PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು : ಕೆನರಾ ಗೋಲ್ಡ್‌ ಸ್ಕಾಮ್‌ ಪ್ರಕರಣ ; ಕಡೆಗೂ ಬಿತ್ತು ಅಕ್ಕಸಾಲಿಗ ಅಶ್ವಿನ್‌ ಆಚಾರ್‌ ವಿರುದ್ಧ FIR
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರು : ಕೆನರಾ ಗೋಲ್ಡ್‌ ಸ್ಕಾಮ್‌ ಪ್ರಕರಣ ; ಕಡೆಗೂ ಬಿತ್ತು ಅಕ್ಕಸಾಲಿಗ ಅಶ್ವಿನ್‌ ಆಚಾರ್‌ ವಿರುದ್ಧ FIR
ಮುಖಪುಟಮೈಸೂರು ನಗರ

ಮೈಸೂರು : ಕೆನರಾ ಗೋಲ್ಡ್‌ ಸ್ಕಾಮ್‌ ಪ್ರಕರಣ ; ಕಡೆಗೂ ಬಿತ್ತು ಅಕ್ಕಸಾಲಿಗ ಅಶ್ವಿನ್‌ ಆಚಾರ್‌ ವಿರುದ್ಧ FIR

Prathinidhi News
Last updated: December 20, 2025 3:32 pm
Prathinidhi News
Published December 20, 2025
Share
SHARE

ಮೈಸೂರು, ಡಿಸೆಂಬರ್‌ 20, 2025 :ಮೈಸೂರಿನ ಹಿನಕಲ್‌ನಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಅಡವಿಟ್ಟಿದ್ದ ಚಿನ್ನಾಭರಣಗಳ ತೂಕದಲ್ಲಿ ನಡೆದಿದೆ ಎನ್ನಲಾದ ಭಾರಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಕ್ಕಸಾಲಿಗ ಅಶ್ವಿನ್ ಆಚಾರ್ ವಿರುದ್ಧ ಕಡೆಗೂ ಎಫ್‌ಐಆರ್ ದಾಖಲಾಗಿದೆ.

ಕಳೆದ 2014ರಿಂದ ಇದೇ ಬ್ಯಾಂಕ್‌ನಲ್ಲಿ ಅಕ್ಕಸಾಲಿಗನಾಗಿ ಕಾರ್ಯನಿರ್ವಹಿಸುತ್ತಿದ್ದ ಅಶ್ವಿನ್ ಆಚಾರ್ ವಿರುದ್ಧ ಕೆನರಾ ಬ್ಯಾಂಕ್‌ನ ಪ್ರಾದೇಶಿಕ ವ್ಯವಸ್ಥಾಪಕ ರಾಜಶೇಖರ್ ಅವರು ನೀಡಿದ ದೂರಿನ ಆಧಾರದ ಮೇರೆಗೆ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಈ ವಂಚನೆ ಜಾಲವು ಇತ್ತೀಚೆಗೆ ಗ್ರಾಹಕರಾದ ಎಚ್.ವಿ. ಕಿರಣ್ ಹಾಗೂ ಶ್ವೇತಾ ಅವರು ತಾವು ಬಿಡಿಸಿಕೊಂಡ ಚಿನ್ನದ ತೂಕದ ಬಗ್ಗೆ ಅನುಮಾನ ವ್ಯಕ್ತಪಡಿಸಿದಾಗ ಬೆಳಕಿಗೆ ಬಂದಿತ್ತು.

ಗ್ರಾಹಕರ ದೂರಿನ ಬೆನ್ನಲ್ಲೇ ಬ್ಯಾಂಕ್ ಸಿಬ್ಬಂದಿ ನಡೆಸಿದ ಆಂತರಿಕ ಪರಿಶೀಲನೆಯು ವಂಚನೆಯನ್ನು ದೃಢಪಡಿಸಿದೆ. ವಿಶೇಷವಾಗಿ ರಾಧಾ ಎಂಬ ಗ್ರಾಹಕರು 19-12-2025ರಂದು ತಾವು ಅಡವಿಟ್ಟಿದ್ದ ಚಿನ್ನದಲ್ಲಿ 3.573 ಗ್ರಾಂನಷ್ಟು ವ್ಯತ್ಯಾಸವಿರುವುದನ್ನು ಪತ್ತೆಹಚ್ಚಿ ಬ್ಯಾಂಕ್‌ಗೆ ಅಧಿಕೃತ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಪುನಃ ತೂಕ ಪರೀಕ್ಷೆ ನಡೆಸಿದಾಗ ಚಿನ್ನದ ಪ್ರಮಾಣ ಕಡಿಮೆ ಇರುವುದು ಪತ್ತೆಯಾಗಿದೆ.

ನಂಬಿಕಸ್ಥ ಅಕ್ಕಸಾಲಿಗನಿಂದಲೇ ಗ್ರಾಹಕರಿಗೆ ಮೋಸವಾಗಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ, ಪ್ರಾದೇಶಿಕ ವ್ಯವಸ್ಥಾಪಕರು ತಕ್ಷಣವೇ ಪೊಲೀಸರಿಗೆ ದೂರು ನೀಡಿದ್ದು, ಆರೋಪಿ ಅಶ್ವಿನ್ ಆಚಾರ್ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಸುವರ್ಣ ವಿಧಾನಸೌಧದ ಆವರಣದಲ್ಲಿ ಉದ್ಯಾನವನ ಹಾಗೂ ಕಾರಂಜಿಯ ಉದ್ಘಾಟನೆ ಮಾಡಿದ ಸಿಎಂ ಸಿದ್ದರಾಮಯ್ಯ !

December 11, 2025
ಚಾಮರಾಜನಗರಮುಖಪುಟ

ಚಾಮರಾಜನಗರದಲ್ಲಿ ವ್ಯಕ್ತಿ ಮೇಲೆ ಚಿರತೆ ದಾಳಿ : ಪ್ರತಿರೋಧ ತೋರಿ ಪ್ರಾಣಾಪಾಯದಿಂದ ಪಾರು !

January 30, 2026
ಮುಖಪುಟ

ಸಾಲುಮರದ ತಿಮ್ಮಕ್ಕ ನಿಧನ ; ಸಂತಾಪ ಸಲ್ಲಿಸಿದ ಪರಿಸರ ಪ್ರೇಮಿಗಳು

November 14, 2025
ಮುಖಪುಟಮೈಸೂರು ನಗರ

ಮೈಸೂರು: ಮಕ್ಕಳ ಶಾಲಾ ಬ್ಯಾಗ್ ನಲ್ಲಿ ಅಡಗಿಕೊಂಡಿದ್ದ ನಾಗರಹಾವು ; ಹಾವನ್ನು ರಕ್ಷಿಸಿದ ಉರಗ ಸಂರಕ್ಷಕ ಸ್ನೇಕ್ ಶಾಮ್ !

February 12, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?