PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ನಂಜನಗೂಡಿನಲ್ಲಿ ಸರಣಿ ಕಳ್ಳತನ: ಪೊಲೀಸ್ ಠಾಣೆ ಸಮೀಪವೇ 14 ಅಂಗಡಿಗಳ ಬೀಗ ಮುರಿದ ಖದೀಮರು!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಕ್ರೈಂ ಸುದ್ದಿಗಳು > ನಂಜನಗೂಡಿನಲ್ಲಿ ಸರಣಿ ಕಳ್ಳತನ: ಪೊಲೀಸ್ ಠಾಣೆ ಸಮೀಪವೇ 14 ಅಂಗಡಿಗಳ ಬೀಗ ಮುರಿದ ಖದೀಮರು!
ಕ್ರೈಂ ಸುದ್ದಿಗಳುನಂಜನಗೂಡುಮುಖಪುಟ

ನಂಜನಗೂಡಿನಲ್ಲಿ ಸರಣಿ ಕಳ್ಳತನ: ಪೊಲೀಸ್ ಠಾಣೆ ಸಮೀಪವೇ 14 ಅಂಗಡಿಗಳ ಬೀಗ ಮುರಿದ ಖದೀಮರು!

Prathinidhi News
Last updated: December 31, 2025 11:57 am
Prathinidhi News
Published December 31, 2025
Share
SHARE

ನಂಜನಗೂಡು, ಡಿಸೆಂಬರ್‌ 31, 2025 : ದಕ್ಷಿಣಕಾಶಿ ಎಂದೇ ಪ್ರಸಿದ್ಧಿಯಾದ ನಂಜನಗೂಡು ಪಟ್ಟಣದಲ್ಲಿ ಕಳೆದ ತಡರಾತ್ರಿ ಖದೀಮರು ಅಟ್ಟಹಾಸ ಮೆರೆದಿದ್ದಾರೆ. ಪಟ್ಟಣದ ಪೊಲೀಸ್ ಠಾಣೆಯ ಅತ್ಯಂತ ಸಮೀಪದಲ್ಲೇ ಇರುವ ರಾಷ್ಟ್ರಪತಿ ರಸ್ತೆಯ ಸುಮಾರು 14 ಅಂಗಡಿಗಳ ಬೀಗ ಮುರಿದು ಸರಣಿ ಕಳ್ಳತನ ನಡೆಸುವ ಮೂಲಕ ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದ್ದಾರೆ.

ಡಿಸೆಂಬರ್ 30, 2025ರ ಮಧ್ಯರಾತ್ರಿ ಈ ಘಟನೆ ನಡೆದಿದ್ದು, ಕಳ್ಳರು ವ್ಯವಸ್ಥಿತವಾಗಿ ಒಂದಾದ ಮೇಲೊಂದರಂತೆ ಅಂಗಡಿಗಳ ಬೀಗ ಮುರಿದಿದ್ದಾರೆ. ಪೊಲೀಸ್ ಠಾಣೆಯ ಪಕ್ಕದ ಬಾಯ್ಸ್ ಮಿಡಲ್ ಸ್ಕೂಲ್ ಆವರಣದಲ್ಲಿರುವ ಹಾಲಿನ ಡೈರಿ, ಕೋಳಿ ಮಾರಾಟದ ಅಂಗಡಿಗಳು, 4ನೇ ಕ್ರಾಸ್‌ನ ಅಪ್ಪು ಸ್ಟೋರ್, ಅಕ್ಷಯ ಫುಟ್ ವೇರ್ ಹಾಗೂ 6ನೇ ಕ್ರಾಸ್‌ನಲ್ಲಿರುವ ಅಶ್ವಿನಿ ಬೇಕರಿ ಮತ್ತು ನಂಜುಂಡೇಶ್ವರ ಡಿಟಿಎಚ್ ವೀಡಿಯೋ ಶಾಪ್ ಸೇರಿದಂತೆ ಒಟ್ಟು 14 ಮಳಿಗೆಗಳನ್ನು ಗುರಿಯಾಗಿಸಿಕೊಳ್ಳಲಾಗಿದೆ.

