ ಸ್ಪಂದಿಸುತ್ತಿಲ್ಲ,” ಎಂದು ಪೋಷಕರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಈ ಕುರಿತು ಮಹಾನಗರ ಪಾಲಿಕೆ ಮಾಜಿ ಸದಸ್ಯ ಗೋಪಿ, ಗಾಯಾಳು ವಿದ್ಯಾರ್ಥಿನಿ ಗೌತಮಿಖುಷಿಯ ದೊಡ್ಡಪ್ಪ ಗೋವಿಂದರಾಜು, ತಾಯಿ ಸುಧಾ ಸೇರಿದಂತೆ ಇತರರು ಮಾಧ್ಯಮದ ಜೊತೆ ಮಾತನಾಡಿ ತರಳಬಾಳು ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

- ಜಾಹೀರಾತು -

“ಎಲ್ಲಾ ವೆಚ್ಚವನ್ನು ನಾವೇ ಭರಿಸುತ್ತೇವೆ” – ಪ್ರಾಂಶುಪಾಲರ ಸ್ಪಷ್ಟನೆ

ಪೋಷಕರು ಮತ್ತು ಸಾರ್ವಜನಿಕರ ಆಕ್ರೋಶದ ಹಿನ್ನೆಲೆಯಲ್ಲಿ, ತರಳಬಾಳು ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಪರವಾಗಿ ಕಾಲೇಜಿನ ಪ್ರಾಂಶುಪಾಲ ಮಹದೇವಸ್ವಾಮಿ ಅವರು ಮಾಧ್ಯಮದವರೊಂದಿಗೆ ಸ್ಪಷ್ಟನೆ ನೀಡಿದ್ದಾರೆ. ಪ್ರಾಂಶುಪಾಲ ಮಹದೇವಸ್ವಾಮಿ ಅವರು, “ಬಸ್ ಪಲ್ಟಿಯಾದ ದುರಂತದಲ್ಲಿ ಗಾಯಗೊಂಡಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಅಗತ್ಯ ಚಿಕಿತ್ಸೆ ಕೊಡಿಸಲು ಶಾಲೆಯ ಆಡಳಿತ ಮಂಡಳಿ ಬದ್ಧವಾಗಿದೆ,” ಎಂದು ತಿಳಿಸಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಕ್ರಿಸ್‌ಮಸ್‌ ಹಾಗೂ ಹೊಸ ವರ್ಷದ ಸಂಭ್ರಮ -ತಲಕಾಡಿನತ್ತ ಹರಿದುಬಂದ ಪ್ರವಾಸಿಗರು

December 29, 2025
ಮುಖಪುಟಮೈಸೂರು ಗ್ರಾಮಾಂತರ

ಬಸವನಗಿರಿ ಆಶ್ರಮ ಶಾಲೆಯಲ್ಲಿ ಭಾರೀ ಗಾತ್ರದ ಹೆಬ್ಬಾವು ಪ್ರತ್ಯಕ್ಷ.!

November 12, 2025
ತುಮಕೂರುಮುಖಪುಟ

ತುಮಕೂರು: ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿ; ಬಾಲಕಿ ಸೇರಿ ನಾಲ್ವರು ಅಯ್ಯಪ್ಪ ಭಕ್ತರ ದುರ್ಮರಣ

January 9, 2026
ಬೆಂಗಳೂರುಮುಖಪುಟ

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬೆಂಗಳೂರಿನಲ್ಲಿ 14 ವರ್ಷದ ಬಾಲಕ ಬಲಿ : ಕೊಳೆತ ಸ್ಥಿತಿಯಲ್ಲಿ ಮತದೇಹ ಪತ್ತೆ

February 2, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?