PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು: ಮೈಸೂರು : ಗೌಡನಕಟ್ಟೆ ಬಳಿ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಸಾ*ವು..!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರು: ಮೈಸೂರು : ಗೌಡನಕಟ್ಟೆ ಬಳಿ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಸಾ*ವು..!
ಮುಖಪುಟಮೈಸೂರು ನಗರ

ಮೈಸೂರು: ಮೈಸೂರು : ಗೌಡನಕಟ್ಟೆ ಬಳಿ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಸಾ*ವು..!

Prathinidhi News
Last updated: December 10, 2025 11:37 am
Prathinidhi News
Published December 10, 2025
Share
SHARE

ಮೈಸೂರು , ಡಿಸೆಂಬರ್‌ 10, 2025 : ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗೌಡನಕಟ್ಟೆ ಬಳಿ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಸಾವನ್ನಪ್ಪಿವೆ. ಮೈಸೂರಿನ ಹೊರವಲಯದ ಕೂರ್ಗಳ್ಳಿ ಪುನರ್ವಸತಿ ಕೇಂದ್ರದಲ್ಲಿ ಆಶ್ರಯ ಪಡೆದಿದ್ದ ಈ ಮರಿಗಳು ನಾಲ್ಕು ದಿನಗಳ ಅಂತರದಲ್ಲಿ ಮೃತಪಟ್ಟಿವೆ. ಹುಲಿ ಮರಿಗಳ ಸಾವಿಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ.

Contents
ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಅಂಗಾಂಗಗಳುಗೌಪ್ಯತೆ ಕಾಯ್ದುಕೊಂಡ ಅರಣ್ಯ ಇಲಾಖೆ

ಗೌಡನಕಟ್ಟೆಯ ಪ್ರಕಾಶ್‌ ಎಂಬುವರ ಜೋಳದ ಹೊಲದಲ್ಲಿ ಕಳೆದ ನವೆಂಬರ್ 28ರಂದು ತಾಯಿ ಹುಲಿಯು ತನ್ನ ನಾಲ್ಕು ಮರಿಗಳೊಂದಿಗೆ ಕಾಣಿಸಿಕೊಂಡಿತ್ತು. ಅದೇ ಮಧ್ಯರಾತ್ರಿ ತಾಯಿ ಹುಲಿಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿತ್ತು.

ಇದಾದ ಎರಡು ದಿನಗಳ ನಂತರ ಅಂದರೆ ನವೆಂಬರ್ 30ರಂದು ನಾಲ್ಕು ಹುಲಿ ಮರಿಗಳು ಪತ್ತೆಯಾಗಿದ್ದವು. ಹುಲಿ ಮರಿಗಳನ್ನು ಸೆರೆ ಹಿಡಿಯುವ ಸಂದರ್ಭದಲ್ಲಿ ಜನರ ಕಿರುಚಾಟದಿಂದ ಮರಿಗಳು ತೀವ್ರವಾಗಿ ಗಾಬರಿಗೊಂಡಿದ್ದವು ಎಂದು ತಿಳಿದುಬಂದಿದೆ.

ಎರಡು ದಿನಗಳ ಕಾಲ ತಾಯಿಯಿಂದ ದೂರ ಉಳಿದಿದ್ದ ಮರಿಗಳು ಆಹಾರವಿಲ್ಲದೇ ಬಳಲಿದ್ದವು. ಜನರ ಕೂಗಾಟದಿಂದ ಓಡಾಡಿ ಸೆರೆ ಹಿಡಿಯುವ ವೇಳೆಗೆ ಸಂಪೂರ್ಣವಾಗಿ ನಿತ್ರಾಣಗೊಂಡಿದ್ದವು. ತಕ್ಷಣವೇ ಅವುಗಳನ್ನು ಸೂಕ್ತ ಚಿಕಿತ್ಸೆಗಾಗಿ ಕೂರ್ಗಳ್ಳಿ ಪುನರ್ವಸತಿ ಕೇಂದ್ರಕ್ಕೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

- ಜಾಹೀರಾತು -

ಆದರೆ, ಗಾಬರಿಗೊಳಗಾಗಿದ್ದ ಮರಿಗಳು ಸರಿಯಾಗಿ ಆಹಾರ ಸೇವಿಸುತ್ತಿರಲಿಲ್ಲ. ಅಸ್ವಸ್ಥಗೊಂಡಿದ್ದ ಈ ಹುಲಿ ಮರಿಗಳು ಒಂದಾದ ನಂತರ ಒಂದು ಸಾವನ್ನಪ್ಪಿವೆ.

ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಅಂಗಾಂಗಗಳು

ಪಶುವೈದ್ಯರು ಸಾವನ್ನಪ್ಪಿರುವ ಹುಲಿ ಮರಿಗಳ ಮರಣೋತ್ತರ ಪರೀಕ್ಷೆಯನ್ನು ನಡೆಸಿದ್ದಾರೆ. ಮೃತಪಟ್ಟ ಮರಿಗಳ ಅಂಗಾಂಗಗಳನ್ನು ಹೆಚ್ಚಿನ ಪರೀಕ್ಷೆಗಾಗಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವಷ್ಟೇ ಹುಲಿ ಮರಿಗಳ ಸಾವಿಗೆ ನಿಖರವಾದ ಕಾರಣ ತಿಳಿದು ಬರಲಿದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.

ತಾಯಿ ಹುಲಿಯು ಸದ್ಯಕ್ಕೆ ಆರೋಗ್ಯದಿಂದಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.

ಗೌಪ್ಯತೆ ಕಾಯ್ದುಕೊಂಡ ಅರಣ್ಯ ಇಲಾಖೆ

ಹುಲಿ ಮರಿಗಳ ಸಾವಿನ ಬಗ್ಗೆ ಅರಣ್ಯ ಇಲಾಖೆ ಯಾವುದೇ ಮಾಹಿತಿ ನೀಡದೆ ಗೌಪ್ಯತೆಯನ್ನು ಕಾಯ್ದುಕೊಂಡಿದೆ. ಈ ಬಗ್ಗೆ ಖಚಿತಪಡಿಸಿಕೊಳ್ಳಲು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿದರೂ ಅವರು ಸ್ವೀಕರಿಸಿಲ್ಲ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟ

ದೆವ್ವ ಹಿಡಿದಿದೆ ಎಂದು ಕಟ್ಟಿಗೆಯಿಂದ ಹೊಡೆದು ಕೊಲೆ : ಮೂಢನಂಬಿಕೆಗೆ ಮಹಾರಾಷ್ಟ್ರದಲ್ಲಿ ಕಲಬುರಗಿ ಮೂಲದ ಮಹಿಳೆ ಸಾವು

December 27, 2025
ಕ್ರೀಡೆಮುಖಪುಟ

“ಹಿಟ್ ಮ್ಯಾನ್” – “ಕಿಂಗ್ ” ಆಟಕ್ಕೆ ಫ್ಯಾನ್ಸ್ ಫಿದಾ.. “ನಿವೃತ್ತಿ” ಮಾತಾಡ್ತಿದ್ದವರಿಗೆ ಗಪ್ ಚುಪ್ ಎಂದ ಸ್ಟಾರ್ ಬ್ಯಾಟರ್ಸ್..

December 1, 2025
ನಂಜನಗೂಡುಮುಖಪುಟ

ರಸ್ತೆಯ ಹಳ್ಳ ತಪ್ಪಿಸಲು ಹೋಗಿ ಬೈಕ್ ಸವಾರ ಸಾವು: ನಂಜನಗೂಡು ಸಮೀಪ ದುರ್ಘಟನೆ

November 21, 2025
ಬೆಂಗಳೂರುಮುಖಪುಟರಾಜಕೀಯ

ಜನವರಿ 7 ರಂದು “ಸಿದ್ದು”ಗೆ ಮಹತ್ವದ ದಿನ ಯಾಕೆ..? ನ್ಯೂ ಇಯರ್ ಗೆ ಸಿಎಂ ಸಿದ್ದರಾಮಯ್ಯ ಹೊಸ ರೆಕಾರ್ಡ್..!

December 31, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?