PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಸೀಬರ್ಡ್ ಬಸ್ ಅಗ್ನಿಗಾಹುತಿ, 11ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಜಿಲ್ಲೆ > ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಸೀಬರ್ಡ್ ಬಸ್ ಅಗ್ನಿಗಾಹುತಿ, 11ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನ
ಜಿಲ್ಲೆಮುಖಪುಟ

ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಸೀಬರ್ಡ್ ಬಸ್ ಅಗ್ನಿಗಾಹುತಿ, 11ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನ

Prathinidhi News
Last updated: December 25, 2025 11:56 am
Prathinidhi News
Published December 25, 2025
Share
SHARE

ಚಿತ್ರದುರ್ಗ, ಡಿಸೆಂಬರ್‌ 25, 2025 : ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಬಸ್ ಸಂಪೂರ್ಣವಾಗಿ ಹೊತ್ತಿ ಉರಿದಿದ್ದು, ಹನ್ನೊಂದಕ್ಕೂ ಹೆಚ್ಚು ಪ್ರಯಾಣಿಕರು ದಾರುಣವಾಗಿ ಮೃತಪಟ್ಟಿದ್ದಾರೆ.

ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಸೀಬರ್ಡ್ ಸಂಸ್ಥೆಯ ಸ್ಲೀಪರ್ ಕೋಚ್ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಡಿಕ್ಕಿಯ ರಭಸಕ್ಕೆ ನೋಡನೋಡುತ್ತಿದ್ದಂತೆಯೇ ಬೆಂಕಿ ಹತ್ತಿಕೊಂಡಿದೆ. ಕ್ಷಣಮಾತ್ರದಲ್ಲಿ ಇಡೀ ಬಸ್ ಬೆಂಕಿಯ ಕೆನ್ನಾಲಿಗೆಗೆ ತುತ್ತಾಗಿದ್ದು, ಪ್ರಯಾಣಿಕರು ಹೊರಬರಲಾರದೆ ಒಳಗೇ ಸಿಲುಕಿ ಬೆಂದು ಹೋಗಿದ್ದಾರೆ. ಈ ಭೀಕರ ದೃಶ್ಯದ ವಿಡಿಯೋಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರನ್ನು ಬೆಚ್ಚಿಬೀಳಿಸುವಂತಿವೆ.

ಅಪಘಾತದ ಸಮಯದಲ್ಲಿ ಬಸ್ಸಿನಲ್ಲಿ ಸುಮಾರು 15 ಮಹಿಳೆಯರು ಹಾಗೂ 14 ಪುರುಷರು ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಬೆಂಕಿ ವಿಪರೀತವಾಗಿದ್ದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು ನಾಲ್ಕು ಕಿಲೋಮೀಟರ್‌ಗಳವರೆಗೆ ಸಂಚಾರ ದಟ್ಟಣೆ ಉಂಟಾಗಿತ್ತು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಗೊಂಡವರನ್ನು ತಕ್ಷಣವೇ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿರುವುದರಿಂದ ಸಾವಿನ ಸಂಖ್ಯೆ ಇನ್ನು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಲಾಗಿದೆ.

ಈ ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ಸೂಚಿಸಿದ್ದು, ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದು ಸಂತ್ರಸ್ತರ ನೆರವಿಗೆ ನಿಲ್ಲುವಂತೆ ಸೂಚಿಸಿದ್ದಾರೆ. ರಾಜ್ಯ ಸರ್ಕಾರದ ವತಿಯಿಂದ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಈ ದುರಂತಕ್ಕೆ ಮೃತರಾಗಿ ಸಂತಾಪ ವ್ಯಕ್ತಪಡಿಸಿದ್ದು, ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ 50 ಸಾವಿರ ರೂಪಾಯಿ ನೆರವು ಪ್ರಕಟಿಸಿದ್ದಾರೆ. ಅಪಘಾತದ ಕುರಿತು ತನಿಖೆ ನಡೆಸಿ ಕಾರಣ ಪತ್ತೆಹಚ್ಚುವಂತೆ ಸಿಎಂ ಆದೇಶಿಸಿದ್ದಾರೆ.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರರಾಜಕೀಯ

ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆ : ಮೌನಕ್ಕೆ ಶರಣಾದ ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ

March 2, 2026
ಬೆಂಗಳೂರುಮುಖಪುಟ

ಬೆಂಗಳೂರು : ಖಾಸಗಿ ಶಾಲಾ ಬಸ್​ ಹರಿದು ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು !

February 11, 2026
ಮಂಡ್ಯಮುಖಪುಟರಾಜಕೀಯ

ಮಾಜಿ ಸಿಎಂ ಬಿ.ಎಸ್.ವೈ.ಗೆ ಪೋಕ್ಸೋ ಕೇಸ್ ಸಂಕಷ್ಟ: ಮನೆ ದೇವರ ಮೊರೆ, ಹುಟ್ಟೂರಿನಲ್ಲಿ ವಿಶೇಷ ಪೂಜೆ

November 21, 2025
ಮುಖಪುಟಮೈಸೂರು ನಗರ

ಮೈಸೂರು : ಡಿಸೆಂಬರ್ 6 ರಂದು ಕ್ರೆಡಾಯ್ ಮೈಸೂರು ಘಟಕ ವತಿಯಿಂದ ರೇರಾ ಜಾಗೃತಿ ಕಾರ್ಯಾಗಾರ ಆಯೋಜನೆ

December 4, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?