PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮುಡಾ ಪ್ರಕರಣ : ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಇಂದು ಆದೇಶ ; ಕುತೂಹಲ ಕೆರಳಿಸಿದ ಸ್ನೇಹಮಯಿ ಕೃಷ್ಣ ಪೋಸ್ಟ್‌ !
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮುಡಾ ಪ್ರಕರಣ : ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಇಂದು ಆದೇಶ ; ಕುತೂಹಲ ಕೆರಳಿಸಿದ ಸ್ನೇಹಮಯಿ ಕೃಷ್ಣ ಪೋಸ್ಟ್‌ !
ಮುಖಪುಟಮುಡಾ ಹಗರಣಮೈಸೂರು ನಗರ

ಮುಡಾ ಪ್ರಕರಣ : ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಇಂದು ಆದೇಶ ; ಕುತೂಹಲ ಕೆರಳಿಸಿದ ಸ್ನೇಹಮಯಿ ಕೃಷ್ಣ ಪೋಸ್ಟ್‌ !

Prathinidhi News
Last updated: December 18, 2025 12:18 pm
Prathinidhi News
Published December 18, 2025
Share
SHARE

ಮೈಸೂರು, ಡಿಸೆಂಬರ್‌ 18, 2025 : ಮುಡಾ (MUDA) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನೀಡಲಿರುವ ಆದೇಶದ ಮೇಲೆ ಇಡೀ ರಾಜ್ಯದ ಕಣ್ಣು ನೆಟ್ಟಿದೆ. ಈ ಬೆನ್ನಲ್ಲೇ ದೂರುದಾರ ಸ್ನೇಹಮಯಿ ಕೃಷ್ಣ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪೋಸ್ಟ್ ಒಂದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

ದೂರುದಾರ ಸ್ನೇಹಮಯಿ ಕೃಷ್ಣ ಅವರು ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ರಾಜ್ಯ ಸರ್ಕಾರದ ಭವಿಷ್ಯದ ಬಗ್ಗೆ ಮಹತ್ವದ ಪ್ರಶ್ನೆಯೊಂದನ್ನು ಎತ್ತಿದ್ದಾರೆ.  “ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಾನು ಮಾಡಿರುವ ಆರೋಪಗಳು ಮೇಲ್ನೋಟಕ್ಕೆ ನಿಜ ಎಂಬುದು ಮಾನ್ಯ ನ್ಯಾಯಾಲಯಕ್ಕೆ ಖಚಿತವಾಗಿ, ಹೆಚ್ಚಿನ ವಿಚಾರಣೆಗೆ ಅವಕಾಶ ಸಿಗುವಂತಾದರೆ… ರಾಜ್ಯ ರಾಜಕೀಯದಲ್ಲಿ ದೊಡ್ಡ ಬದಲಾವಣೆ ಆಗಬಹುದೇ?” ಎಂದು ಸ್ನೇಹಮಯಿ ಕೃಷ್ಣ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ.

ಮುಡಾ ಹಗರಣದಲ್ಲಿ ಮುಖ್ಯಮಂತ್ರಿಗಳ ವಿರುದ್ಧ ತನಿಖೆಗೆ ಆದೇಶ ಸಿಗಲಿದೆಯೇ ಎಂಬುದು ಇಂದು ನಿರ್ಧಾರವಾಗಲಿದೆ. ಒಂದು ವೇಳೆ ನ್ಯಾಯಾಲಯವು ತನಿಖೆಗೆ ಹಸಿರು ನಿಶಾನೆ ತೋರಿಸಿದರೆ, ಅದು ರಾಜ್ಯ ಸರ್ಕಾರದ ಅಸ್ತಿತ್ವ ಮತ್ತು ನಾಯಕತ್ವದ ಮೇಲೆ ನೇರ ಪರಿಣಾಮ ಬೀರಲಿದೆ. “ಈ ಪ್ರಶ್ನೆಗೆ ಕೆಲವೇ ಗಂಟೆಗಳಲ್ಲಿ ಉತ್ತರ ದೊರೆಯಲಿದೆ” ಎಂದು ಕೃಷ್ಣ ಅವರು ಬರೆದುಕೊಳ್ಳುವ ಮೂಲಕ ತೀರ್ಪಿನ ಮಹತ್ವವನ್ನು ಒತ್ತಿಹೇಳಿದ್ದಾರೆ.

- ಜಾಹೀರಾತು -

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರು. ಇದನ್ನು ಪ್ರಶ್ನಿಸಿ ಸಿಎಂ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಈ ಪ್ರಕರಣದ ಮುಂದಿನ ಹಂತದ ಬಗ್ಗೆ ಇಂದು ತನ್ನ ತೀರ್ಪನ್ನು ಪ್ರಕಟಿಸಲಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಬೆಂಗಳೂರುಮುಖಪುಟ

ವಾಹನ ಸವಾರರಿಗೆ ಸರ್ಕಾರ ಗುಡ್ ನ್ಯೂಸ್..! ಹಳೇ ದಂಡ ಪಾವತಿಗೆ ಮತ್ತೆ 50% ಡಿಸ್ಕೌಂಟ್..!

November 21, 2025
ಮುಖಪುಟಮೈಸೂರು ನಗರ

ಮೈಸೂರು ವಿವಿ 106ನೇ ಘಟಿಕೋತ್ಸವ ಸಂಭ್ರಮ: 30,966 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ, ಮಹಿಳೆಯರ ಅಭೂತಪೂರ್ವ ಸಾಧನೆ

January 5, 2026
ಮುಖಪುಟಮೈಸೂರು ನಗರ

ಅಂಬಾವಿಲಾಸ ಅರಮನೆಯ ವರಾಹ ಗೇಟ್ ಬಳಿ ಮೇಲ್ಚಾವಣಿ ಕುಸಿತ..! ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ..!

December 11, 2025
ಮುಖಪುಟಮೈಸೂರು ನಗರ

ಮೈಸೂರು: ನಾಳೆ ಲಕ್ಷ ಕಂಠಗಳಿಂದ ಹನುಮಾನ್ ಚಾಲೀಸಾ ಪಠಣ; ಸಿದ್ದರಾಮಯ್ಯ ಸುದೀರ್ಘ ಕಾಲ ಸಿಎಂ ಆಗಿರಲಿ ಎಂದ ಶಾಸಕ ಹರೀಶ್ ಗೌಡ

February 13, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?