PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: 2028ರವರೆಗೆ ಸಿದ್ದರಾಮಯ್ಯನವರೇ ಸಿಎಂ, ಯಾರಿಂದಲೂ ಕೆಳಗಿಳಿಸಲು ಸಾಧ್ಯವಿಲ್ಲ: ಸಚಿವ ಜಮೀರ್ ಅಹ್ಮದ್ ಖಾನ್ ಖಡಕ್ ಹೇಳಿಕೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > 2028ರವರೆಗೆ ಸಿದ್ದರಾಮಯ್ಯನವರೇ ಸಿಎಂ, ಯಾರಿಂದಲೂ ಕೆಳಗಿಳಿಸಲು ಸಾಧ್ಯವಿಲ್ಲ: ಸಚಿವ ಜಮೀರ್ ಅಹ್ಮದ್ ಖಾನ್ ಖಡಕ್ ಹೇಳಿಕೆ
ಮುಖಪುಟಮೈಸೂರು ನಗರರಾಜಕೀಯ

2028ರವರೆಗೆ ಸಿದ್ದರಾಮಯ್ಯನವರೇ ಸಿಎಂ, ಯಾರಿಂದಲೂ ಕೆಳಗಿಳಿಸಲು ಸಾಧ್ಯವಿಲ್ಲ: ಸಚಿವ ಜಮೀರ್ ಅಹ್ಮದ್ ಖಾನ್ ಖಡಕ್ ಹೇಳಿಕೆ

Prathinidhi News
Last updated: December 24, 2025 3:42 pm
Prathinidhi News
Published December 24, 2025
Share
SHARE

ಮೈಸೂರು, ಡಿಸೆಂಬರ್‌ 24, 2025 : ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಭರ್ಜರಿ ಬ್ಯಾಟಿಂಗ್ ನಡೆಸಿದ್ದಾರೆ. ಮೈಸೂರಿನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಕುರ್ಚಿಯಲ್ಲಿ ಅತ್ಯಂತ ಭದ್ರವಾಗಿದ್ದಾರೆ ಮತ್ತು 2028ರವರೆಗೂ ಅವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಹೈಕಮಾಂಡ್ ಹೊರತುಪಡಿಸಿ ಬೇರೆ ಯಾರ ಕೈಯಲ್ಲೂ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲು ಸಾಧ್ಯವಿಲ್ಲ ಎಂದು ಸವಾಲು ಹಾಕಿದ ಸಚಿವರು, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ನಿರ್ಧಾರವೇ ಅಂತಿಮ ಎಂದು ಸ್ಪಷ್ಟಪಡಿಸಿದರು.

ಅಧಿಕಾರ ಹಂಚಿಕೆಯ ಒಪ್ಪಂದದ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ತಿಳಿಸಿದ ಜಮೀರ್ ಅಹ್ಮದ್, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ತೆರಳಿರುವುದು ತಮ್ಮ ಇಲಾಖೆಯ ಕೆಲಸಗಳಿಗಾಗಿಯೇ ಹೊರತು ಹೈಕಮಾಂಡ್ ಭೇಟಿಗಾಗಿ ಅಲ್ಲ ಎಂದರು. ಇದೇ ವೇಳೆ ತಮ್ಮ ಆಪ್ತ ಸಹಾಯಕ ಸರ್ಫರಾಜ್ ಅವರ ಮನೆ ಮೇಲೆ ನಡೆದ ಲೋಕಾಯುಕ್ತ ದಾಳಿಯ ಬಗ್ಗೆ ಪ್ರತಿಕ್ರಿಯಿಸಿ, ಈ ಕುರಿತು ತಮಗೆ ಮಾಹಿತಿ ಇಲ್ಲ ಎಂದು ಹೇಳುತ್ತಲೇ, ಸರ್ಫರಾಜ್ ಅವರ ತಂದೆಯ ಕಾಲದಿಂದಲೂ ಅವರು ಶ್ರೀಮಂತರು, ದಾಳಿಯ ಹಿನ್ನೆಲೆ ಏನು ಎಂಬುದು ಮುಂದಿನ ದಿನಗಳಲ್ಲಿ ತಿಳಿಯಲಿದೆ ಎಂದು ಪ್ರತಿಕ್ರಿಯಿಸಿದರು.

