PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು: ಚಪ್ಪಲಿ ಹೊರಗೆ ಬಿಡಿ ಎಂದಿದ್ದಕ್ಕೆ ವೈದ್ಯರ ಮೇಲೆ ಹಲ್ಲೆ; ಸಿಸಿಟಿವಿಯಲ್ಲಿ ಸೆರೆಯಾಯ್ತು ಅಸಭ್ಯ ವರ್ತನೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಕ್ರೈಂ ಸುದ್ದಿಗಳು > ಮೈಸೂರು: ಚಪ್ಪಲಿ ಹೊರಗೆ ಬಿಡಿ ಎಂದಿದ್ದಕ್ಕೆ ವೈದ್ಯರ ಮೇಲೆ ಹಲ್ಲೆ; ಸಿಸಿಟಿವಿಯಲ್ಲಿ ಸೆರೆಯಾಯ್ತು ಅಸಭ್ಯ ವರ್ತನೆ
ಕ್ರೈಂ ಸುದ್ದಿಗಳುಮುಖಪುಟಮೈಸೂರು ನಗರ

ಮೈಸೂರು: ಚಪ್ಪಲಿ ಹೊರಗೆ ಬಿಡಿ ಎಂದಿದ್ದಕ್ಕೆ ವೈದ್ಯರ ಮೇಲೆ ಹಲ್ಲೆ; ಸಿಸಿಟಿವಿಯಲ್ಲಿ ಸೆರೆಯಾಯ್ತು ಅಸಭ್ಯ ವರ್ತನೆ

Prathinidhi News
Last updated: December 19, 2025 1:06 pm
Prathinidhi News
Published December 19, 2025
Share
SHARE

ಮೈಸೂರು, ಡಿಸೆಂಬರ್‌ 19, 2025 : ಮೈಸೂರಿನ ಸಾತಗಳ್ಳಿ ಬಡಾವಣೆಯಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ವೈದ್ಯರೊಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಇಲ್ಲಿನ ಶಿಶು ಆಸ್ಪತ್ರೆಯ ಡಾ. ಅನೂಪ್ ಎಂಬುವರ ಮೇಲೆ ರುಬಿಯಾಜ್ ಷರೀಫ್ ಹಾಗೂ ಆತನ ತಂದೆ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಕ್ಲಿನಿಕ್‌ನ ಸ್ವಚ್ಛತೆ ಕಾಪಾಡುವ ದೃಷ್ಟಿಯಿಂದ ಚಪ್ಪಲಿಯನ್ನು ಹೊರಗಡೆ ಬಿಟ್ಟು ಬರುವಂತೆ ವೈದ್ಯರು ಸೂಚಿಸಿದ್ದೇ ಈ ಗಲಾಟೆಗೆ ಮುಖ್ಯ ಕಾರಣವಾಗಿದೆ.

ರುಬಿಯಾಜ್ ಷರೀಫ್ ಎಂಬುವವರ ಮೂರು ವರ್ಷದ ಮಗು ಚಿಕಿತ್ಸೆಗಾಗಿ ಈ ಆಸ್ಪತ್ರೆಗೆ ದಾಖಲಾಗಿತ್ತು. ಈ ವೇಳೆ ಮಗುವನ್ನು ನೋಡಲು ಬಂದಿದ್ದ ರುಬಿಯಾಜ್, ನಿಯಮ ಮೀರಿ ಚಪ್ಪಲಿ ಧರಿಸಿಕೊಂಡೇ ಆಸ್ಪತ್ರೆಯ ಒಳಭಾಗಕ್ಕೆ ಪ್ರವೇಶಿಸಿದ್ದರು. ಇದನ್ನು ಗಮನಿಸಿದ ಡಾ. ಅನೂಪ್ ಅವರು ಚಪ್ಪಲಿಯನ್ನು ಹೊರಗೆ ಬಿಡುವಂತೆ ಸೌಜನ್ಯದಿಂದ ಮನವಿ ಮಾಡಿದ್ದರು. ಆದರೆ ಇದಕ್ಕೆ ಒಪ್ಪದ ರುಬಿಯಾಜ್, “ನೀವು ಮಾತ್ರ ಚಪ್ಪಲಿ ಹಾಕಿಕೊಳ್ಳಬಹುದಾ?” ಎಂದು ಪ್ರಶ್ನಿಸಿ ವೈದ್ಯರೊಂದಿಗೆ ತೀವ್ರ ಮಾತಿನ ಚಕಮಕಿ ನಡೆಸಿದ್ದಾನೆ.