ಹಾಲಿನ ಡೈರಿಯಲ್ಲಿ 2 ಸಾವಿರ ರೂ. ಹಾಗೂ ಕೋಳಿ ಅಂಗಡಿಗಳ ಗಲ್ಲಾ ಪೆಟ್ಟಿಗೆಯಲ್ಲಿದ್ದ ಅಲ್ಪ ಪ್ರಮಾಣದ ನಗದನ್ನು ಕಳ್ಳರು ದೋಚಿದ್ದಾರೆ. ಇನ್ನುಳಿದ ಅಂಗಡಿಗಳಲ್ಲಿ ಕಬ್ಬಿಣದ ಸರಳಿನಿಂದ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಲಾಗಿದೆ.

- ಜಾಹೀರಾತು -

ಸಿಸಿ ಟಿವಿಯಲ್ಲಿ ಸೆರೆಯಾದ ದೃಶ್ಯ:

ಖದೀಮರು ಅಂಗಡಿಯ ಬೀಗ ಮುರಿಯುತ್ತಿರುವ ದೃಶ್ಯಗಳು ಸ್ಥಳೀಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಮುಖಕ್ಕೆ ಬಟ್ಟೆ ಧರಿಸಿದ ವ್ಯಕ್ತಿಯೊಬ್ಬ ಸರಳಿನ ಸಹಾಯದಿಂದ ಬೀಗ ಒಡೆಯುತ್ತಿರುವ ದೃಶ್ಯ ಲಭ್ಯವಾಗಿದ್ದು, ಇದು ತನಿಖೆಗೆ ಪ್ರಮುಖ ಆಧಾರವಾಗಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಭೇಟಿ ನೀಡಿದ ನಂಜನಗೂಡು ಪಟ್ಟಣ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಸಿಸಿ ಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಕಳ್ಳರ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಠಾಣೆಯ ಕೂಗಳತೆಯ ದೂರದಲ್ಲೇ ಸರಣಿ ಕಳ್ಳತನ ನಡೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಪೊಲೀಸರ ಗಸ್ತಿನ ಬಗ್ಗೆ ಸಾರ್ವಜನಿಕರು ಪ್ರಶ್ನೆ ಎತ್ತುತ್ತಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ಗ್ರಾಮಾಂತರ

ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ಕ್ಷೇತ್ರ ಸಿಬ್ಬಂದಿ ವರ್ಗದವರಿಗೆ HPV ಲಸಿಕೆ ಕಾರ್ಯಗಾರ

January 23, 2026
ಮುಖಪುಟಮೈಸೂರು ನಗರ

ಮೈಸೂರು ರೇಸ್ ಕ್ಲಬ್‌ನಲ್ಲಿ ‘ಗ್ಲಾಂಡರ್ಸ್’ ಭೀತಿ: ಎಲ್ಲಾ ಚಟುವಟಿಕೆಗಳು ಸ್ಥಗಿತ; ಮೃಗಾಲಯದಲ್ಲೂ ಕಟ್ಟೆಚ್ಚರ

December 23, 2025
ಕ್ರೈಂ ಸುದ್ದಿಗಳುಮುಖಪುಟಹಾಸನ

ಆಸ್ತಿಗಾಗಿ ದಾಯಾದಿಗಳ ನಡುವೆ ಕಿತ್ತಾಟ : ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿ ಸಾರಿಗೆ ನೌಕರನ ಬರ್ಬರ ಹತ್ಯೆ

February 19, 2026
ಮುಖಪುಟಮೈಸೂರು ಗ್ರಾಮಾಂತರ

ಹೆಚ್ ಡಿ ಕೋಟೆ: ಕಣಿಯನಹುಂಡಿ ಗ್ರಾಮದ ಬಳಿ ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಆತಂಕ

January 29, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?