ಮೈಸೂರು, ಜನವರಿ 1, 2025 : ಹೊಸ ವರ್ಷದ ಮೊದಲ ದಿನದ ಸಂಭ್ರಮದ ಹಿನ್ನೆಲೆಯಲ್ಲಿ ಮೈಸೂರಿನಾದ್ಯಂತ ದೇವಸ್ಥಾನಗಳಿಗೆ ಭಕ್ತ ಸಾಗರವೇ ಹರಿದು ಬರುತ್ತಿದೆ. ಮೈಸೂರಿನ ಪ್ರಸಿದ್ಧ ಶ್ರೀ ಯೋಗಾನರಸಿಂಹಸ್ವಾಮಿ ದೇವಸ್ಥಾನದಲ್ಲಿ ಮುಂಜಾನೆಯಿಂದಲೇ ಜನವೋ ಜನ ಸೇರಿದ್ದು, ಭಕ್ತರು ದೀರ್ಘ ಸರತಿ ಸಾಲಿನಲ್ಲಿ ನಿಂತು ಭಕ್ತಿಯಿಂದ ದೇವರ ದರ್ಶನ ಪಡೆಯುತ್ತಿದ್ದಾರೆ.

ದೇವಸ್ಥಾನದಲ್ಲಿ ಬೆಳಿಗ್ಗೆಯಿಂದಲೇ ಸ್ವಾಮಿಗೆ ವಿವಿಧ ಪೂಜಾ ಕೈಂಕರ್ಯಗಳು ಹಾಗೂ ವಿಶೇಷ ಅಭಿಷೇಕಗಳನ್ನು ನೆರವೇರಿಸಲಾಗುತ್ತಿದೆ. ಈ ವಿಶೇಷ ಸಂದರ್ಭಕ್ಕಾಗಿ ದೇವಸ್ಥಾನದ ವತಿಯಿಂದ ಬರೋಬ್ಬರಿ 2 ಲಕ್ಷ ಲಡ್ಡು ಪ್ರಸಾದವನ್ನು ಸಿದ್ಧಪಡಿಸಲಾಗಿದ್ದು, ಬೆಳಿಗ್ಗೆಯಿಂದ ರಾತ್ರಿಯವರೆಗೂ ಭಕ್ತರಿಗೆ ನಿರಂತರವಾಗಿ ವಿತರಣೆ ಮಾಡಲಾಗುತ್ತಿದೆ. ಇದೇ ವೇಳೆ ಶ್ರೀನಿವಾಸ್ ಅವರು ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ.