ವೈದ್ಯರು ತಾವು ಧರಿಸಿರುವ ಚಪ್ಪಲಿ ಆಸ್ಪತ್ರೆಯ ಒಳಗಿನ ಬಳಕೆಗೆ ಮಾತ್ರ ಸೀಮಿತವಾದುದು ಎಂದು ವಿವರಿಸುತ್ತಾ, ತಾವು ಹೊರಗೆ ಬಿಟ್ಟಿದ್ದ ಚಪ್ಪಲಿಯನ್ನು ತೋರಿಸಲು ಕ್ಲಿನಿಕ್‌ನಿಂದ ಹೊರಬಂದಿದ್ದಾರೆ. ಈ ಸಂದರ್ಭದಲ್ಲಿ ರುಬಿಯಾಜ್ ಷರೀಫ್ ಮತ್ತು ಆತನ ತಂದೆ ಏಕಾಏಕಿ ವೈದ್ಯರ ಮೇಲೆ ಮುಗಿಬಿದ್ದು ಹಲ್ಲೆ ನಡೆಸಿದ್ದಾರೆ. ಈ ಇಡೀ ಘಟನೆಯ ದೃಶ್ಯಾವಳಿಗಳು ಆಸ್ಪತ್ರೆಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವೈದ್ಯರ ಮೇಲಿನ ದೌರ್ಜನ್ಯಕ್ಕೆ ಸಾಕ್ಷಿಯಾಗಿವೆ.

ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಕೆಯಾಗಿದ್ದು, ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಆದರೆ, ಘಟನೆ ನಡೆದು ದೂರು ದಾಖಲಾದರೂ ಸಹ ಪೊಲೀಸರು ಇದುವರೆಗೆ ಆರೋಪಿಗಳನ್ನು ಬಂಧಿಸಿಲ್ಲ ಎಂಬ ಆರೋಪ ಕೇಳಿಬಂದಿದೆ. ಕರ್ತವ್ಯ ನಿರತ ವೈದ್ಯರ ಮೇಲಿನ ಈ ಹಲ್ಲೆಯನ್ನು ವೈದ್ಯಕೀಯ ವಲಯ ತೀವ್ರವಾಗಿ ಖಂಡಿಸಿದ್ದು, ಆರೋಪಿಗಳ ವಿರುದ್ಧ ತಕ್ಷಣದ ಕ್ರಮಕ್ಕೆ ಒತ್ತಾಯಿಸಿದೆ.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಮೈಸೂರು: ಹಿರಿಯ ಪತ್ರಕರ್ತ ರಾಜಶೇಖರ ಕೋಟಿ ಸ್ಮರಣಾರ್ಥ ಕ್ಯಾಲೆಂಡರ್ ಬಿಡುಗಡೆ ಹಾಗೂ ಅಭಿನಂದನಾ ಸಮಾರಂಭ

February 9, 2026
ಬೆಂಗಳೂರುಮುಖಪುಟಮೈಸೂರು ನಗರರಾಜಕೀಯ

ಶಬರಿಮಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪರ ‘ಅಯ್ಯಪ್ಪ’ ಭಕ್ತರ ಪ್ರಾರ್ಥನೆ!

November 26, 2025
ಮುಖಪುಟಮೈಸೂರು ನಗರಸನ್ನಿಧಾನ

ಸಾಂಸ್ಕೃತಿಕ ನಗರಿಯಲ್ಲಿ ಮೊಳಗಿದ ಗೋವಿಂದ ನಾಮ; ಒಂಟಿಕೊಪ್ಪಲು ಹಾಗೂ ಸಚ್ಚಿದಾನಂದ ಆಶ್ರಮದಲ್ಲಿ ವೈಕುಂಠ ಏಕಾದಶಿ ವೈಭವ

December 30, 2025
ಕ್ರೈಂ ಸುದ್ದಿಗಳುಮುಖಪುಟಹಾಸನ

ಆಸ್ತಿಗಾಗಿ ದಾಯಾದಿಗಳ ನಡುವೆ ಕಿತ್ತಾಟ : ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿ ಸಾರಿಗೆ ನೌಕರನ ಬರ್ಬರ ಹತ್ಯೆ

February 19, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?