PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು: ತವರು ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಜನತಾ ದರ್ಶನ; ಸಾರ್ವಜನಿಕರ ಅಹವಾಲು ಸ್ವೀಕಾರ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರು: ತವರು ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಜನತಾ ದರ್ಶನ; ಸಾರ್ವಜನಿಕರ ಅಹವಾಲು ಸ್ವೀಕಾರ
ಮುಖಪುಟಮೈಸೂರು ನಗರರಾಜಕೀಯ

ಮೈಸೂರು: ತವರು ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಜನತಾ ದರ್ಶನ; ಸಾರ್ವಜನಿಕರ ಅಹವಾಲು ಸ್ವೀಕಾರ

Prathinidhi News
Last updated: December 22, 2025 1:00 pm
Prathinidhi News
Published December 22, 2025
Share
SHARE

ಮೈಸೂರು, ಡಿಸೆಂಬರ್‌ 22,2025 :ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ತವರು ಜಿಲ್ಲೆ ಮೈಸೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇಂದು ಬೆಳಗ್ಗೆ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು.

ನಗರದ ಟಿ.ಕೆ. ಬಡಾವಣೆಯಲ್ಲಿರುವ ತಮ್ಮ ನಿವಾಸದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಜನತಾ ದರ್ಶನ’ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾದರು. ನೂರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಸಾರ್ವಜನಿಕರು ತಮ್ಮ ವೈಯಕ್ತಿಕ ಹಾಗೂ ಸಾಮಾಜಿಕ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಪ್ರತಿ ಮನವಿಯನ್ನು ತಾಳ್ಮೆಯಿಂದ ಆಲಿಸಿದ ಸಿದ್ದರಾಮಯ್ಯ, ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿದರು.

ಜನತಾ ದರ್ಶನದ ವೇಳೆ ಸಿದ್ದರಾಮನಹುಂಡಿ ಗ್ರಾಮದ ಹಳೆಯ ಪರಿಚಯಸ್ಥರೊಬ್ಬರು ಸಿಎಂ ಅವರನ್ನು ಮನೆಗೆ ಬರುವಂತೆ ಆಹ್ವಾನಿಸಿದರು. ಇದಕ್ಕೆ ಮುಗುಳ್ನಗುತ್ತಲೇ ಉತ್ತರಿಸಿದ ಸಿಎಂ, “ನೀನು ಯಾವಾಗ ಕರೆಯುತ್ತಿಯೋ ಆಗ ಬರುತ್ತೇನೆ, ಊಟ ಮಾಡಿಸು ಸಾಕು” ಎಂದು ಆತ್ಮೀಯವಾಗಿ ನುಡಿದರ ಕಾರ್ಯಕ್ರಮದ ಮಧ್ಯೆ ಪೈಲ್ವಾನ್ ಒಬ್ಬರನ್ನು ಹತ್ತಿರ ಕರೆದ ಮುಖ್ಯಮಂತ್ರಿಗಳು, ಕುಶಲೋಪರಿ ವಿಚಾರಿಸಿ ಅವರಿಗೆ ಪ್ರೋತ್ಸಾಹದಾಯಕವಾಗಿ 500 ರೂಪಾಯಿ ನೀಡಿದರು. ಬೆಳಿಗ್ಗೆಯಿಂದಲೇ ನಿವಾಸದ ಮುಂದೆ ಸಾಲುಗಟ್ಟಿ ನಿಂತಿದ್ದ ಜನರ ಬಳಿಗೆ ಖುದ್ದಾಗಿ ತೆರಳಿ ಮನವಿಗಳನ್ನು ಸ್ವೀಕರಿಸುವ ಮೂಲಕ ಸಿದ್ದರಾಮಯ್ಯ ಅವರು ಗಮನ ಸೆಳೆದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಮೈಸೂರು : ಕೆನರಾ ಗೋಲ್ಡ್‌ ಸ್ಕಾಮ್‌ ಪ್ರಕರಣ ; ಕಡೆಗೂ ಬಿತ್ತು ಅಕ್ಕಸಾಲಿಗ ಅಶ್ವಿನ್‌ ಆಚಾರ್‌ ವಿರುದ್ಧ FIR

December 20, 2025
ಮುಖಪುಟಮೈಸೂರು ಗ್ರಾಮಾಂತರ

ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ : ಹುಣಸೂರಿನಲ್ಲಿ ಭೀಕರ ಘಟನೆ

November 8, 2025
ಮುಖಪುಟಮೈಸೂರು ನಗರರಾಜಕೀಯ

500 ಕೋಟಿ ವಿಶೇಷ ಆರ್ಥಿಕ ನೆರವು ಕಲ್ಪಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಪತ್ರ : ವಿಧಾನಪರಿಷತ್‌ ಸದಸ್ಯ ಶಿವಕುಮಾ‌ರ್ ಹೇಳಿಕೆ

November 3, 2025
ಮುಖಪುಟಮೈಸೂರು ನಗರರಾಜಕೀಯ

ರಾಜ್ಯಪಾಲರ ವಿರುದ್ಧ ಮೈಸೂರಿನಲ್ಲಿ ಕಾಂಗ್ರೆಸ್ ಆಕ್ರೋಶ: ಎಂ.ಕೆ. ಸೋಮಶೇಖರ್ ನೇತೃತ್ವದಲ್ಲಿ ಪ್ರತಿಭಟನೆ

January 23, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?