PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು: ಪ್ರೀತಿಸಿದ ಯುವತಿಯ ಸಂಬಂಧಿಕರಿಂದ ಹಲ್ಲೆ ಆರೋಪ; ಯುವಕ ಆತ್ಮಹತ್ಯೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಕ್ರೈಂ ಸುದ್ದಿಗಳು > ಮೈಸೂರು: ಪ್ರೀತಿಸಿದ ಯುವತಿಯ ಸಂಬಂಧಿಕರಿಂದ ಹಲ್ಲೆ ಆರೋಪ; ಯುವಕ ಆತ್ಮಹತ್ಯೆ
ಕ್ರೈಂ ಸುದ್ದಿಗಳುಮುಖಪುಟಮೈಸೂರು ಗ್ರಾಮಾಂತರ

ಮೈಸೂರು: ಪ್ರೀತಿಸಿದ ಯುವತಿಯ ಸಂಬಂಧಿಕರಿಂದ ಹಲ್ಲೆ ಆರೋಪ; ಯುವಕ ಆತ್ಮಹತ್ಯೆ

Prathinidhi News
Last updated: December 29, 2025 11:51 am
Prathinidhi News
Published December 29, 2025
Share
SHARE

ಟಿ ನರಸೀಪುರ, ಡಿಸೆಂಬರ್‌ 29, 2025 : ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲ್ಲೂಕಿನ ಬಿ. ಸೀಹಳ್ಳಿ ಗ್ರಾಮದಲ್ಲಿ ಮನಕಲಕುವ ಘಟನೆಯೊಂದು ನಡೆದಿದ್ದು, ಪ್ರೀತಿಸುತ್ತಿದ್ದ ಯುವತಿಯ ಸಂಬಂಧಿಕರಿಂದ ಹಲ್ಲೆಗೊಳಗಾಗಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬಿ. ಸೀಹಳ್ಳಿ ಗ್ರಾಮದ ನಿವಾಸಿ 23 ವರ್ಷದ ನಾಗೇಂದ್ರ ಮೃತಪಟ್ಟ ದುರ್ದೈವಿ. ಯುವತಿಯನ್ನು ಪ್ರೀತಿಸುತ್ತಿದ್ದ ಎಂಬ ಕಾರಣಕ್ಕೆ ಆಕೆಯ ಸಂಬಂಧಿಕರು ನಾಗೇಂದ್ರನ ಮೇಲೆ ಹಲ್ಲೆ ನಡೆಸಿದ್ದರು ಎಂದು ಕುಟುಂಬಸ್ಥರು ಗಂಭೀರವಾಗಿ ಆರೋಪಿಸಿದ್ದಾರೆ.

ಹಲ್ಲೆಯಿಂದ ಮನನೊಂದ ಯುವಕ ನಾಗೇಂದ್ರ ತನ್ನ ಮನೆಯ ಹಸುವಿನ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಘಟನೆ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಿಸಿದ್ದು, ಮೃತ ಯುವಕನ ಪೋಷಕರು ಮತ್ತು ಸಂಬಂಧಿಕರು ನಾಗೇಂದ್ರನ ಸಾವಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಯುವತಿಯ ಕುಟುಂಬದ ಸದಸ್ಯರಾದ ಜೈಕುಮಾರ್, ಮಂಜು ಸೇರಿದಂತೆ ಒಟ್ಟು ಐವರು ವ್ಯಕ್ತಿಗಳ ಮೇಲೆ ಬನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು, ಸಾವಿನ ಹಿಂದಿನ ನಿಖರ ಕಾರಣಗಳ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಮೈಸೂರು ಮೃಗಾಲಯದ ಹಿರಿಯ ಸದಸ್ಯ ‘ಯುವರಾಜ’ ಜಿರಾಫೆ ಇನ್ನಿಲ್ಲ: ವಯೋಸಹಜ ಸಾವು

January 29, 2026
ಕ್ರೈಂ ಸುದ್ದಿಗಳುಮುಖಪುಟಮೈಸೂರು ನಗರ

ಮೈಸೂರು: ಅಕ್ರಮ ಮಾದಕ ವಸ್ತು ಜಾಲದ ಮೇಲೆ ಪೊಲೀಸರ ಸರಣಿ ದಾಳಿ – ಐವರ ಬಂಧನ

February 11, 2026
ಮುಖಪುಟಮೈಸೂರು ನಗರ

ಪ್ಲಾಸ್ಟಿಕ್ ಪ್ಯಾಕ್ ತ್ಯಜಿಸಿ ಪೇಪರ್ ಬ್ಯಾಗ್ ಬಳಸಿ ಸಾರ್ವಜನಿಕರಿಗೆ ಅರಿವು ಸಂಸ್ಥೆ ಜಾಗೃತಿ

January 28, 2026
ಕ್ರೀಡೆಮುಖಪುಟಮೈಸೂರು ನಗರ

ಮೈಸೂರು ಪೋರನ ಮಹೋನ್ನತ ಸಾಧನೆ..! ದೇಸಿ ಪ್ರತಿಭೆ ಈಗ OMAN ಟೀಮ್ ಪ್ಲೇಯರ್..!

November 18, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?