ಇನ್ನು ದ್ವೇಷ ಭಾಷಣ ತಡೆ ಕಾಯ್ದೆ ಜಾರಿ ಕುರಿತು ಮಾತನಾಡಿದ ಸಚಿವರು, ಈ ಕಾಯ್ದೆ ಯಾವುದೇ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ, ಇದು ಎಲ್ಲಾ ಧರ್ಮದವರಿಗೂ ಅನ್ವಯಿಸುತ್ತದೆ ಎಂದರು. ಅನೇಕರು ಬಾಯಿಗೆ ಬಂದಂತೆ ಮಾತನಾಡುತ್ತಾರೆ, ಅಂತಹವರ ನಾಲಿಗೆ ಮೇಲೆ ನಿಯಂತ್ರಣ ಹೇರಲು ಈ ಕಾಯ್ದೆ ಸಹಕಾರಿ ಎಂದು ಸಮರ್ಥಿಸಿಕೊಂಡರು. ಇದೇ ಸಂದರ್ಭದಲ್ಲಿ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ ಅವರು, ನಾಲಿಗೆ ಉದ್ದ ಇರುವುದು ಬಿಜೆಪಿಯವರಿಗೆ, ಈ ಬಿಲ್‌ನಿಂದ ಬಿಜೆಪಿಯವರು ಸಣ್ಣವಾಗಿದ್ದಾರೆ ಎಂದು ವ್ಯಂಗ್ಯವಾಡಿದರು. ಒಟ್ಟಾರೆ ಸಿದ್ದರಾಮಯ್ಯ ಅವರ ನಾಯಕತ್ವದ ಮೇಲೆ ತಮಗೆ ಪೂರ್ಣ ವಿಶ್ವಾಸವಿದ್ದು, ಸದ್ಯಕ್ಕೆ ಸಿಎಂ ಬದಲಾವಣೆಯ ಯಾವುದೇ ಸನ್ನಿವೇಶಗಳಿಲ್ಲ ಎಂದು ಜಮೀರ್ ಅಹ್ಮದ್ ಖಾನ್ ಮೈಸೂರಿನಲ್ಲಿ ಪುನರುಚ್ಚರಿಸಿದ್ದಾರೆ.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಕೇಂದ್ರ ಬಜೆಟ್ ರೈತರ ಪಾಲಿಗೆ ಕಣ್ಣೊರೆಸುವ ತಂತ್ರ ; ಹಳ್ಳಿಕೆರೆಹುಂಡಿ ಭಾಗ್ಯರಾಜ್ ತೀವ್ರ ಆಕ್ರೋಶ

February 2, 2026
ಬೆಂಗಳೂರುಮುಖಪುಟ

ಮೈಕೊರೆಯುವ ಚಳಿಗೆ ರಾಜ್ಯದ ಜನತೆ ಕಂಗಾಲು – ಇಂದಿನಿಂದ ಮೂರು ದಿನ ರಾಜ್ಯದಲ್ಲಿ ಥಂಡಿ ಹೆಚ್ಚಾಗಲಿದೆ ಎಂದ ಹವಾಮಾನ ಇಲಾಖೆ

December 29, 2025
ಮುಖಪುಟಮೈಸೂರು ನಗರ

ಮೈಸೂರು: ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಡಿಸೆಂಬರ್ 11ಕ್ಕೆ ಮೈಸೂರು ಚಲೋ!

December 3, 2025
ಮುಖಪುಟಮೈಸೂರು ನಗರ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹೊಸ ವರ್ಷದ ಸಡಗರ – ಅರಮನೆಯಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಸಕಲ ತಯಾರಿ

December 17, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?